ಅಥವಾ

ಒಟ್ಟು 7 ಕಡೆಗಳಲ್ಲಿ , 4 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಗಳ ಮುಂದಣ ಬಯಲಿನೊಳಗೊಂದು ಪ್ರಕಾಶಾನ್ವಿತವಾದ ಮಹಾಚೋದ್ಯತರವಾದ ಗಗನಕೋಶವುಂಟು. ಅಲ್ಲೊಂದು ದಿವ್ಯತರವಾದ ಕಮಲವುಂಟು. ಆ ಕಮಲದ ಮಧ್ಯದಲ್ಲಿ ಆಣವತ್ರಯಾನ್ವಿತವಾದ ಮಹತ್ಕರ್ಣಿಕೆಯುಂಟು. ಮತ್ತದರಗ್ರದಂತರ್ವರ್ಣತ್ರಯಂಗಳೊಳಗೆ ನೀಲವಿದ್ರುಮರತ್ನ ಚಂದ್ರಪ್ರಕಾಶ ದಿವ್ಯಸಿಂಹಾಸನದ ಮೇಲೆ ಬೆಳಗುತ್ತಿರ್ಪ ಶಿವಲಿಂಗವನನುಸಂಧಾನಿಸಿ ಪೂಜಿಸುವ ಕ್ರಮವೆಂತೆಂದೊಡೆ : ಶ್ರೀಗುರುಕರುಣಕಟಾಕ್ಷವೀಕ್ಷಣಬಲದಿಂದ ಕಲ್ಮಷ ಕಂಟಕಾದಿಗಳಂ ತೊಲಗಿಸಿ, ಶಿವಲೋಕದ ಮಾರ್ಗವಿಡಿದು ಹೋಗಿ, ಆ ಶಿವಲೋಕದ ಸಮೀಪಕ್ಕೆ ಸೇರಿ, ಪರೀಕ್ಷೆಯ ಮಾಡಿ ನೋಡಲು, ಆ ಶಿವಲೋಕದ ಬಹಿರಾವರಣದಲ್ಲಿ ಮೂವತ್ತೆರಡು ಬಹಿರ್ಮುಖರು ಸಂಸ್ಥಿತರಾದ ವಿವರ : ಈಶಾನ್ಯ ಪರ್ಜನ್ಯ ಜಯಂತ ಮಹೇಂದ್ರ ಆದಿತ್ಯ ಸತ್ಯ ಭೃಂಷ ಅಂತರಿಕ್ಷ ಅಗ್ನಿ ವಿಮಾಷ ಥತ ಗ್ರಹಕ್ಷತ ಯಮ ಗಂಧರ್ವ ಭೃಂಗುರಾಜ ಮೃಗ ನಿರುತಿ ದೌವಾರಿಕ ಸುಗ್ರೀವ ಪುಷ್ಪದತ್ತ ವರುಣ ಅಸುರ ಶೇಷ ಋಭು ವಾಯು ನಾಗ ಮುಖ ಪಲಾಟಕ ಸೋಮ ಭೂತ ಅದಿತ ದಿತರೆಂಬುವರೇ ಮೂತ್ತೆರಡು ವಸ್ತುದೇವತೆಯರ ಒಡಂಬಡಿಸಿಕೊಂಡು ಅವರಿಂದೊಳಗಿರ್ಪ ಸೂರ್ಯವೀಥಿಯೆನಿಸುವ ತೃತೀಯವರ್ಣದ ಮೂವತ್ತೆರಡುದಳದಲ್ಲಿ ಎಂಟು ಶೂನ್ಯದಳಗಳನುಳಿದು, ಮಿಕ್ಕ ಇಪ್ಪತ್ತುನಾಲ್ಕುದಳಗಳಲ್ಲಿರುವ ಇಪ್ಪತ್ತುನಾಲ್ಕು ವಿಕಲಾಕ್ಷರಂಗಳೇ ಅಷ್ಟವಿಧೇಶ್ವರರು, ಅಷ್ಟದಿಕ್ಪಾಲಕರು, ಅಷ್ಟವಸುಗಳಾದ ವಿವರ : ಕ ಕಾರವೆ ಅನಂತ, ಖ ಕಾರವೆ ಇಂದ್ರ, ಗಕಾರವೆ ಧರ, ಘಕಾರವೆ ಸೂಕ್ಷ್ಮ , ಓಂಕಾರವೆ ಅಗ್ನಿ, ಚಕಾರವೆ ಧ್ರುವ, ಛಕಾರವೆ ಶಿವೋತ್ತಮ, ಜಕಾರವೆ ಯಮ, ಝಕಾರವೆ ಸೋಮ, ಞಕಾರವೆ ಏಕನೇತ್ರ, ಟಕಾರವೆ ನಿರುತಿ, ಠಕಾರವೆ ಆಪು, ಡಕಾರವೆ ರುದ್ರ, ಢಕಾರವೆ ವರುಣ, ಣಕಾರವೆ ಅನಿಲ, ತಕಾರವೆ ತ್ರಿಮೂರ್ತಿ, ಥಕಾರವೆ ವಾಯು, ದಕಾರವೆ ಅನಲ, ಧಕಾರವೆ ಶ್ರೀಕಂಠ, ನಕಾರವೆ ಕುಬೇರ, ಪಕಾರವೆ ಪ್ರತ್ಯೂಷ, ಫಕಾರವೆ ಶಿಖಂಡಿ, ಬಕಾರವೆ ಈಶಾನ, ಬಕಾರವೆ ಪ್ರಭಾಸ. ಇಂತೀ [ಅಷ್ಟ] ವಿಧೇಶ್ವರಾದಿಗಳಿಗಬ್ಥಿವಂದಿಸಿ, ಅದರಿಂದೊಳಗಿರ್ಪ ಚಂದ್ರವೀಥಿಯೆನಿಪ ದ್ವಿತೀಯಾವರಣದ ಷೋಡಶದಳದಲ್ಲಿರುವ ಷೋಡಶ ಸ್ವರಾಕ್ಷರಂಗಳೆ ಷೋಡಷರುದ್ರರಾದ ವಿವರ : ಅಕಾರವೆ ಉಮೇಶ್ವರ, ಆಕಾರವೆ ಭವ, ಇಕಾರವೆ ಚಂಡೇಶ್ವರ, ಈಕಾರವೆ ಶರ್ವ, ಉಕಾರವೆ ನಂದಿಕೇಶ್ವರ, ಊಕಾರವೆ ರುದ್ರ, ಋಕಾರವೆ ಮಹಾಕಾಳ, Iೂಕಾರವೆ ಉಗ್ರ, ಲೃಕಾರವೆ ಭೃಂಗಿರೀಟಿ, ಲೂೃಕಾರವೆ ಬ್ಥೀಮ, ಏಕಾರವೆ ಗಣೇಶ್ವರ, ಐಕಾರವೆ ಈಶಾನ, ಓಕಾರವೆ ವೃಷಭೇಶ್ವರ, ಔಕಾರವೆ ಪಶುಪತಿ, ಅಂ ಎಂಬುದೆ ಷಣ್ಮುಖಿ, ಅಃ ಎಂಬುದೆ ಮಹಾದೇವನು. ಇಂತಪ್ಪ ಷೋಡಶರುದ್ರರಿಗೆ ಸಾಷ್ಟಾಂಗವೆರಗಿ ಬಿನ್ನವಿಸಿಕೊಂಡು, ಅದರಿಂದೊಳಗಿರ್ಪ ಅಗ್ನಿವೀಥಿಯೆನಿಸುವ ಪ್ರಥಮಾವರಣ ಅಷ್ಟದಳಗಳಲ್ಲಿರ್ಪ ಅಷ್ಟವ್ಯಾಪಕಾಕ್ಷರಂಗಳೆ ಅಷ್ಟಶಕ್ತಿಯರಾದ ವಿವರ : ಸಕಾರವೆ ಉಮೆ, ಷಕಾರವೆ ಜ್ಯೇಷ್ಠೆ, ಶಕಾರವೆ ರೌದ್ರೆ, ವಕಾರವೆ ಕಾಳೆ, ಲಕಾರವೆ ಬಾಲೆ, ರಕಾರವೆ ಬಲಪ್ರಮಥಿನಿ, ಯಕಾರವೆ ಸರ್ವಭೂತದಮನೆ, ಮಕಾರವೆ ಮನೋನ್ಮನಿ. ಇಂತಪ್ಪ ಶಿವಶಕ್ತಿಯರ ಪಾದಪದ್ಮಂಗಳಿಗೆ ಸಾಷ್ಟಾಂಗವೆರಗಿ, ಪೊಡಮಟ್ಟು ಅದರಿಂದೊಳಗಿರ್ಪ ಅತಿರಹಸ್ಯವಾದ ಮೂವತ್ತೆರಡು ಕ್ಲೇಶಂಗಳಿಗಾಶ್ರಯವಾದ ಶಾಂತಿಬಿಂದುಮಯವಾದ ಅಂತರ್ಮಂಡಲದ ಚತುರ್ದಳದಲ್ಲಿರುವ ಚತುರಕ್ಷರಂಗಳೇ ಚತುಃಶಕ್ತಿಯರಾದ ವಿವರ : ಸಂ ಎಂಬುದೆ ಅಂಬಿಕೆ, ಅಂ ಎಂಬುದೆ ಗಣಾನಿ, ಡಿಂ ಎಂಬುದೆ ಈಶ್ವರಿ, ಕ್ಷುಂ ಎಂಬುದೇ ಉಮೆ. ಇಂತಪ್ಪ ಪರಶಕ್ತಿಯರ ಪಾದಾರವಿಂದವನು ಅನೇಕ ಪ್ರಕಾರದಿಂ ಸ್ತುತಿಮಾಡಿ ಬೇಡಿಕೊಂಡು ಅವರಪ್ಪಣೆವಿಡಿದು ಒಳಪೊಕ್ಕು, ಅಲ್ಲಿ ಕದಂಬಗೋಳಕಾಕಾರ ಸ್ಫುರಶಕ್ತಿದೀದ್ಥಿಕಾಯೆಂದುಂಟಾಗಿ ರಹಸ್ಯಕ್ಕೆ ರಹಸ್ಯವಾದ ಷಡಧ್ವಜನ್ಮಭೂಮಿಯಾದ ಶಕ್ತಿಶಿರೋಗ್ರದಲ್ಲಿ ಪಂಚಾಕಾಶ ಷಟ್ತಾರಕ ತ್ರಿವಿಧಲಿಂಗಾಂಗಗಳೆ ಕಕಾರವಾದ ಪರಬ್ರಹ್ಮದ ನೆಲೆಯನರಿಯುವುದೇ ಮುದ್ವೀರಪ್ರಿಯ ಸಂಗಮೇಶ್ವರನಲ್ಲಿ ಬೆರೆವಂಥ ನಿಜಯೋಗ ಕಾಣಿರೊ.
--------------
ಮುದ್ವೀರ ಸ್ವಾಮಿ
ಮರಲ್ದುಂ ಬ ವಾಙ್ಮಯೀ ಭ ಜಯೆ ಮ ಸುಮುಖಿ ಯ ಈಶ್ವರಿ ರ ರೇವತಿ ಲ ಮಾಧವಿ ಇಂತೀ ಮಹಾಲಿಂಗದ ಶಕ್ತಿಯಧಃಕಂಜಸಂಜ್ಞಿತವಾದ ಸ್ವಾದ್ಥಿಷ್ಠಾನಚಕ್ರದ ಷಟ್ಕೋಷ್ಠದಳ ನ್ಯಸ್ತ ಷಡ್ರುದ್ರಶಕ್ತಿಯರಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮುಕ್ತಿಗೆ ಸದಾ ಸಂಧಾನವಾದ ಮಹಾಜ್ಞಾನ ಶಿವಕ್ಷೇತ್ರವೆಂಬ ಶಾಂಭವಿಯಚಕ್ರವಿವರವೆಂತೆಂದೊಡೆ: ಅಗ್ನಿಮಂಡಲದ ಪೂರ್ವದಿಕ್ಕಿನ ಸಕಾರವೇ ವಾಮೆ, ಷಕಾರವೇ ಜೇಷೆ*, ಶಕಾರವೇ ರೌದ್ರಿ, ವಕಾರವೇ ಕಾಳಿ. ಅಗ್ನಿಮಂಡಲದ ನೈಋತ್ಯದಳಕ್ಕೆ ಆಧಾರಚಕ್ರಸಂಬಂಧವು. ಅದರ ಮುಂದಣ ಲಕಾರವೇ ಬಾಲೆ, ರಕಾರವೇ ಬಲಪ್ರಮಥಿನಿ, ಯಕಾರವೇ ಸರ್ವಭೂತದಮನಿ, ಮಕಾರವೇ ಮನೋನ್ಮನಿ. ಇನ್ನು ಸೂರ್ಯಮಂಡಲದ ಬಕಾರ ಭಕಾರಗಳೆರಡು ಕೂಡಿ ಅಗ್ನಿಮಂಡಲದ ಈಶಾನ್ಯದಳಕ್ಕೆ ಸ್ವಾಧಿಷಾ*ನಚಕ್ರಸಂಬಂಧವು. ಮುಂದೆ ಚಂದ್ರಮಂಡಲದ ವಿವರವೆಂತೆಂದೊಡೆ: ಅಃ ಎಂಬುದೇ ಷಣ್ಮುಖಿ, ಅಂ ಎಂಬುದೇ ಭವ, ಔಕಾರವೇ ಶರ್ವ, ಓಕಾರವೇ ರುದ್ರ, ಐಕಾರವೇ ಮಹಾದೇವ, ಏಕಾರವೇ ಸೋಮ, ಲೂೃಕಾರವೇ ಭೀಮ, ಲೃಕಾರವೇ ಉಗ್ರ, Iೂಕಾರವೇ ಪಶುಪತಿ, ಋಕಾರವೇ ಉಮೇಶ್ವರ, ಊಕಾರವೇ ಚಂಡೇಶ್ವರ, ಉಕಾರವೇ ನಂದೀಶ್ವರ, ಈಕಾರವೇ ಮಹಾಕಾಳ, ಇಕಾರವೇ ಭೃಂಗಿರಿಟಿ, ಆಕಾರವೇ ಗಣೇಶ್ವರ, ಅಕಾರವೇ ವೃಷಭೇಶ್ವರ, ಚಂದ್ರಮಂಡಲದಲ್ಲಿ ವಿಶುದ್ಧಿಚಕ್ರಸಂಬಂಧವು. ಇನ್ನು ಮುಂದೆ ಸೂರ್ಯಮಂಡಲವೆಂತೆಂದೊಡೆ: ಪೂರ್ವದಳದ ಕಕಾರವೇ ಅನಂತ, ಖಕಾರವೇ ಸೂಕ್ಷ್ಮ, ಗಕಾರವೇ ಶಿವೋತ್ತಮ, ಘಕಾರವೇ ಏಕನೇತ್ರ, ಙಕಾರವೇ ಏಕರುದ್ರ. ಚಕಾರವೇ ತ್ರಿಮೂರ್ತಿ, ಛಕಾರವೇ ಶ್ರೀಕಂಠ, ಜಕಾರವೇ ಶಿಖಂಡಿ, ಝಕಾರವೇ ಇಂದ್ರ, ಞಕಾರವೇ ಅಗ್ನಿ. ಟಕಾರವೇ ಯಮ, ಠಕಾರವೇ ನೈಋತ್ಯ. ಸೂರ್ಯಮಂಡಲದ ನೈಋತ್ಯದಳಕ್ಕೆ ಅನಾಹತಚಕ್ರಸಂಬಂಧವು. ಡಕಾರವೇ ವರುಣ, ಢಕಾರವೇ ವಾಯುವ್ಯ, ಣಕಾರವೇ ಕುಬೇರ, ತಕಾರವೇ ಈಶಾನ್ಯ, ಥಕಾರವೇ ಧರಾ, ದಕಾರವೇ ಧ್ರುವ, ಧಕಾರವೇ ಸೋಮ, ನಕಾರವೇ ಅಪ್ಪು, ಪಕಾರವೇ ಅನಿಲ, ಫಕಾರವೇ ಅನಲ, ಸೂರ್ಯಮಂಡಲದ ವರುಣದಳದಿಂದೆ ಈಶಾನ್ಯದಳಕ್ಕೆ ಮಣಿಪೂರಕಚಕ್ರ ಸಂಬಂಧವು. ಈಶಾನ್ಯ ಇಂದ್ರ ಮಧ್ಯದ ಬಕಾರ ಭಕಾರಂಗಳ ಪೆಸರು, ಬಕಾರವೇ ಪ್ರತ್ಯೇಶ, ಭಕಾರವೇ ಪ್ರಭವ, ಇವೆರಡು ಸ್ವಾಧಿಷಾ*ನಚಕ್ರದವು. ಇನ್ನು ಅಕಾರ ಹಕಾರಂಗಳಿಗೆ ಭೇದವಿಲ್ಲದ ಕಾರಣ ಚಂದ್ರಮಂಡಲದ ಅ ಎಂಬಕ್ಷರವು ಅಗ್ನಿಮಂಡಲದ ಲಂಬಕ್ಷರವು ಇವೆರಡು ಆಜ್ಞಾಚಕ್ರಸಂಬಂಧವಾಗಿಹವು. ಈ ಷಟ್‍ಚಕ್ರಂಗಳು