ಅಥವಾ

ಒಟ್ಟು 21 ಕಡೆಗಳಲ್ಲಿ , 2 ವಚನಕಾರರು , 21 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಥ ಬ್ರಹ್ಮಾಂಡವ ಮೂವತ್ತಾರುಲಕ್ಷದ ಮೇಲೆ ಸಾವಿರದ ಮುನ್ನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಉದಂಬರೀಶವೆಂಬ ಭುವನ. ಆ ಭುವನದೊಳು ಉಮಾರಹಿತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಆರುನೂರೆಪ್ಪತ್ತೈದುಕೋಟಿ ನಾರಾಯಣರು ಬ್ರಹ್ಮ ರುದ್ರಾದಿಗಳಿಹರು ನೋಡಾ. ಆರುನೂರೆಪ್ಪತ್ತೈದುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಮೂವತ್ತಾರುಸಾವಿರದ ಮುನ್ನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಬಲಪ್ರಮದಿನಿಯೆಂಬ ಭುವನ. ಆ ಭುವನದೊಳು ಜ್ಯೋತಿರ್ಮಯನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾ ಎಂಬತ್ತುಕೋಟಿ ಬ್ರಹ್ಮ ನಾರಾಯಣ ರುದ್ರರು, ವೇದಪುರುಷರು, ಮುನೀಂದ್ರರು, ನೂರಾ ಎಂಬತ್ತುಕೋಟಿ ಇಂದ್ರಚಂದ್ರಾದಿತ್ಯರು, ದೇವರ್ಕಳಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತಾರುಲಕ್ಷದ ಮೇಲೆ ಸಾವಿರದ ಎಂಟುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಉಭಯನಖವೆಂಬ ಭುವನ. ಆ ಭುವನದೊಳು ಉಪಮಾತೀತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬಯಿನೂರಾ ಇಪ್ಪತ್ತೈದು ಕೋಟಿ ಬ್ರಹ್ಮ ನಾರಾಯಣ ರುದ್ರಾದಿಗಳಿಹರು ನೋಡಾ. ಒಂಬಯಿನೂರಾ ಇಪ್ಪತ್ತೈದು ಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಇಪ್ಪತ್ತಾರುಸಾವಿರದ ಇನ್ನೂರ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ನಿಜಾನಂದನೆಂಬ ಭುವನ. ಆ ಭುವನದೊಳು ನಿತ್ಯಾನಂದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನೂರಾಮೂವತ್ತುಕೋಟಿ ನಾರಾಯಣ ರುದ್ರ ಬ್ರಹ್ಮರು, ನೂರಾಮೂವತ್ತುಕೋಟಿ ಇಂದ್ರಚಂದ್ರಾದಿತ್ಯರು, ವೇದಪುರುಷರು, ಮುನೀಂದ್ರರು, ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಐವತ್ತಾರುಲಕ್ಷದ ಮೇಲೆ ಸಾವಿರದಾ ಐನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಜಟಾಧರವೆಂಬ ಭುವನ. ಆ ಭುವನದೊಳು ಜಟಾಜೂಟನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಾ ಎಪ್ಪತ್ತೈದುಕೋಟಿ ಇಂದ್ರ ಬ್ರಹ್ಮ ನಾರಾಯಣ ರುದ್ರರಿಹರು. ಏಳುನೂರಾ ಎಪ್ಪತ್ತೈದುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತಾರುಲಕ್ಷದ ಮೇಲೆ ಸಾವಿರದೇಳುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಶ್ವೇತಮಹಾಬಲವೆಂಬ ಭುವನ. ಆ ಭುವನದೊಳು ಗೋಕರ್ಣನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಾ ಎಪ್ಪತ್ತೈದುಕೋಟಿ ವೇದಪುರುಷರು ಮುನೀಂದ್ರರು ಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ಎಂಟುನೂರಾ ಎಪ್ಪತ್ತೈದುಕೋಟಿ ಇಂದ್ರ ಬ್ರಹ್ಮ ನಾರಾಯಣ ರುದ್ರರಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರವತ್ತಾರುಸಾವಿರದ ಆರುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭೌಮವೆಂಬ ಭುವನ. ಆ ಭುವನದೊಳು ಭುವನಾಧಿಪತಿಯೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಮುನ್ನೂರಾ ಮೂವತ್ತುಕೋಟಿ ಇಂದ್ರಚಂದ್ರಾದಿತ್ಯರು, ವೇದಪುರುಷರು ಮುನೀಂದ್ರರಿಹರು ನೋಡಾ. ಮುನ್ನೂರಾ ಮೂವತ್ತುಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಏಳುಕೋಟಿಯ ಮೇಲೆ ಎರಡುಸಾವಿರದಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಜಯರುದ್ರನೆಂಬ ಭುವನ. ಆ ಭುವನದೊಳು ಘೋರಘೋರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಸಾವಿರಕೋಟಿಯ ಮೇಲೆ ಅರುವತ್ತುಕೋಟಿ ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ದೇವರ್ಕಳಿಹರು ನೋಡಾ. ಸಾವಿರಕೋಟಿಯ ಮೇಲೆ ಅರುವತ್ತುಕೋಟಿ ರುದ್ರ -ಬ್ರಹ್ಮ -ನಾರಾಯಣರಿಹರು ನೋಡಾ. ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ನಾಲವತ್ತಾರುಲಕ್ಷದ ಮೇಲೆ ಸಾವಿರದ ನಾನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸುರೇಶಾನವೆಂಬ ಭುವನ. ಆ ಭುವನದೊಳು ಸುರೇಂದ್ರಾಧಿಪನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಏಳುನೂರಿಪ್ಪತ್ತೈದುಕೋಟಿ ದೇವರ್ಕಳು ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರಿಹರು ನೋಡಾ. ಏಳುನೂರಿಪ್ಪತ್ತೈದು ಕೋಟಿ ರುದ್ರ ಬ್ರಹ್ಮ ನಾರಾಯಣರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಅರುವತ್ತಾರುಲಕ್ಷದ ಮೇಲೆ ಸಾವಿರದಾ ಆರುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಸುಸೂಕ್ಷ್ಮವೆಂಬ ಭುವನ. ಆ ಭುವನದೊಳು ಅಷ್ಟತನುಸಂಹಾರನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಎಂಟುನೂರಿಪ್ಪತ್ತೈದುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ಎಂಟುನೂರಿಪ್ಪತ್ತೈದುಕೋಟಿ ವೇದಪುರುಷರು ಇಂದ್ರಚಂದ್ರಾದಿತ್ಯರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಪ್ಪತ್ತಾರುಸಾವಿರದಾ ಏಳುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಇಂದ್ರವೆಂಬ ಭುವನ. ಆ ಭುವನದೊಳು ಇಂದ್ರಾಧಿಪನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿ ಓಲಗದಲ್ಲಿ ಮುನ್ನೂರ ಎಂಬತ್ತುಕೋಟಿ ರುದ್ರ-ನಾರಾಯಣ-ಬ್ರಹ್ಮರಿಹರು. ಮುನ್ನೂರಾ ಎಂಬತ್ತುಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಹದಿನಾರುಲಕ್ಷದ ಮೇಲೆ ಸಾವಿರದ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಆಷಾಡಿಯೆಂಬ ಭುವನ ಆ ಭುವನದೊಳು ಲಲಾಟಾಕ್ಷನೆಂಬ ರುದ್ರಮೂರ್ತಿ ಇಹನು ಆ ರುದ್ರಮೂರ್ತಿಯ ಓಲಗದಲ್ಲಿ ಐನೂರೆಪ್ಪತ್ತೈದುಕೋಟಿ ವಿಷ್ಣು-ಬ್ರಹ್ಮ-ಇಂದ್ರ-ಚಂದ್ರಾದಿತ್ಯರಿಹರು. ಐನೂರೆಪ್ಪತ್ತೈದುಕೋಟಿ ರುದ್ರರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ನಾಲ್ವತ್ತಾರುಸಾವಿರದ ನಾನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮಹಾದೇವವೆಂಬ ಭುವನ. ಆ ಭುವನದೊಳು ಅನಂತಬ್ರಹ್ಮಾಂಡಸಂಹಾರನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಇನ್ನೂರಾ ಮೂವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರು, ಇಂದ್ರ-ಚಂದ್ರಾದಿತ್ಯರು, ಇನ್ನೂರಾಮೂವತ್ತುಕೋಟಿ ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತಾರುಸಾವಿರದ ಎಂಟುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮಾಕೋಟವೆಂಬ ಭುವನ. ಆ ಭುವನದೊಳು ಮಹಾನಂದನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ನಾನೂರಮೂವತ್ತುಕೋಟಿ ರುದ್ರ-ಬ್ರಹ್ಮ-ನಾರಾಯಣರಿಹರು. ನಾನೂರಮೂವತ್ತುಕೋಟಿ ಇಂದ್ರ-ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತಾರು ಲಕ್ಷದ ಮೇಲೆ ಸಾವಿರದಾ ಒಂಬಯಿನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಯಾಮ್ಯವೆಂಬ ಭುವನ. ಆ ಭುವನದೊಳು ಅವ್ಯಕ್ತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಎಪ್ಪತ್ತೈದು ಕೋಟಿ ದೇವರ್ಕಳು ಮುನೀಂದ್ರರು ಇಂದ್ರ ಚಂದ್ರಾದಿತ್ಯರು ವೇದಪುರುಷರಿಹರು ನೋಡಾ. ಒಂಬತ್ತುನೂರಾ ಎಪ್ಪತ್ತೈದು ಕೋಟಿ ಬ್ರಹ್ಮ ನಾರಾಯಣ ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನಷ್ಟು ... -->