ಅಥವಾ

ಒಟ್ಟು 7 ಕಡೆಗಳಲ್ಲಿ , 1 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಥ ಬ್ರಹ್ಮಾಂಡವ ತೊಂಬತ್ತೊಂದು ಲಕ್ಷದ ಮೇಲೆ ಸಾವಿರದ ಒಂಬಯಿನೂರಾಯೆಂಟು ಬ್ರಹ್ಮಾಂಡವನೊಳಕೊಂಡುದೊಂದು ಧರ್ಮಪರೇಣವೆಂಬ ಭುವನ. ಆ ಭುವನದೊಳು ಧರ್ಮಾಧರ್ಮರಹಿತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಐವತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಒಂಬತ್ತುನೂರಾ ಐವತ್ತುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಹತ್ತು ಸಾವಿರದ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಶಾಂತ್ಯತೀತೆಯೆಂಬ ಭುವನ. ಆ ಭುವನದೊಳು ದ್ವಿಪಾದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಐವತ್ತುಕೋಟಿ ಬ್ರಹ್ಮ ನಾರಾಯಣ ರುದ್ರರು, ಐವತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು, ನಾಲ್ವತ್ತು ಮೂರುಕೋಟಿ ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತುಸಾವಿರದ ಎಂಟನೂರಾ ತೊಂಬತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸ್ಥಾಣುವೆಂಬ ಭುವನ. ಆ ಭುವನದೊಳು ಸ್ಥಾಣುನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರ ಐವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ನಾನೂರೈವತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಆರುಕೋಟಿಯ ಮೇಲೆ ಎರಡು ಸಾವಿರದಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಹುತಾಶನವೆಂಬ ಭುವನ. ಆ ಭುವನದೊಳು ಅತಿಮಹಾಘೋರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಸಾವಿರಕೋಟಿಯ ಮೇಲೆ ಐವತ್ತುಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು. ಸಾವಿರಕೋಟಿಯ ಮೇಲೆ ಐವತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
-->