ಅಥವಾ

ಒಟ್ಟು 16 ಕಡೆಗಳಲ್ಲಿ , 10 ವಚನಕಾರರು , 16 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮುಕಗೆ ದುರ್ಜನಗೆ ಕಪಟಿಗೆ ಹೇಮಚೋರಗೆ ಕಾರುಕ ಸಮ್ಮಗಾರಗೆ ಆವ ಭಾವದ ವ್ರತವ ಮಾಡಲಿಕ್ಕೆ, ಅವ ಭಾವಿಸಿ ನಡೆಯಬಲ್ಲನೆ? ಕಾಗೆಗೆ ರಸಾನ್ನ ಮುಂದಿರಲಿಕೆ, ಹರಿವ ಕೀಟಕಂಗೆ ಸರಿವುದಲ್ಲದೆ ಮತ್ತೆ ಅದು ಸವಿಯಸಾರವ ಬಲ್ಲುದೆ? ಇಂತೀ ಇವು ತಮ್ಮ ಜಾತಿಯ ಲಕ್ಷಣವ ಕೊಂದಡೂ ಬಿಡವಾಗಿ, ವ್ರತಾಚಾರವ ಸಂಬಂದ್ಥಿಸುವಲ್ಲಿ ಶರಣರೆಲ್ಲರ ಕೂಡಿ, ಈ ಗುಣ ಅಹುದು ಅಲ್ಲ ಎಂದು ಹೇಳಿ, ಜಾತಿವರ್ಗದ ಗುಣವ ನೀಕರಿಸಿ ಬಿಡಿಸಿ, ಸುಜಾತಿಯ ಅರಸಿನ ಪಟ್ಟವಂ ಕಟ್ಟಿ ಶರಣರೆಲ್ಲರು ನಿಹಿತಾಚಾರದಲ್ಲಿ ಸಹಭೋಜನವಂ ಮಾಡಿ ಇಂತೀ ಗುಣನಿಹಿತವ್ರತ ಅಜಾತನ ಒಲುಮೆ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ನಿಹಿತದ ಶೀಲದ ನೇಮ.
--------------
ಅಕ್ಕಮ್ಮ
ಜ್ಞಾನಿ ತಾನಾದಡೆ ಮಾನವರ ಗುಣವೇನಾದಡೂ ಆಗಲಿ. ಭಾನುತೇಜಕ್ಕೆ ನಾನಾಗುಣವೆಲ್ಲವೂ ಸರಿ. ಬೀಸುವ ವಾಯುವಿಂಗೆ ಸುಗುಣ ದುರ್ಗುಣವಿಲ್ಲ. ಇದು ಅಜಾತನ ಒಲುಮೆ. ಮಿಕ್ಕಿನ ಮಾತಿನ ಮಕ್ಕಳಿಗಿಲ್ಲಯೆಂದೆ, ಜಗದೀಶನ ಒಲುಮೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಅಜಲೋಕದೊಳಗಿಪ್ಪ ಬಹುಪರಿಯ ಕುಸುಮಕ್ಕೆ ಬಂದು ಕರಂಗಳು ಬಂದು ಪೀಡಿಸುತ್ತಾ ಬಂಡುಂಬ ತುಂಬಿಯನು ಇಂಬಪ್ಪ ಕುಸುಮವನು ಸಂಭ್ರಮ ನುಂಗಿತಾ ಜ್ಯೋತಿ ಬಂದು ಜ್ಯೋತಿಯನು ಸೂಕ್ಷ ್ಮ ಸಿದ್ಥ್ಧಿಯನು ಹಲವೆನಿಸಿ ರೀತಿಯಾದುದು ದೆಸೆಯ ಪ್ರಬಲಕಾಗಿ ಅಜಾತನ ರೀತಿವಿಡಿದವರೆಲ್ಲಾ ನಿತ್ಯರಯ್ಯಾ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಕೂಟಗೆಯ ಕೂಳನುಣ್ಣಬಂದವರೆಲ್ಲರೂ ಅಜಾತನ ನಿಲವ ಬಲ್ಲರೆ ? ಬೇಟದ ಕಣ್ಣಿನವರೆಲ್ಲರೂ ಸಕಳೇಶನ ಬಲ್ಲರೆ ? ಈಷಣತ್ರಯವ ಕೂಡುವರೆಲ್ಲರೂ ಪರದೇಶಿಗನ ಕೂಡಬಲ್ಲರೆ ? ಆಶೆಯೆಂಬ ಕೊಳದಲ್ಲಿದ್ದು, ನಿರಾಶೆಯ ನಿರ್ನಾಮವ ಬಲ್ಲರೆ ? ದೋಷದೂರ ನಿರ್ಜಾತನು ನೀನೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಮಾತಿನ ಹಂಗಿಲ್ಲದವಳಾದೆ ನಾನು. ಅಜಾತನ ಒಲುಮೆಯಿಲ್ಲದವಳಾದೆ ನಾನು. ಪ್ರಣವದ ಹಂಗಿಲ್ಲದವಳಾದೆ ನಾನು. ಪ್ರಸಾದದ ಕುರುಹಿಲ್ಲದವಳಾದೆ ನಾನು. ಪ್ರಯಾಣದ ಗತಿಯನಳಿದು ಪರಂಜ್ಯೋತಿ ವಸ್ತುವ ಕಂಡು ನಾನು ಬದುಕಿದೆನಯ್ಯ ಸಂಗಯ್ಯ.
--------------
ನೀಲಮ್ಮ
ಪಾರ್ವತಿಯು ಪರಶಿವನ ಸತಿಯೆಂಬ ಶಿವದ್ರೋಹಿಗಳು ನೀವು ಕೇಳಿರೆ. ಬೆನಕನು ಪರಶಿವನ ಮಗನೆಂಬ ಪಾತಕ ದುಃಖಿಗಳು ನೀವು ಕೇಳಿರೆ. ಸ್ವಾಮಿ ಕಾರ್ತಿಕೇಯನು ನಮ್ಮ ಹರಲಿಂಗನ ಮಗನೆಂಬ ಲಿಂಗದ್ರೋಹಿಗಳು ನೀವು ಕೇಳಿರೆ. ಭೈರವನು ಭಯಂಕರಹರನ ಮಗನೆಂಬ ಭವಹರಗುರುದ್ರೋಹಿಗಳು ನೀವು ಕೇಳಿರೆ. ಅಜಾತನ ಚರಿತ್ರ ಪವಿತ್ರ. ನಮ್ಮ ಗುಹೇಶ್ವರಲಿಂಗಕ್ಕೆ ಪ್ರಸಾದವ ಸಲಿಸಿದಾತ ಪೂರ್ವಾಚಾರಿ ಸಂಗನಬಸವಣ್ಣನ ಮಗನಾಗಿ, ಆದಿಯ ಲಿಂಗ ಅನಾದಿಯ ಶರಣ ಗುರುವಿನ ಗುರು ಪರಮಗುರುವರ[ನ] ತೋರಿದೆನಯ್ಯಾ ಸಿದ್ಧರಾಮಯ್ಯ ಚೆನ್ನಬಸವಣ್ಣನು
--------------
ಅಲ್ಲಮಪ್ರಭುದೇವರು
ಕೈದಿಲ್ಲದವಂಗೆ ಕಾಳಗವುಂಟೆ? ಆತ್ಮನಿಲ್ಲದ ಘಟಕ್ಕೆ ಚೇತನವುಂಟೆ? ಅಜಾತನ ನೀತಿಯನರಿಯದವಂಗೆ ನಿರ್ಧರದ ಜ್ಯೋತಿರ್ಮಯವ ಬಲ್ಲನೆ? ಇಷ್ಟವನರಿಯದವನ ಮಾತಿನ ನೀತಿ ಮಡಕೆಯ ತೂತಿನ ಬೈರೆಯ ನೀರು ನಾರಾಯಣಪ್ರಿಯ ರಾಮನಾಥಾ.
--------------
ಗುಪ್ತ ಮಂಚಣ್ಣ
ಮಾತಿನ ಹಂಗೇತಕ್ಕೆ, ಮನವೇಕಾಂತದಲ್ಲಿ ನಿಂದ ಬಳಿಕ, ಬಸವಯ್ಯಾ ? ಅಜಾತನ ಒಲುಮೆ ಏತಕ್ಕೆ, ಅರ್ಪಿತದ ಹಂಗಹರಿದಬಳಿಕ, ಬಸವಯ್ಯಾ ? ಎನಗೆ ಸಮಯಾಚಾರವಿನ್ನೇಕೆ, ಭಕ್ತಿಭಾವ ನಷ್ಟವಾದಬಳಿಕ, ಬಸವಯ್ಯಾ ? ಮಾತಿನ ಸೂತಕ ಹಿಂಗಿ ಮನೋಲೀಯವಾಯಿತ್ತಯ್ಯಾ, ಸಂಗಯ್ಯಾ, ಬಸವ ಕುರುಹಿಲ್ಲದಮೂರ್ತಿಯಾದ ಕಾರಣ.
--------------
ನೀಲಮ್ಮ
ಶ್ರೀಗುರುವೆ ಬಸವಯ್ಯ, ಶ್ರೀಚರವೆ ಬಸವಯ್ಯ. ಶ್ರೀಮಹಾ ಇಷ್ಟಲಿಂಗ ಬಸವಣ್ಣನು. ಆರೈದು ಎನ್ನುವನು ಓರಂತೆ ಸಲಹಿದಾ ಕಾರುಣ್ಯಸುರತರುವೆ ಬಸವಲಿಂಗ ಭಾವಿಸಿ ಎನ್ನುವನು ಅಜಾತನ ಮಾಡಿದಾತ ಬಸವಣ್ಣ, ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ.
