ಅಥವಾ

ಒಟ್ಟು 7 ಕಡೆಗಳಲ್ಲಿ , 4 ವಚನಕಾರರು , 6 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶುದ್ಧ ಮಿಶ್ರ ಸಂಕೀರ್ಣ ಪೂರ್ವ ಮಾರ್ಗಶೈವಂಗಳಲ್ಲಿ ಕರ್ಮಭಕ್ತಿಯಲ್ಲದೆ ನಿರ್ಮಳಸದ್ಭಕ್ತಿಯೆಲ್ಲಿಯದೊ ? ಒಮ್ಮೆ ಧರಿಸಿ ಒಮ್ಮೆ ಇರಿಸಿ, ಶುಚಿಯಾದೆನೆಂದು ಅಶುಚಿಯಾದೆನೆಂದು ಭವಿಯಾಗುತ್ತೊಮ್ಮೆ, ಭಕ್ತನಾಗುತ್ತೊಮ್ಮೆ ಒಪ್ಪಚ್ಚಿ ಹೊಲೆ, ಒಪ್ಪಚ್ಚಿ ಕುಲವೆಂದು ತೆರನರಿಯದಿಪ್ಪ ಬರಿಯ ಶುದ್ಧಶೈವವಂ ಬಿಟ್ಟು, ಬ್ರಹ್ಮ ವಿಷ್ಣು ರುದ್ರ ಮಾಹೇಶ್ವರರು ಒಂದೆಂದು ನುಡಿವ ದುಃಕರ್ಮ ಮಿಶ್ರವಂ ಬಿಟ್ಟು, ಹರನೆ ಹಿರಿಯನೆಂದು ಕಿರಿಯರೆಲ್ಲಾ ದೇವರೆಂದು ನುಡಿದು ಕಂಡ ಕಂಡವರ್ಗೆ ಹೊಡೆಗೆಡವ ವೇಶಿಯ ಸುತನಂತೆ ಸಂಕೀರ್ಣಕ್ಕೊಳಗಾದ ಸಂಕೀರ್ಣಶೈವಮಂ ನೋಡದೆ, ದೂರದಿಂ ನಮಿಸಿ ಅರ್ಪಿಸಿ ಶೇಷವರುಣಕರ್ತನಲ್ಲವೆಂದು ದೂರಸ್ತನಹ ಪೂರ್ವಶೈವಮಂ ತೊಲಗಿ, ಅಂಗದಲನವರತ ಲಿಂಗಮಂ ಧರಿಸಿರ್ದು ದೇಹೇಂದ್ರಿಯ ಮನಃ ಪ್ರಾಣ ಜ್ಞಾನ ಭಾವ ಒಮ್ಮುಖಮಂ ಮಾಡಿ, ಸದ್ಗುರುಕಾರುಣ್ಯಮಂ ಪಡೆದು, ಲಿಂಗವೇ ಪತಿ, ಗುರುವೆ ತಂದೆ, ಜಂಗಮವೇ ಲಿಂಗವೆಂದರಿದು, ದ್ರವ್ಯವೆಂಬುದು ಭೂತರೂಪು, ಪ್ರಸಾದವೆಂಬುದು ಲಿಂಗರೂಪವೆಂದು ತಿಳಿದು, ಲಿಂಗದ ಪಾದೋದಕವೇ ಲಿಂಗಕ್ಕೆ ಮಜ್ಜನವಾಗಿ ಲಿಂಗದ ಪ್ರಸಾದವೇ ಲಿಂಗಕ್ಕೆ ಆರೋಗಣೆಯಾಗಿ ಲಿಂಗದಿಂದ ನೋಡುತ್ತ ಕೇಳುತ್ತ ರುಚಿಸುತ್ತ ಮುಟ್ಟುತ್ತ ವಾಸಿಸುತ್ತ ಕೊಡುತ್ತ ಆನಂದಿಸುತ್ತ ಅಹಂ ಮಮತೆಗೆಟ್ಟು ಸಂದು ಸಂಶಯವರಿತು ಹಿಂದು ಮುಂದ ಹಾರದಿಪ್ಪುದೆ ವೀರಶೈವ. ಅದೆಂತೆಂದಡೆ: ಪಿತಾ ಗುರುಃ ಪತಿರ್ಲಿಂಗಂ, ಸ್ವಲಿಂಗಂ ಜಂಗಮಪ್ರಭುಃ ತಸ್ಮಾತ್ಸರ್ವಪ್ರಯತ್ನೇನ ತಸ್ಯೈವಾರಾಧನಂ ಕ ರು ಸ ಏವ ಸ್ಯಾತ್ಪ್ರಸಾದಸ್ತೇ ಭಕ್ತಿವಿತ್ತಸಮರ್ಪಿತಃ ತತ್ಪ್ರಸಾದಸ್ತು ಭೋಕ್ತವ್ಯಃ ಭಕ್ತೋವಿಗತಕಲ್ಮಷಃ ಎಂದುದಾಗಿ, ಇಂತಲ್ಲದಿರ್ದುದೆ ಇತರ ಶೈವ ಕಾಣಾ, ಸೌರಾಷ್ಟ್ರ ಸೋಮೇಶ್ವರಾ.
--------------
ಆದಯ್ಯ
ಹಿಡಿವೆನೆಂದಡೆ ಹಿಡಿಗೆ ಬಾರನವ್ವಾ. ತಡೆವೆನೆಂದಡೆ ಮೀರಿ ಹೋಹನವ್ವಾ. ಒಪ್ಪಚ್ಚಿ ಅಗಲಿದಡೆ ಕಳವಳಗೊಂಡೆ. ಚೆನ್ನಮಲ್ಲಿಕಾರ್ಜುನನ ಕಾಣದೆ ಆನಾರೆಂದರಿಯೆ ಕೇಳಾ, ತಾಯೆ.
--------------
ಅಕ್ಕಮಹಾದೇವಿ
ಅಚ್ಚ ಶರಣರು ನಿಮ್ಮ ನಿಚ್ಚ ನೆನೆವರು, ಬಚ್ಚ ಬರಿಯ ಮಾತನಾಡುವೆನು. ಒಪ್ಪಚ್ಚಿ ಅರೆಭಕ್ತಿ, ನೆನೆಯಲೀಯದು ನಿಮ್ಮ. ಮೆಚ್ಚರು ನಿಮ್ಮವರು ಎನ್ನನು ಕೂಡಲಸಂಗಮದೇವಾ.
--------------
ಬಸವಣ್ಣ
ಆಡುವುದಳವಟ್ಟಿತ್ತು, ಹಾಡುವುದಳವಟ್ಟಿತ್ತು, ಅರ್ಚನೆಯಳವಟ್ಟಿತ್ತು, ಪೂಜನೆಯಳವಟ್ಟಿತ್ತು, ನಿತ್ಯಲಿಂಗಾರ್ಚನೆ ಮುನ್ನವೆಯವಳವಟ್ಟಿತ್ತು. ಕೂಡಲಸಂಗನ ಶರಣರು ಬಂದಡೆ, ಏಗುವುದು, ಏ ಬೆಸೆನೆಂಬುದು ಒಪ್ಪಚ್ಚಿ ಅಳವಡದು. 303
--------------
ಬಸವಣ್ಣ
ಕೂಡಿ ಕೂಡುವ ಸುಖದಿಂದ ಒಪ್ಪಚ್ಚಿ ಅಗಲಿ ಕೂಡುವ ಸುಖ ಲೇಸು, ಕೆಳದಿ ? ಒಚ್ಚೊತ್ತಗಲಿದಡೆ ಕಾಣದಿರಲಾರೆ. ಎನ್ನ ದೇವ ಚೆನ್ನಮಲ್ಲಿಕಾರ್ಜುನನಗಲಿಯಗಲದ ಸುಖವೆಂದಪ್ಪುದೊ ?
--------------
ಅಕ್ಕಮಹಾದೇವಿ
ಜಂಗಮವೆ ಲಿಂಗವೆಂದು ನಂಬಿದ ಬಳಿಕ ಸಂದೇಹವಿಲ್ಲದೆ ಇರಬೇಕು ನೋಡಾ. ಸಂದುಸಂಶಯವಳಿದು ಸಯವಾದ ಭಕ್ತಿ, ಹಿಮ್ಮೆಟ್ಟಿದಡೆ ಹೋಯಿತ್ತಲ್ಲಾ. ಒಪ್ಪಚ್ಚಿ ಬಳಿಕ ಕಿಂಕಿಲನಾಗಿ, ಮತ್ತೊಪ್ಪಚ್ಚಿ ಬಳಿಕ ಅಹಂಕಾರಿಯಾದಡೆ ಹೋಗ ನೂಕುವ ಕಾಣಾ ನಮ್ಮ ಗುಹೇಶ್ವರಲಿಂಗವು.
--------------
ಅಲ್ಲಮಪ್ರಭುದೇವರು
-->