ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಕ್ತಂಗೆ ಬೇಡದ ಭಾಷೆ, ನಿನಗೆ ಕೊಡದ ಭಾಷೆ. ಭಕ್ತಂಗೆ ಓಡದ ಭಾಷೆ, ನಿನಗೆ ಕಾಡುವ ಭಾಷೆ. ಭಕ್ತಂಗೆ ಸತ್ಯದ ಬಲ, ನಿನಗೆ ಶಕ್ತಿಯ ಬಲ. ಇಬ್ಬರ ಗೆಲ್ಲ ಸೋಲಕ್ಕೆ ಕಡೆಯಿಲ್ಲ. ಈ ಇಬ್ಬರಿಗೆಯೂ ಒಡೆಯರಿಲ್ಲದ ಲೆಂಕ. ಇನ್ನು ಭಕ್ತನು ಭಕ್ತಿಯ ಛಲವ ಬಿಡನಾಗಿ. ಭಕ್ತ ಸೋತಡೆ, ಭಕ್ತನದೆ ಗೆಲುವು. ಭಕ್ತ ಗೆದ್ದಡಂತು ಗೆಲುವು? ಇದ ನೀನೆ ವಿಚಾರಿಸಿಕೊಳ್ಳಾ, ಭಕ್ತದೇಹಿಕದೇವ ಸಕಳೇಶ್ವರಾ.
--------------
ಸಕಳೇಶ ಮಾದರಸ
ಮೂರುಲೋಕಕೊಂದು ಪುಷ್ಪ ! ಆ ಪುಷ್ಪದ ಬಂಡ ಉಣಬಂದ ತುಂಬಿಯ ನೋಡಾ ! ತುಂಬುತ್ತ ಕೆಡಹುತ್ತಲೈದಾವೆ ಅವು ತಮ್ಮ ಪೂರ್ವಜನ್ಮಂಗಳಿಗೆ ! ಅದಕ್ಕೆ ಇಕ್ಕಿದೆನು ಒರೆಯ, ಕಟ್ಟಿದೆನು ತೊಡರ, ಓಡದ ಬಿರುದು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
-->