ಶಾಂಭವಿಚಕ್ರದಲ್ಲಿ ಸಂಬಂಧವಾಗಿಹವು. ಇನ್ನು ಅಷ್ಟದಳಂಗಳಿಗೆ ಹಂಚಿಹಾಕುವ ವಿವರವೆಂತೆಂದೊಡೆ: ವಾಮ, ಗಣೇಶ್ವರ, ವೃಷಭೇಶ್ವರ, ಅನಂತ, ಸೂಕ್ಷ್ಮ, ಶಿವೋತ್ತಮ, ಇಂದ್ರ, ಸತ್ಯ, ಭೃಂಗಿ, ಅಂತರ್ಲಕ್ಷ ಈ ಹತ್ತು ಇಂದ್ರದಳದಲ್ಲಿ ಸಂಬಂಧವು. ಜೇಷ*, ಮಹಾಕಾಳ, ಭೃಂಗರೀಟಿ, ಏಕನೇತ್ರ, ಏಕರುದ್ರ, ತ್ರಿಮೂರ್ತಿ, ಅಗ್ನಿ, ಪೂಷನ್, ವಿಧಿ, ದಮ ಈ ಹತ್ತು ಅಗ್ನಿದಳದಲ್ಲಿ ಸಂಬಂಧವು. ರೌದ್ರಿ, ನಂದೀಶ್ವರ, ಚಂಡೇಶ್ವರ, ಶ್ರೀಕಂಠ, ಶಿಖಂಡಿ, ಇಂದ್ರ ಯಮ, ಭಾಸ್ಕರ, ಪುಷ್ಪದತ್ತ , ಬಲಾಟ ಈ ಹತ್ತು ಯಮದಳದಲ್ಲಿ ಸಂಬಂಧವು. ಕಾಳಿ, ಉಮೇಶ್ವರ, ಪಶುಪತಿ, ಅಗ್ನಿ, ಯಮ, ನೈಋತ್ಯ, ದೌವಾರಿಕ, ಸುಗ್ರೀವ, ಆವರಣ ಈ ಹತ್ತು ನೈಋತ್ಯದಳದಲ್ಲಿ ಸಂಬಂಧವು. ಬಾಲೆ, ಉಗ್ರ, ಭೀಮ, ವರುಣ, ಏಕನೇತ್ರ, ಕುಬೇರ, ಅರುಣ, ಅಸುರ, ಗಂಹ್ವರ, ವೇಗ, ಈ ಹತ್ತು ವರುಣದಳದಲ್ಲಿ ಸಂಬಂಧವು. ಬಲಪ್ರಮಥಿನಿ, ಸೋಮ, ಅಪನಿಲ, ಮಹಾದೇವ, ಈಶಾನ್ಯ, ಧರಾ, ಧ್ರುವ, ವಾಯು, ನಾಗಮುಖ, ಸೋಮ, ಈ ಹತ್ತು ವಾಯುವ್ಯದಳದಲ್ಲಿ ಸಂಬಂಧವು. ಸರ್ವಭೂತದಮನಿ, ರುದ್ರ, ಶರ್ವ, ಸೋಮ, ಅಪ್ಪು, ನೀಲ, ಕುಬೇರ, ಅಘೋರ, ದಿತಿ, ಅದಿತಿ, ಈ ಹತ್ತು ಕುಬೇರದಳದಲ್ಲಿ ಸಂಬಂಧವು. ಮನೋನ್ಮನಿ, ಭವ, ಷಣ್ಮುಖಿ, ನಳ, ಪ್ರತ್ಯೇಶ, ಪ್ರಭವ, ಈಶಾನ್ಯ, ಪರ್ಜನ್ಯ, ಜಯಂತ, ಸಂಕರ, ಈ ಹತ್ತು ಈಶಾನ್ಯದಳದಲ್ಲಿ ಸಂಬಂಧವು. ಇಲ್ಲಿಗೆ ಅಷ್ಟದಳದ ವಿವರ ಮುಗಿಯಿತು. ಇನ್ನು ಮುಂದೆ ಚೌದಳದ ವಿವರವೆಂತೆಂದೊಡೆ : ಇಂತಪ್ಪ ಅಷ್ಟದಳವನೊಳಕೊಂಡು ಅಂಬಿಕೆ, ಗಣಾನಿ, ಈಶ್ವರಿ, ಮನೋನ್ಮನಿ ಎಂಬ ಚತುರ್ದಳ ಶಕ್ತಿಯರಿರ್ಪರು. ಪೂರ್ವದಳದ ಸಕಾರವೇ ಅಂಬಿಕೆ. ದಕ್ಷಿಣದಳದ ಅಕಅರವೇ ಗಣಾನಿ. ಪಶ್ಚಿಮದಳದ ವಿಕಾರವೇ ಈಶ್ವರಿ. ಉತ್ತರದಳದ ಕ್ಷಕಾರವೇ ಮನೋನ್ಮನಿ. ಇಂತೀ ಚತುರ್ವಿಧಶಕ್ತಿಯನೊಳಕೊಂಡಿರ್ಪಳು ಹ್ರೀಂಕಾರಶಕ್ತಿ. ಹ್ರೀಂಕಾರಶಕ್ತಿ ಎಂದಡೂ ಮೂಲಜ್ಞಾನ ಚಿತ್ತು ಎಂದಡೂ ಚಿದಾತ್ಮ ಎಂದಡೂ ಪರ್ಯಾಯ ನಾಮವು. ಇಂತಪ್ಪ ಹ್ರೀಂಕಾರಶಕ್ತಿಗೆ ಆಶ್ರಯವಾಗಿರ್ಪುದು ನಿಷ್ಕಲಲಿಂಗವು. ನಿಷ್ಕಲಲಿಂಗವೆಂದಡೂ ಶುದ್ಧಪ್ರಸಾದವೆಂದಡೂ ಹಕಾರಪ್ರಣವವೆಂದಡೂ ಪರ್ಯಾಯ ನಾಮಂಗಳು. ಇಂತಪ್ಪ ನಾಮಂಗಳನೊಳಕೊಂಡು ಪಿಂಡ ಬ್ರಹ್ಮಾಂಡಗಳೊಳಹೊರಗೆ ಪರಿಪೂರ್ಣವಾಗಿ ತುಂಬಿ ತೊಳಗಿ ಬೆಳಗುತಿರ್ಪುದು ನೋಡಾ ನಿಷ್ಕಲಲಿಂಗವು. ಇಂತಪ್ಪ ಅನಾದಿ ನಿಷ್ಕಲ ಪರಶಿವಬ್ರಹ್ಮದ ನಿಜದ ನಿಲವನು ಶ್ರುತಿಗುರುವಚನ ಸ್ವಾನುಭಾವಂಗಳಿಂದರಿದು ತನ್ನೊಳಗೆ ಗರ್ಭೀಕರಿಸಿಕೊಂಡು ಸುಳಿವ ಮಹಾಶರಣರ ಶ್ರೀಚರಣಕ್ಕೆ ನಮೋ ನಮೋ ಎಂಬೆನಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಮೇಣ್ಚಕ್ರನ್ಯಾಸದ ತರುವಾಯ ದೇವತಾನ್ಯಾಸವೆಂತೆನೆ, ಕರ್ಣಿಕಾಮಧ್ಯದಲ್ಲಿ ಸರ್ವಾಧಾರೆಯಾದ ಪರಾಶಕ್ತಿಯಂ, ತತ್ಕರ್ಣಿಕೆಯಂ ಬಳಸಿದ ಚೌದಳಂಗಳಲ್ಲಿ ಪ್ರದಕ್ಷಿಣಮಾಗಿ, ಯಂಬಿಕೆ ಗಣಾನಿ ಈಶ್ವರಿ ಮನೋನ್ಮನಿಯರೆಂಬ ಚತುಶ್ಯಕ್ತಿಯರಂ ಭಜಿಸೆಂದುಸಿರ್ದೆಯಯ್ಯಾ, ಪರಮ ಶಿವಲಿಂಗ ಪಾಶೋತ್ಕರ ವಿಭಂಗ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ನಾದಸಂಜ್ಞಿತವಾದ ಹಕಾರದ ಮೊದಲಹ ಸ್ ಎಂಬುದನುದ್ಧರಿಸಿ ಸಂಜ್ಞಿತವಾದ ರ್ ಎಂಬುದಂ ಕೂಡಿಸೆ ಸ್ರ್ ಎನಿಸಿತದಂ ಮಾಯಾಸಂಜ್ಞಿತವಾದಿಕಾರದೊಳ್ಮೇಳನಂಗೆಯ್ದು, ಬಿಂದು