ಅಥವಾ

ಒಟ್ಟು 14 ಕಡೆಗಳಲ್ಲಿ , 3 ವಚನಕಾರರು , 14 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಥ ಬ್ರಹ್ಮಾಂಡವ ಎಪ್ಪತ್ತೇಳುಲಕ್ಷದ ಮೇಲೆ ಸಾವಿರದೇಳುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಪಾಶಹಸ್ತವೆಂಬ ಭುವನ. ಆ ಭುವನದೊಳು ಗಜಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಎಂಬತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಎಂಟುನೂರಾ ಎಂಬತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತೇಳುಸಾವಿರದಾ ಎಂಟುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ದ್ವಿರಂಡವೆಂಬ ಭುವನ. ಆ ಭುವನದೊಳು ದ್ವಿರಂಡಬ್ಥಿನ್ನನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರಮೂವತ್ತೈದುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅರುವತ್ತೆಂಟು ಸಾವಿರ ವಚನಂಗಳ ಹಾಡಿ ಹಾಡಿ ಸೋತಿತೆನ್ನ ಮನ ನೋಡಯ್ಯಾ. ಹಾಡುವುದೊಂದೆ ವಚನ, ನೋಡುವುದೊಂದೆ ವಚನ : ವಿಷಯ ಬಿಟ್ಟು ನಿರ್ವಿಷಯನಾಗುವುದೊಂದೆ ವಚನ, ಕಪಿಲಸಿದ್ಧಮಲ್ಲೇಶನಲ್ಲಿ.
--------------
ಸಿದ್ಧರಾಮೇಶ್ವರ
ಅಂಥ ಬ್ರಹ್ಮಾಂಡವ ಎಪ್ಪತ್ತೇಳು ಸಾವಿರದಾ ಏಳುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಗಾಂಧರ್ವವೆಂಬ ಭುವನ. ಆ ಭುವನದೊಳು ಉಗ್ರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಎಂಬತ್ತೈದುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳು ಇಂದ್ರಚಂದ್ರಾದಿತ್ಯರಿಹರು ನೋಡಾ. ಮುನ್ನೂರ ಎಂಬತ್ತೈದು ಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರುವತ್ತೇಳು ಲಕ್ಷದ ಮೇಲೆ ಸಾವಿರದಾ ಆರುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ವಾಯುವೇಗವೆಂಬ ಭುವನ. ಆ ಭುವನದೊಳು ಭೂತನಾಥನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಮೂವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಎಂಟುನೂರಾ ಮೂವತ್ತುಕೋಟಿ ಇಂದ್ರಚಂದ್ರಾದಿತ್ಯರು, ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಟುಕೋಟಿಯ ಮೇಲೆ ಎರಡುಸಾವಿರದಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ತ್ರಿದಶಾಧಿಪವೆಂಬ ಭುವನ. ಆ ಭುವನದೊಳು ಅಘೋರವೀರನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಸಾವಿರಕೋಟಿಯ ಮೇಲೆ ಎಪ್ಪತ್ತುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು. ಸಾವಿರಕೋಟಿಯ ಮೇಲೆ ಎಪ್ಪತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಶ್ರೀಗುರುವಿನ ಶ್ರೀಚರಣದಲ್ಲಿ ಅರುವತ್ತೆಂಟು ತೀರ್ಥಗಳು ನೆಲೆಸಿಪ್ಪವಾಗಿ ಎಲ್ಲಾ ತೀರ್ಥಗಳಿಗೆಯೂ ಗುರುಪಾದತೀರ್ಥವೆ ಅಧಿಕ ನೋಡಾ. ಗುರುಕರುಣದಿಂದ ದೀಯತೇ ಎಂಬ ಸುಜ್ಞಾನವ ಹಡದು ಗುರುಪಾದೋದಕದಿಂದ ಕ್ಷೀಯತೇ ಎಂದು ಮಲತ್ರಯವ ಕ್ಷಯವ ಮಾಡುವುದು. ಶೋಷಣಂ ಪಾಪಪಂಕಸ್ಯ ದೀಪನಂ ಜ್ಞಾನ ತೇಜಸಃ ಗುರುಪಾದೋದಕಂ ಪೀತ್ವಾ ಭವೇತ್ ಸಂಸಾರನಾಶನಂ ಇಂತೆಂದುದಾಗಿ, ಗುರುಕರುಣಾಮೃತರಸಪಾದೋದಕದಲ್ಲಿ ಸುಜ್ಞಾನಾನಂದ ರಸಮಯನಾಗಿ ಬೆರಸಿ ಬೇರಿಲ್ಲದಿರ್ದೆನಯ್ಯಾ ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಅಂಥ ಬ್ರಹ್ಮಾಂಡವ ಎಂಬತ್ತೇಳು ಲಕ್ಷದ ಮೇಲೆ ಸಾವಿರದ ಎಂಟುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಕ್ಷರದೃಷ್ಟಿಯೆಂಬ ಭುವನ. ಆ ಭುವನದೊಳು ಅಷ್ಟಮೂರ್ತಿಯೆ ಪಾದಂಗಳಾಗಿಹ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಮೂವತ್ತುಕೋಟಿ ನಾರಾಯಣ ರುದ್ರ ಬ್ರಹ್ಮೇಂದ್ರಾದಿಗಳಿಹರು. ಒಂಬತ್ತುನೂರಾ ಮೂವತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರವತ್ತೇಳು ಸಾವಿರದ ಆರುನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಕಾಮಾರಿಯೆಂಬ ಭುವನ. ಆ ಭುವನದೊಳು ಜ್ವಾಲಾಮುಖನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಮೂವತ್ತೈದುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು ನೋಡಾ. ಮುನ್ನೂರಾ ಮೂವತ್ತೈದುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಲ್ಲಯ್ಯಗಳ ವಚನ ಎರಡೆಂಬತ್ತು ಕೋಟಿ. ಅಪ್ಪಯ್ಯಗಳ ವಚನ ನಾಲ್ಕು ಲಕ್ಷದ ಮೂವತ್ತಾರು ಸಾಸಿರ. ಎಮ್ಮಯ್ಯಗಳ ವಚನ ವಚನಕ್ಕೊಂದು. ನೀಲಮ್ಮನ ವಚನ ಲಕ್ಷದ ಹನ್ನೊಂದು ಸಾಸಿರ. ಗಂಗಾಂಬಿಕೆಯ ವಚನ ಲಕ್ಷದ ಎಂಟು ಸಾಸಿರ. ಎಮ್ಮಕ್ಕ ನಾಗಾಯಿಯ ವಚನ ಮೂರುಲಕ್ಷದ ತೊಂಬತ್ತಾರು ಸಾಸಿರ. ಮಡಿವಾಳಣ್ಣನ ವಚನ ಮೂರು ಕೋಟಿಮುನ್ನೂರು. ಹಡಪದಯ್ಯಗಳ ವಚನ ಹನ್ನೊಂದು ಸಾಸಿರ. ಮರುಳಸಿದ್ಧನ ವಚನ ಅರುವತ್ತೆಂಟು ಸಾಸಿರ. ಇಂತಪ್ಪ ವಚನದ ರಚನೆಯ ಬಿಟ್ಟು, ಹುಡಿಮಣ್ಣ ಹೊಯ್ಯದೆ ಮಾಬನೆ, ಕುತ್ಸಿ ಕಾವ್ಯಾಲಂಕಾರ ನೋಡುವರ ನೋಡಿ, ಮಹಾದೇವ ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಅಂಥ ಬ್ರಹ್ಮಾಂಡವ ಐವತ್ತೇಳುಲಕ್ಷದ ಮೇಲೆ ಸಾವಿರದಾ ಐನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸೌಮ್ಯದೇಹವೆಂಬ ಭುವನ. ಆ ಭುವನದೊಳು ಪ್ರಳಯಕಾಲನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರೆಂಬತ್ತು ಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಏಳುನೂರೆಂಬತ್ತು ಕೋಟಿ ಇಂದ್ರ-ಬ್ರಹ್ಮ-ನಾರಾಯಣ ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತುಕೋಟಿಯ ಮೇಲೆ ಮೂರುಸಾವಿರದಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ರುದ್ರವೆಂಬ ಭುವನ. ಆ ಭುವನದೊಳು ಅನಂತಲೋಚನನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಸಾವಿರಕೋಟಿಯ ಮೇಲೆ ಇಪ್ಪತ್ನಾಲ್ಕುನೂರಾ ಅರುವತ್ತುಕೋಟಿ ರುದ್ರ ಬ್ರಹ್ಮ ನಾರಾಯಣ ಇಂದ್ರರಿಹರು. ಸಾವಿರಕೋಟಿಯ ಮೇಲೆ ಇಪ್ಪತ್ತುನಾಲ್ಕುನೂರಾ ಅರುವತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತೇಳುಲಕ್ಷದ ಮೇಲೆ ಸಾವಿರದಿನ್ನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ತ್ರಿದಶೇಶ್ವರವೆಂಬ ಭುವನ. ಆ ಭುವನದೊಳು ಶತಾಕ್ಷನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರಾ ಮೂವತ್ತುಕೋಟಿ ನಾರಾಯಣ ರುದ್ರ ಬ್ರಹ್ಮಾದಿಗಳಿಹರು ನೋಡಾ. ಆರುನೂರಾ ಮೂವತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತೇಳು ಲಕ್ಷದ ಮೇಲೆ ಸಾವಿರದ ಒಂಬೈನೂರಾ ಅರುವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಕ್ಷಯಾಂತಕವೆಂಬ ಭುವನ. ಆ ಭುವನದೊಳು ವಿಶ್ವೇಶ್ವರನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಎಂಬತ್ತು ಕೋಟಿ ಮುನೀಂದ್ರರು ದೇವರ್ಕಳು ಇಂದ್ರಚಂದ್ರಾದಿತ್ಯರು ವೇದಪುರುಷರು ಇಹರು ನೋಡಾ. ಒಂಬತ್ತುನೂರಾ ಎಂಬತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
-->