ಅಥವಾ

ಒಟ್ಟು 12 ಕಡೆಗಳಲ್ಲಿ , 6 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸನಂತೆ ತವನಿದ್ಥಿಯ ಬೇಡುವನಲ್ಲ, ಚೋಳನಂತೆ ಹೊನ್ನಮಳೆಯ ಕರೆಸೆಂಬವನಲ್ಲ, ಅಂಜದಿರು ಅಂಜದಿರು ಅವರಂದದವ ನಾನಲ್ಲ. ಎನ್ನ ತಂದೆ, ಕೂಡಲಸಂಗಮದೇವಾ, ಸದ್ಭಕ್ತಿಯನೆ ಕರುಣಿಸೆನಗೆ.
--------------
ಬಸವಣ್ಣ
ಉಂಡೆನುಟ್ಟೆನೆಂಬ ಸಂದೇಹ ನಿನಗೇಕಯ್ಯಾ? ಉಂಬುದೆ ಅಗ್ನಿ? ಉಡುವುದೆ ಪೃಥ್ವಿ? ನೀನೆಂದು ಉಂಡೆ? ನಾನೆಂದು ಕಂಡೆ? ಉಣ್ಣದೆ ಉಡದೆ ಹೊಗೆಯ ಕೈಯಲ್ಲಿ ಸತ್ತೆನೆಂಬ ಅಂಜಿಕೆ ನಿನಗೆ ಬೇಡ, ಅಂಜದಿರು,_ ಗುಹೇಶ್ವರಾ ನಿನಗಾವ ನಾಚಿಕೆಯೂ ಇಲ್ಲ.
--------------
ಅಲ್ಲಮಪ್ರಭುದೇವರು
ಇಂತೀ ನಾನಾ ಮುಖದಲ್ಲಿ ಸ್ತೋತ್ರವ ಮಾಡಿ ಅಳುವ ಶಿಷ್ಯನಂ ಕಂಡು ಆ ಸದ್ಗುರುಸ್ವಾಮಿ ಆ ಶಿಷ್ಯನ ಹಣೆಯ ಹಿಡಿದೆತ್ತಿ ಕಂಬನಿಯಂ ತೊಡದು ಅಂಜದಿರು ಅಂಜದಿರು ನಿನ್ನ ಭವರೋಗಂಗಳಂ ಮಾಣಿಸುವೆನೆಂದು ಅಭಯಹಸ್ತವಂ ಕೊಟ್ಟು ಸಂತೈಸಿ ತಮ್ಮ ಕರುಣಪ್ರಸಾದವನಿತ್ತು ಸಲಹಿದನಯ್ಯ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಗೈಯ ಲಿಂಗವ ಕಂಗಳು ತುಂಬಿ ನೋಡಿ ಮನ ಹಾರೈಸಿದಲ್ಲಿ ಅಂಗೇಂದ್ರಿಯಂಗಳೆಲ್ಲ ಲಿಂಗೇಂದ್ರಿಯಂಗಳಾದವು. ಅಂಜದಿರು ಮನವೇ, ಲಿಂಗವು ನಿನಗೆ ದೂರನೆಂದು. ಮನೋಮಧ್ಯದೊಳಿಪ್ಪ, ಅಂಗದ ಕಂಗಳಲಿಪ್ಪ, ಭಾವದ ಪ್ರಾಣದಲ್ಲಿಪ್ಪ. ಅಂಗಪ್ರಾಣಭಾವ ಸರ್ವಾಂಗಲಿಂಗವಾದ ಬಳಿಕ, ಲಿಂಗಮಧ್ಯಪ್ರಾಣ, ಪ್ರಾಣಮಧ್ಯಲಿಂಗ. ಇದು ಕಾರಣ ಉತ್ಪತ್ತಿಸ್ಥಿತಿಲಯವುಂಟೆಂದು ಅಂಜದಿರು. ಅಂಜಿಕೆ ಇಲ್ಲ, ಅಳುಕಿಲ್ಲ, ಬಂದುದೇ ಲಿಂಗದ ಲೀಲೆ, ಇದ್ದುದೇ ಲಿಂಗದಾನಂದ, ಭಾವಲೀಯವಾದುದೇ ಲಿಂಗನಿರವಯವು. ಇದು ಸತ್ಯ, ಶಿವ ಬಲ್ಲ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಯ್ಯಾ, ನಿನ್ನಾಳಾಗಿ ಆರೆನಯ್ಯಾ ಕೆಲಬರ ಬೋಸರಿಸಲು. ಅಯ್ಯಾ, ನಿನ್ನಾಳಾಗಿ ಆರೆನಯ್ಯಾ ಕೆಲಬರ ಸ್ತುತಿಯಿಸಲು. ಅಯ್ಯಾ, ನೀ ನಿತ್ಯನೆಂದು ಮರೆವೊಕ್ಕಡೆ ಸೀಯದಂತಿಪ್ಪರೆ? ಶಿವನೆ ನಿನ್ನ ಕಾಮ್ಯಾರ್ಥವ ಬೇಡಿ ಬಾಧೆಬಡಿಸೆ. ನಿನಗೇನುಂಟಯ್ಯಾ, ನೀನು ನಿಃಕಾಮಿ. ಅಂಜದಿರು, ಫಲಪದವ ಬೇಡೆ; ನೀನಿಹ ಲೋಕ ನಿನಗಿರ. ಕಾಡದೆ ನಿನ್ನವರೊಳಗೆ ಕೂಡಿರುವ ಪದವ ಕರುಣಿಸಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನ
--------------
ಸಿದ್ಧರಾಮೇಶ್ವರ
ಕಾಲ ಕಾಮನ ಗೆಲುವುದಕ್ಕೆ ಉಪಾಯವಿದೇನೆಂದು ಆಲೋಚನೆಯ ಮಾಡುವೆಯ ಮನವೆ ? ನರಿ ನಾಯ ಜಗಳಕ್ಕೆ ಆನೆಯ ಪವುಜನದಕಿಕ್ಕುವರೆ ಮನವೆ ? ಸುಜ್ಞಾನವೆಂಬ ಆನೆಯನೇರಿ ಅಜ್ಞಾನವೆಂಬ ನಾಯಿಗಳಿಗೆ ಅಂಜದಿರು ಮನವೆ, ಅಳುಕದಿರು ಮನವೆ. ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಹಲವು ಕೊಂಬಿಂಗೆ ಹಾಯಲುಬೇಡ, ಬರುಕಾಯಕ್ಕೆ ನೀಡಲುಬೇಡ, ಲೋಗರಿಗೆ ಕೊಟ್ಟು ಭ್ರಮಿತನಾಗಿರಬೇಡ. ಆಚಾರವೆಂಬುದು ಹಾವಸೆಗಲ್ಲು, ಭಾವತಪ್ಪಿದ ಬಳಿಕ ಏಗೈದಡಾಗದು. ಅಂಜದಿರು, ಅಳುಕದಿರು, ಪರದೈವಕ್ಕೆರಗದಿರು, ಕೂಡಲಸಂಗಯ್ಯನ ಕೈಯಲು ಈಸುವುದೆನ್ನ ಭಾರ.
--------------
ಬಸವಣ್ಣ
ಅಂಜದಿರು ಅಳುಕದಿರು, ಅಂಜದಿರು ಅಳುಕದಿರು, ಕುಂದದಿರು ಕುಸಿಯದಿರು. ಏನೊ ಎಂತೊ ಎಂದು ಚಿಂತಿಸದಿರು, ನಿನ್ನ ನಾನೇನುವನೂ ಬೇಡೆ, ಕೂಡಲಸಂಗಮದೇವಾ.
--------------
ಬಸವಣ್ಣ
-->