ನಾದಸಂಜ್ಞಿತವಾದ ಸೊನ್ನೆಯೊಳ್ಕೊಡೆ ಸ್ತ್ರೀಂ ಎಂಬ ದ್ವೀತಿಯ ಶಕ್ತಿಬೀಜವೆನಿಸಿತ್ತು. ಮತ್ತಂ, ತತ್ವಾಂತಸಂಜ್ಞಿತವಾದ ಹಕಾರದ ಮುಂದಣ ಸ್ ಎಂಬುದನುದ್ಧರಿಸಿ, ಧರಾಸಂಜ್ಞಿತವಾದೂಕಾರವಂ ವನ್ಹಿಸಂಜ್ಞಿತವಾದ ರ್ ಎಂಬುದನುಂ, ಬಿಂದು ನಾದಸಂಜ್ಞಿತವಾದ ಸೊನ್ನೆಯುಮಂ ಮಿಶ್ರಿಸೆ ಸ್ರೂಂ ಎಂಬ ಮೂರನೆಯ ಶಕ್ತಿಬೀಜವೆನಿಸಿತ್ತು. ಜೀವಸಂಜ್ಞಿತವಾದ ಹಕಾರದ ಮುಂದಣ ಸ್ ಎಂಬುದಂ ವನ್ಹಿಸಂಜ್ಞಿತವಾದ ರ್ ಎಂಬುದಂ ಕೂಡಿಸೆ ಸ್ರ್ ಎನಿಸಿತ್ತದಂ ದ್ವಾದಶಸಂಜ್ಞಿತವಾದೈಕಾರದೊಳ್ಬೆರಸಿ ಬಿಂದು ನಾದಸಂಜ್ಞಿತವಾದ ಸೊನ್ನೊಯೊಳೊಂದಿಸೆ ಸ್ರೈಂ ಎಂಬ ನಾಲ್ಕನೆಯ ಶಕ್ತಿಬೀಜಂ. ಭೂತಸಂಜ್ಞಿತವಾದ ಹಕಾರದ ಮುಂದಣ ಸ್ ಎಂಬುದು ವನ್ಹಿ ಸಂಜ್ಞಿತವಾದ ರ್ ಎಂಬುದರೊಡನೆ ಕೂಡೆ ಸ್ರ ಎನ್ನಿಸಿತ್ತದು ಸ್ವರತ್ರಯೋದಶದೊಡನೆ ಕೂಡೆ ಸ್ರೌ ಎನಿಸಿ ಬಿಂದು ನಾದ ಸಂಜ್ಞಿತವಾದ ಸೊನ್ನೆಯೊಡವೆರೆಯೆ ಸ್ರೌಂ ಎಂಬ ಬೀಜವೈದನೆಯ ಶಕ್ತಿ. ಈ ಶಕ್ತಿಬೀಜವಂ ಶಿವಾಂಗ ಬೀಜವಹ ಹಾಂಗುದ್ಧರಿಸೂದೀ ಪಂಚಶಕ್ತಿಗಳಲ್ಲಿಯುಮಾ ಶಕ್ತಿಯೆ ಮೊದಲಶಕ್ತಿ. ಇವರ ಬೀಜಶಕ್ತಿಗಳವೆಂತೆನೆ- ತರದಿಂದೆ ಸ್ರಾಂ ಉಮೆ ಸ್ತ್ರೀಂ ಅಂಬಿಕೆ ಸ್ರೂಂ ಗಣಾನಿ ಸೆಂ ಈಶ್ವರಿ ಸ್ರೌಂ ಮನೋನ್ಮನಿ ಇಂತೈದು ಶಕ್ತಿಗಳ್ಳಿವಾಂಗಂಗಳನ್ಯೋನ್ಯಗಳೊಂದೊಂದರ ದಶಾಂಗಳೊಂದೊಂದೆಂದರುಪಿದೆಯಯ್ಯಾ, ಮುನಿಹೃದಯ ಶಯ್ಯ ಮಹಾ ಗುರು ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಅಯ್ಯ, ಅರ್ಧಚಂದ್ರಾಕೃತಿ, ವಕಾರಪ್ರಣಮ, ಮೇಘನಾದ, ಅನಾಹತಚಕ್ರ, ಮಾಂಜಿಷ*ವರ್ಣ, ಪ್ರಾಣಲಿಂಗಿಸ್ಥಲ, ನಿರ್ಮಿಲತನು, ಸುಮನಹಸ್ತ, ಜಂಗಮಲಿಂಗ, ತ್ವಕ್ಕೆಂಬ ಮುಖ, ಅನುಭಾವಭಕ್ತಿ, ಸುಸ್ಪರ್ಶನ ಪದಾರ್ಥ, ಸುಸ್ಪರ್ಶನ ಪ್ರಸಾದ, ಈಶ್ವರಿ ಪೂಜಾರಿ, ಈಶ್ವರನಧಿದೇವತೆ, ಅಮೂರ್ತಿಸಾದಾಖ್ಯ, ನಿತ್ಯವೆಂಬ ಲಕ್ಷಣ, ನಿರ್ಮಲಾತ್ಮ, ಆದಿಶಕ್ತಿ, ಶಾಂತಿಕಲೆ-ಇಂತು ಇಪ್ಪತ್ತುನಾಲ್ಕು ಸಂಕೀಲಂಗಳನೊಳಕೊಂಡು, ಎನ್ನ ಅನಾಹತಚಕ್ರವೆಂಬ ಹಿಮವತ್ಕೇತಾರಕ್ಷೇತ್ರದಲ್ಲಿ ಮೂರ್ತಿಗೊಂಡಿರ್ದ ಯಜನಸ್ವರೂಪವಾದ ಜಂಗಮಲಿಂಗವೆ ಹಿಮಗಿರೀಶ್ವರಲಿಂಗವೆಂದು, ಪ್ರಾಣತ್ರಯವ ಮಡಿಮಾಡಿ, ಶಾಂತಿಯೆಂಬ ಜಲದಿಂ ಮಜ್ಜನಕ್ಕೆರದು, ವಾಯು ನಿವೃತ್ತಿಯಾದ ಗಂಧವ ಧರಿಸಿ, ಮನ ಸುಮನವಾದಕ್ಷತೆಯನಿಟ್ಟು ಅಲ್ಲಿಹ ದ್ವಾದಶದಳಂಗಳನೆ ಪುಷ್ಪದಮಾಲೆಯೆಂದು ಧರಿಸಿ, ಅಲ್ಲಿಹ ಕಮಲಸದ್ವಾಸನೆಯ ಧೂಪವ ಬೀಸಿ, ಅಲ್ಲಿಹ ಮಾಂಜಿಷ*ವರ್ಣವೆ ಕರ್ಪೂರದ ಜ್ಯೋತಿಯೆಂದು ಬೆಳಗಿ, ಅಲ್ಲಿಹ ತೂರ್ಯಾವಸ್ಥೆಯೆಂಬ ನವೀನವಸ್ತ್ರವ ಹೊದ್ದಿಸಿ, ನಿರ್ಲೇಪವೆಂಬಾಭರಣವ ತೊಡಿಸಿ, ಸುಸ್ಪರ್ಶನವೆಂಬ ನೈವೇದ್ಯವನರ್ಪಿಸಿ, ಅನುಭಾವವೆಂಬ ತಾಂಬೂಲವನಿತ್ತು ಇಂತು ಜಂಗಮಲಿಂಗಕ್ಕೆ ಅಷ್ಟವಿಧಾರ್ಚನೆಯಂ ಮಾಡಿ, ಕೋಟಿಸೂರ್ಯನ ಪ್ರಭೆಯಂತೆ ಬೆಳಗುವ ಜಂಗಮಲಿಂಗವನ್ನು ಕಂಗಳುತುಂಬಿ ನೋಡಿ, ಮನದಲ್ಲಿ ಸಂತೋಷಗೊಂಡು, ಆ ಜಂಗಮಲಿಂಗದ ಪೂಜೆಯ ಸಮಾಪ್ತವ ಮಾಡಿ, ಓಂ ವಾಂ ವಾಂ ವಾಂ ವಾಂ ವಾಂ ವಾಂ ಎಂಬ ವಾಕಾರಷಡ್ವಿಧ ಮಂತ್ರಂಗಳಿಂದೆ ನಮಸ್ಕರಿಸಿ, ಆ ಜಂಗಲಿಂಗಮವೆ ತಾನೆಂದರಿದು ಕೂಡಿ ಎರಡಳಿದು ನಿಃಪ್ರಪಂಚಿಯಾಗಿ ಆಚರಿಸಬಲ್ಲಾತನೆ ಅನುಭಾವಭಕ್ತಿಯನುಳ್ಳ ಲಿಂಗಪ್ರಾಣಿ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
-->