ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಧಕನ ಮುಂದೆ ನೃತ್ಯ ಬಹುರೂಪವನಾಡಿದಡೇನು ಕಂಡು ಪರಿಣಾಮಿಸಬಲ್ಲನೆ ಹೇಳಾ? ಬಧಿರನ ಮುಂದೆ ಸಂಗೀತ ಸಾಹಿತ್ಯವನೋದಿದಡೇನು ಕೇಳಿ ತಿಳಿದು ಪರಿಣಾಮಿಸಬಲ್ಲನೆ ಹೇಳಾ? ಜ್ಞಾನಾನುಭಾವವಿಲ್ಲದವರು ಏನನೋದಿ ಏನ ಕೇಳಿ ಏನು? ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನನರಿಯದವರ ಓದು ಕೇಳಿಕೆ, ಬಧಿರಾಂಧಕರ ಕೇಳಿಕೆ ನೋಟದಂತಾಗಿತ್ತು.
--------------
ಸ್ವತಂತ್ರ ಸಿದ್ಧಲಿಂಗ
ದಗ್ಧವಾದ ಮರ ಇದ್ದಿಲಲ್ಲದೆ ಕಾಷ*ಕ್ಕೆ ಹೊದ್ದಿಗೆ ಉಂಟೆ? ಕಿಗ್ಗಯ್ಯ ನೀರು ತಟಾಕಕ್ಕೆ ಹೊದ್ದಿದುದುಂಟೆ? ಅರಿದು ಮರೆದವಂಗೆ ಸಮಯದ ಹೊದ್ದಿಗೆ ಏನು? ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ಎಂದೆ.
--------------
ಘಟ್ಟಿವಾಳಯ್ಯ
ತನುವ ಕೊಟ್ಟು ಭಕ್ತರಾದೆವೆಂಬರು, ಮನವ ಕೊಟ್ಟು ಭಕ್ತರಾದೆವೆಂಬರು, ಧನವ ಕೊಟ್ಟು ಭಕ್ತರಾದೆವೆಂಬರು. ತನು, ಮನ, ಧನವನೆಂತು ಕೊಟ್ಟಿರಿ ಹೇಳಿರಣ್ಣಾ? ನಿಮ್ಮ ಒಡವೆ ನಿಮ್ಮಲ್ಲಿ ಇದೆ. ಅದು ಹೇಗೆಂದರೆ, ಬಲ್ಲವರು ನೀವು ಕೇಳಿ, ತನುವ ನೀವು ಕೊಟ್ಟರೆ ನೀವು ರೂಪಾಗಿ ಇರುವದಕ್ಕೇನು? ಮನವ ನೀವು ಕೊಟ್ಟರೆ ನೀವು ನಿಮಗೆ ನಡೆನುಡಿ ಚೈತನ್ಯವೇನು? ಧನವ ನೀವು ಕೊಟ್ಟರೆ ಕ್ಷುತ್ತಿಂಗೆ ಭಿಕ್ಷ, ಸೀತಕ್ಕೆ ರಗಟೆ ಏನು? ಅಂತಲ್ಲ, ಕೇಳಿರಣ್ಣಾ ! ತನುವ ಕೊಟ್ಟುದಾವುದೆಂದರೆ, ಹುಸಿಮನವ ಕೊಟ್ಟುದಾವುದೆಂದರೆ, ವ್ಯಾಕುಳವನೆಲ್ಲ ಅಳಿದು ನಿರಾಕುಳವಾಗಿ ನಿಂದ ಮನವೆ ಲಿಂಗವಾಯಿತ್ತು ಧನವ ಕೊಟ್ಟಿಹೆನೆಂಬುದಾವುದೆಂದರೆ, ಇಂದಿಗೆ ನಾಳಿಗೆ ಎಂಬ ಸಂದೇಹದ ಭಾವಕ್ಕೆ, ಭಯಕ್ಕೆ ಭವವಳಿವುದುದೆ ಜಂಗಮವಾಯಿತ್ತು. ಇಂತಿದೀಗ ನಮ್ಮ ಮುನ್ನಿನ ಆದ್ಯರ ನಡೆನುಡಿ, ಮಾಟಕೂಟ. ಇದನರಿಯದೆ ಏನೊಂದು ಮಾಡಿದರೂ ನೀಡಿದರೂ ಕೊಟ್ಟರೂ ಕೊಂಡರೆಯೂ, ವಾಯಕ್ಕೆ ವಾಯ ಬಸವಪ್ರಿಯ ಕೂಡಲಚೆನ್ನಬಸವಣ್ಣ.
--------------
ಹಡಪದ ಅಪ್ಪಣ್ಣ
-->