--------------
ಸಿದ್ಧರಾಮೇಶ್ವರ
ಮಹಾರ್ಣವವುರಿದು ಬೇವಲ್ಲಿ, ಕರಗದ ಜಲಕ್ಕೆ ಹೊಡೆಗೆಡೆವುದೆ ? ಮಹಾಪಾತಕಕ್ಕೆ ಒಳಗಾದಂಗ, ಮಾತಿನ ಬಣಬೆಯಲ್ಲಿ ನೀತಿಯಾಗಿ ನುಡಿದಡೆ, ಅಜಾತನ ಶರಣರು ಒಪ್ಪುವರೆ ? ಅದು ನಿಹಿತವಲ್ಲ. ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವು ಇಂತೀ ಕಾಕರನೊಲ್ಲ
--------------
ಶಿವಲೆಂಕ ಮಂಚಣ್ಣ
ಜಾತಿ ಜಾತಿಯ ಕೊಂದು, ನಿಹಿತ ಅನಿಹಿತವ ಕೆಡಿಸಿ, ಜಾತ ಅಜಾತನ ಕಂಡು ನಿಹಿತವಾಗಿರಿ, ಅರ್ಕೇಶ್ವರಲಿಂಗವನರಿವುದಕ್ಕೆ.
--------------
ಮಧುವಯ್ಯ
ಮಾತನಳಿವ ಮಾತು ಬಂದಡೆ, ಹೋತಿನಂತೆ ಹೋರಲೇಕೆ ? ಮಾತಿಂಗೆ ಮಣಿದಡೆ, ಅಜಾತನ ಒಲುಮೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಲೆಕ್ಕದಲ್ಲಿ ಲೇಪಿತವಾದವರಿಗೇಕೆ ಅಜಾತನ ಸುದ್ದಿ ? ಪ್ರಖ್ಯಾತದಲ್ಲಿ ನೀತಿಯ ಹೇಳಿಹೆನೆಂದು ವೇಷದಲ್ಲಿ ಸುಳಿವರಿಗೇಕೆ ಪರದೋಷನಾಶನ ಸುದ್ದಿ ? ಇವರೆಲ್ಲರೂ ಈಶನ ಭಾಷೆಯಲ್ಲಿ ಸಿಕ್ಕಿ, ಭೂಭಾರಕರಾದರು, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಕಲಿಯುಗದಲ್ಲಿ ಹುಟ್ಟಿ ಆ ಕಲಿಯುಗದಲ್ಲಿ ಬೆಳೆದೆನಯ್ಯ. ಕೃತಯುಗದಲ್ಲಿ ಹುಟ್ಟಿ ಆ ಕೃತಯುಗದಲ್ಲಿ ಬೆಳೆದೆನಯ್ಯ. ದ್ವಾಪರದಲ್ಲಿ ಹುಟ್ಟಿ ಆ ದ್ವಾಪರದಲ್ಲಿಯೆ ಬೆಳೆದೆನಯ್ಯ. ತ್ರೇತಾಯುಗದಲ್ಲಿ ಹುಟ್ಟಿ ಆ ತ್ರೇತಾಯುಗದಲ್ಲಿಯೆ ಬೆಳೆದೆನಯ್ಯ. ಎನಗೆ ಪ್ರಾಣವಿಲ್ಲ ಎನಗೆ ಕಾಯವಿಲ್ಲ. ನಾನೇತರಲ್ಲಿಯೂ ಹೊಂದಿದವಳಲ್ಲ. ಅಜಾತನ ಕಲ್ಪಿತ ಸಂಬಂಧವಾಗಲು ಆನು ನಿಮ್ಮೈಕ್ಯದಲ್ಲಿ ನಿಂದೆನಯ್ಯ ಸಂಗಯ್ಯ.
--------------
ನೀಲಮ್ಮ
ಇರಿವ ಕೈದಿಂಗೆ ದಯ ಧರ್ಮದ ಮೊನೆ ಉಂಟೆ? ಕಾಳೋರಗನ ದಾಡೆಯಲ್ಲಿ ಅಮೃತದ ಸುಧೆಯುಂಟೆ? ಕೂಟವ ಕೂಡಿ ಸಮಯ ನೊಂದಲ್ಲಿ ಅಜಾತನ ಬಲ್ಲರೆ? ಎನಗೆ ನಿಮ್ಮೊಳಗಿನ್ನೇತರ ಮಾತು? ವೇಷಧಾರಿಗಳಲ್ಲಿ ನಿಮ್ಮ ಕೂಟಕ್ಕೆ ಹೊರಗು ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲಾ ಎಂದೆ.
--------------
ಘಟ್ಟಿವಾಳಯ್ಯ
ಇನ್ನಷ್ಟು ... -->