ಅಥವಾ

ಒಟ್ಟು 9 ಕಡೆಗಳಲ್ಲಿ , 1 ವಚನಕಾರರು , 7 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಥ ಬ್ರಹ್ಮಾಂಡವ ಎಂಬತ್ತಾರುಲಕ್ಷದ ಮೇಲೆ ಸಾವಿರದ ಎಂಟುನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಉಭಯನಖವೆಂಬ ಭುವನ. ಆ ಭುವನದೊಳು ಉಪಮಾತೀತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬಯಿನೂರಾ ಇಪ್ಪತ್ತೈದು ಕೋಟಿ ಬ್ರಹ್ಮ ನಾರಾಯಣ ರುದ್ರಾದಿಗಳಿಹರು ನೋಡಾ. ಒಂಬಯಿನೂರಾ ಇಪ್ಪತ್ತೈದು ಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತೇಳು ಲಕ್ಷದ ಮೇಲೆ ಸಾವಿರದಾ ಒಂಬಯಿನೂರಾ ಎಪ್ಪತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಭಸ್ಮಾಂತಕವೆಂಬ ಭುವನ. ಆ ಭುವನದೊಳು ದೇವದೇವನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಎಂಬತ್ತೈದು ಕೋಟಿ ಬ್ರಹ್ಮ-ನಾರಾಯಣ-ರುದ್ರರಿಹರು. ಒಂಬತ್ತುನೂರಾ ಎಂಬತ್ತೈದು ಕೋಟಿ ಇಂದ್ರಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ನಾಲ್ಕು ಲಕ್ಷದ ಮೇಲೆ ಸಾವಿರದಾ ಒಂಬಯಿನೂರಾ ಮೂವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಹರವೆಂಬ ಭುವನ. ಆ ಭುವನದೊಳು ಸಂಹಾರತಾಂಡವನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರ ಅರುವತ್ತೈದು ಕೋಟಿ ನಾರಾಯಣ ರುದ್ರ ಬ್ರಹ್ಮಾದಿಗಳಿಹರು ನೋಡಾ. ಒಂಬತ್ತುನೂರಾ ಅರುವತ್ತೈದು ಕೋಟಿ ವೇದಪುರುಷರು ಮುನೀಂದ್ರರು ಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ಎಂಬತ್ತೈದುಲಕ್ಷದ ಮೇಲೆ ಸಾವಿರದ ಎಂಟುನೂರಾನಾಲ್ವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಊಧ್ರ್ವಶೇಷವೆಂಬ ಭುವನ. ಆ ಭುವನದೊಳು ಊಧ್ರ್ವಪಾದನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬಯಿನೂರಾ ಇಪ್ಪತ್ತುಕೋಟಿ ದೇವರ್ಕಳು ವೇದಪುರುಷರು ಮುನೀಂದ್ರರು ಇಂದ್ರಚಂದ್ರಾದಿತ್ಯರು ಇಹರು ನೋಡಾ. ಒಂಬಯಿನೂರಾ ಇಪ್ಪತ್ತುಕೋಟಿ ಬ್ರಹ್ಮ ನಾರಾಯಣ ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತಾರು ಲಕ್ಷದ ಮೇಲೆ ಸಾವಿರದಾ ಒಂಬಯಿನೂರಾ ಐವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಯಾಮ್ಯವೆಂಬ ಭುವನ. ಆ ಭುವನದೊಳು ಅವ್ಯಕ್ತನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಎಪ್ಪತ್ತೈದು ಕೋಟಿ ದೇವರ್ಕಳು ಮುನೀಂದ್ರರು ಇಂದ್ರ ಚಂದ್ರಾದಿತ್ಯರು ವೇದಪುರುಷರಿಹರು ನೋಡಾ. ಒಂಬತ್ತುನೂರಾ ಎಪ್ಪತ್ತೈದು ಕೋಟಿ ಬ್ರಹ್ಮ ನಾರಾಯಣ ರುದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತೈದು ಲಕ್ಷದ ಮೇಲೆ ಸಾವಿರದಾ ಒಂಬಯಿನೂರಾ ನಲವತ್ತೆಂಟು ಬ್ರಹ್ಮಾಂಡವನೊಳಕೊಂಡುದೊಂದು ಮೃತ್ಯುವೆಂಬ ಭುವನ. ಆ ಭುವನದೊಳು ಮೃತ್ಯುಂಜಯನೆಂಬ ರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಎಪ್ಪತ್ತುಕೋಟಿ ಚಂದ್ರಾದಿತ್ಯರು ವೇದಪುರುಷರು ಮುನೀಂದ್ರರು ದೇವರ್ಕಳಿಹರು ನೋಡಾ. ಒಂಬತ್ತುನೂರಾ ಎಪ್ಪತ್ತುಕೋಟಿ ರುದ್ರ ಬ್ರಹ್ಮ ನಾರಾಯಣ ಇಂದ್ರರಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಅಂಥ ಬ್ರಹ್ಮಾಂಡವ ತೊಂಬತ್ತೆರಡು ಲಕ್ಷದ ಮೇಲೆ ಸಾವಿರದ ಒಂಬಯಿನೂರಾ ಹದಿನೆಂಟು ಬ್ರಹ್ಮಾಂಡವನೊಳಕೊಂಡುದೊಂದು ನಿಯೋಕ್ತೃವೆಂಬ ಭುವನ. ಆ ಭುವನದೊಳು ಸರ್ವಗತನೆಂಬ ಮಹಾರುದ್ರಮೂರ್ತಿ ಇಹನು. ಆ ರುದ್ರಮೂರ್ತಿಯ ಓಲಗದಲ್ಲಿ ಒಂಬತ್ತುನೂರಾ ಐವತ್ತೈದು ಕೋಟಿ ರುದ್ರ ಬ್ರಹ್ಮ ನಾರಾಯಣರಿಹರು. ಒಂಬತ್ತು ನೂರಾ ಐವತ್ತೈದು ಕೋಟಿ ವೇದಪುರುಷರು ಮುನೀಂದ್ರರು ಚಂದ್ರಾದಿತ್ಯರು ದೇವರ್ಕಳಿಹರು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
-->