ಒಟ್ಟು 3 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಶಿಷ್ಯನ ಮುಖದಿಂದಾದ ಗುರುವಿಂಗೆ ಶಿಷ್ಯನ ಪ್ರಸಾದ.[ಶಿಷ್ಯ]ಪ್ರಸಾದ ಗುರುವಿಂಗಲ್ಲದೆ ಗುರುವಿನ ಪ್ರಸಾದ ಶಿಷ್ಯಂಗಿಲ್ಲ !ಇದು ಕಾರಣ,_ಗುರುವೆ ಓಗರ, ಓಗರವೆ ಅರ್ಪಿತ.ಪ್ರಸಾದ ಪ್ರಸಾದವೆಂದು ಉಂಡುಂಡು ಸವೆದರಲ್ಲಾ !ಸುಡು ಸುಡು, ಶಬ್ದಸೂತಕರ ಕೈಯಲ್ಲಿ,ಸ್ಥಾವರ ವಿಧಿವಶವಾಯಿತ್ತು ಗುಹೇಶ್ವರಾ.
ಭಕ್ತ, ಪ್ರಸಾದವ ಕೊಂಡು ಪ್ರಸಾದವಾದಪ್ರಸಾದ, ಭಕ್ತನ ನುಂಗಿ ಭಕ್ತನಾಯಿತ್ತು.ಭಕ್ತನೂ ಪ್ರಸಾದವು ಏಕಾರ್ಥವಾಗಿ_ಲಿಂಗಸಂಗವ ಮರೆದು,ಭಕ್ತನೆ ಭವಿಯಾದ, ಪ್ರಸಾದವೆ ಓಗರವಾಯಿತ್ತು.ಮತ್ತೆ ಆ ಓಗರವೆ ಭವಿ, ಭವಿಯೆ ಓಗರವಾಯಿತ್ತು.ಓಗರ ಭವಿ ಎಂಬೆರಡೂ ಇಲ್ಲದೆಓಗರವೆ ಆಯಿತ್ತು ಗುಹೇಶ್ವರಾ.