ಅಥವಾ

ಒಟ್ಟು 3 ಕಡೆಗಳಲ್ಲಿ , 2 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಗನೆಯ ಚಿತ್ತ, ರಮಣನ ಸುತ್ತಿಮುತ್ತಿ ಅಪ್ಪಿ ಅಗಲದಿಪ್ಪಂತೆ ಜಾಗ್ರ, ಸ್ವಪ್ನ, ಸುಷುಪ್ತಿಯಲ್ಲಿ ಶರಣ ಚಿತ್ತರತಿ ಶಿವಲಿಂಗವ ಸುತ್ತಿ ಮುತ್ತಿ ಅಪ್ಪಿ ಅಗಲದಿಪ್ಪರೆ ಆ ಮಹಾತ್ಮನ ಏನೆಂದುಪಮಿಸುವೆನಯ್ಯ? ಲಿಂಗಪ್ರಾಣಿಯ, ಪ್ರಾಣಲಿಂಗಸಂಬಂದ್ಥಿಯ? ಸ್ವತಂತ್ರ ವಸ್ತುವಿನಲ್ಲಿ ಅರಿವರತು ಬೆರಗು ನಿಬ್ಬೆರಗಾದ, ಘನಲಿಂಗಪ್ರಾಣಿಗೆ ನಮೋ ನಮೋಯೆಂಬೆನಯ್ಯಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಎನ್ನಂತರಂಗದ ಆತ್ಮನೊಳಗೆ ಅಂಗವಿಲ್ಲದ ಅನಾಮಯನ ನೋಡಿ ಕಂಡೆನಯ್ಯ. ಆ ಪುರುಷನ ಮುಟ್ಟಿ ಹಿಡಿದು, ದರುಶನ ಸ್ವರುಷನವ ಮಾಡಿ ಕೂಡಿ ನೆರೆದಿಹೆನೆಂದರೆ ಚಿತ್ತ ಮನಕ್ಕೆ ಅಗೋಚರವಾಗಿಪ್ಪನಯ್ಯ. ಈ ಪುರುಷನ ಚಾರಿತ್ರ ವಿಪರೀತ ವಿಸ್ಮಯವಾಗಿದೆ ನೋಡಾ. ಆತನ ರೂಪು ಲಾವಣ್ಯ ಯುಕ್ತಿ ವಿಧಾನವ ಏನೆಂದುಪಮಿಸುವೆನಯ್ಯ? ಉಪಮಾತೀತ ಅವಿರಳಾತ್ಮಕ ಚಿದ್ರೂಪ ಕಾಣಿಭೋ. ಕೆಂಜೆಡೆಯ ಭಾಳನೇತ್ರಂ ರಂಜಿಪ ರವಿಕೋಟಿತೇಜದಿಂದುರವಣಿಸುತ್ತಿದಾನೆ ನೋಡಾ. ಕಂಜಪದಯಗಳದೊಳು ಹೊಳವುತ್ತಿದಾನೆ ನಂಜುಗೊರಳಭವ ಕಾಣಿಭೋ. ಭವರೋಗವೈದ್ಯ, ಭವಹರ, ಎನ್ನ ತಂದೆ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವನು, ಎನ್ನ ಹೃದಯದಲ್ಲಿ ಕಂಡು, ಮನೋಭಾವದಲ್ಲಿ ಆರಾದ್ಥಿಸುತ್ತಿರ್ದೆನಯ್ಯ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಎನ್ನ ಶ್ರೀಗುರು ಮಾಡಿದ ಕರುಣಕಿನ್ನಾವುದು ಕಡೆ, ಏನೆಂದುಪಮಿಸುವೆನಯ್ಯ? ಕಾಣಬಾರದ ಲಿಂಗವ ಕಾಣಿಸಿ ಕೊಟ್ಟನೆನ್ನ ಕರದಲ್ಲಿ. ತಿಳಿಯಬಾರದ ಜ್ಞಾನವ ತಿಳಿಸಿ, ಮನದಲ್ಲಿ ನೆಲೆಗೊಳಿಸಿದ. ಒಳಹೊರಗೆ ತಳವೆಳಗು ಮಾಡಿ, ಆಚಾರವನುಗೊಳಿಸಿ ಅಂಗದಲ್ಲಿ ಸ್ಥಾಪಿಸಿ ಹಿಂದ ಮರೆಸಿ, ಮುಂದ ತೋರಿದನಯ್ಯಾ. ಶ್ರೀಗುರು, ಕರುಣಿ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನು.
--------------
ಸ್ವತಂತ್ರ ಸಿದ್ಧಲಿಂಗ
-->