ಅಥವಾ

ಒಟ್ಟು 12 ಕಡೆಗಳಲ್ಲಿ , 1 ವಚನಕಾರರು , 12 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಥ ಬ್ರಹ್ಮಾಂಡವ ನಾಲವತ್ತೇಳು ಲಕ್ಷದ ಮೇಲೆ ಸಾವಿರದಾ ನಾನೂರಾ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ವೇದಪಾಠಕವೆಂಬ ಭುವನ. ಆ ಭುವನದೊಳು ವೇದನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರ ಮೂವತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಏಳುನೂರ ಮೂವತ್ತುಕೋಟಿ ಇಂದ್ರ-ಬ್ರಹ್ಮ-ನಾರಾಯಣ-ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಏಳುಸಾವಿರದ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮೋಚಿಕಾಯೆಂಬ ಭುವನ, ಆ ಭುವನದೊಳು ಮೋಹಸಂಹಾರನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮೂವತ್ತೈದುಕೋಟಿ ಇಂದ್ರಚಂದ್ರಾದಿತ್ಯರು, ಮೂವತ್ತೈದುಕೋಟಿ ಬ್ರಹ್ಮನಾರಾಯಣ ರುದ್ರರು, ಮೂವತ್ತೈದುಕೋಟಿ ವೇದಪುರುಷರು ಮುನೀಂದ್ರರು, ನಾಲ್ವತ್ತುಕೋಟಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಹದಿನೇಳುಸಾವಿರದ ನೂರಾ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸೂಕ್ಷ್ಮವೆಂಬ ಭುವನ. ಆ ಭುವನದೊಳು ಶೂನ್ಯಕಾಯನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಬತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರು, ಎಂಬತ್ತೈದುಕೋಟಿ ಇಂದ್ರ ಚಂದ್ರಾದಿತ್ಯರು, ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರವತ್ತೆಂಟು ಸಾವಿರದ ಆರುನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ವೈಷ್ಣವವೆಂಬ ಭುವನ. ಆ ಭುವನದೊಳು ವೈಷ್ಣವೇಶ್ವರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ನಲವತ್ತುಕೋಟಿ ಮುನೀಂದ್ರರು ವೇದಪುರುಷರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ಮುನ್ನೂರಾ ನಲವತ್ತುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತೇಳುಸಾವಿರದ ಮುನ್ನೂರಾ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮನೋನ್ಮನಿಯೆಂಬ ಭುವನ. ಆ ಭುವನದೊಳು ಮನೋನ್ಮನಿಜ್ಯೋತಿಯೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾ ಎಂಬತ್ತೈದುಕೋಟಿ ನಾರಾಯಣ ರುದ್ರ ಬ್ರಹ್ಮರು, ಇಂದ್ರಚಂದ್ರಾದಿತ್ಯರು, ವೇದಪುರುಷರು, ಮುನೀಂದ್ರರು, ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಐವತ್ತೇಳುಸಾವಿರದ ಐನೂರಾ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭವ್ಯವೆಂಬ ಭುವನ. ಆ ಭುವನದೊಳು ನೀಲಲೋಹಿತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ಎಂಬತ್ತೈದುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು. ಇನ್ನೂರಾ ಎಂಬತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ನಾಲ್ವತ್ತೇಳುಸಾವಿರದಾ ನಾನೂರಾ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಶಿಖೇದವೆಂಬ ಭುವನ. ಆ ಭುವನದೊಳು ಅನಂತವಿಷ್ಣುಸಂಹಾರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ಮೂವತ್ತೈದುಕೋಟಿ ದೇವರ್ಕಳು ವೇದಪುರುಷರು ಮುನೀಂದ್ರರು,ಇಂದ್ರಚಂದ್ರಾದಿತ್ಯರು, ಇನ್ನೂರಾಮೂವತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತೇಳುಲಕ್ಷದ ಮೇಲೆ ಸಾವಿರದ ಮುನ್ನೂರಾ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಗ್ರಸನವೆಂಬ ಭುವನ. ಆ ಭುವನದೊಳು ಸರ್ವಗ್ರಾಸನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರೆಂಬತ್ತುಕೋಟಿ ದೇವರ್ಕಳು ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರಿಹರು ನೋಡಾ. ಆರುನೂರೆಂಬತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಏಳು ಲಕ್ಷದ ಮೇಲೆ ಸಾವಿರದ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮಹಾಬಲವೆಂಬ ಭುವನ. ಆ ಭುವನದೊಳು ಮಹಾಕಾಲನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರಮೂವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ. ನೂರಾಮೂವತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಹದಿನೇಳು ಲಕ್ಷದ ಮೇಲೆ ಸಾವಿರದ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ತಸ್ಕರವೆಂಬ ಭುವನ ಆ ಭುವನದೊಳು ಗೋಕರ್ಣನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐನೂರೆಂಬತ್ತುಕೋಟಿ ವೇದಪುರುಷರು ಮನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ಐನೂರೆಂಬತ್ತುಕೋಟಿ ನಾರಾಯಣ-ಬ್ರಹ್ಮರು-ರುದ್ರಾದಿಗಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತೇಳುಸಾವಿರದ ಒಂಬೈನೂರಾ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭೀಮೇಶ್ವರವೆಂಬ ಭುವನ. ಆ ಭುವನದೊಳು ಭೀಮನಾಥನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರೆಂಬತ್ತೈದುಕೋಟಿ ಬ್ರಹ್ಮ-ನಾರಾಯಣ-ರುದ್ರಾದಿಗಳಿಹರು ನೋಡಾ. ನಾನುರೆಂಬತ್ತೈದುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೇಳುಸಾವಿರದ ಇನ್ನೂರ ಅರವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ತ್ರಿಮೂರ್ತಿಯೆಂಬ ಭುವನ. ಆ ಭುವನದೊಳು ತ್ರಿಪುರಾಂತಕನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾಮೂವತ್ತೈದುಕೋಟಿ ಬ್ರಹ್ಮ ನಾರಾಯಣ ರುದ್ರರು, ನೂರಾಮೂವತ್ತೈದುಕೋಟಿ ಇಂದ್ರಚಂದ್ರಾದಿತ್ಯರು, ನೂರಾಮೂವತ್ತೈದುಕೋಟಿ ವೇದಪುರುಷರು ಮುನೀಂದ್ರರು, ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
-->