ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಓದಿದರೆ ಓದಬಹುದು ಅಧಮ ಮೂಢರಮುಂದೆ ; ಅರಸು ಪ್ರಧಾನಿಗಳಾದ ಪುರುಷರ ಮುಂದೆ ಓದಲಾಗದು. ಕುರುಡನ ಕೈಯೊಳಗೆ ಕನ್ನಡಿಯ ಕೊಟ್ಟರೆ ನೋಡಬಲ್ಲನೇ ಕಣ್ಣುಳ್ಳವನಲ್ಲದೆ? ಹುಟ್ಟಿದವರು ಬಲ್ಲರು, ಹುಟ್ಟದವರು ಅರಿಯರು. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಕರಸ್ಥಲದಲ್ಲಿ ಲಿಂಗವ ಧರಿಸಿ ಅನ್ಯದೈವಕ್ಕೆ ತಲೆವಾಗದಾತನ ಲಿಂಗವಂತನೆಂಬೆನಯ್ಯಾ. ಕರಸ್ಥಲದಲ್ಲಿ ಲಿಂಗವ ಧರಿಸಿ ಭವಿಸಂಗವ ಮಾಡದಾತನ ಲಿಂಗವಂತನೆಂಬೆನಯ್ಯಾ. ಕರಸ್ಥಲದಲ್ಲಿ ಲಿಂಗವ ಧರಿಸಿದಾತ ಜಡಶೈವರ ಹೊದ್ದಲಾಗದು, ಶೈವರು ಹೇಳಿದ ಶಾಸ್ತ್ರವ ಓದಲಾಗದು, ಅನ್ಯಮಂತ್ರ ಅನ್ಯಜಪಮಾಲಿಕೆಯ ಮಾಡಲಾಗದು, ಲಿಂಗಬಾಹ್ಯ ಸತಿಸುತರ ಸೋಂಕಲಾಗದು. ಕರಸ್ಥಲದಲ್ಲಿ ಲಿಂಗವ ಧರಿಸಿದಾತ ಉದಯಾಸ್ತಮಾನವೆನ್ನದೆ ಶಿವಪೂಜೆ ಶಿವಮಂತ್ರ ಶಿವಾರ್ಪಣ ಶಿವಶಾಸ್ತ್ರ ಶಿವಯೋಗದಲ್ಲಿರುವಾತನೆ ಲಿಂಗವಂತನೆಂಬೆನಯ್ಯಾ. ಇದಮೀರಿ; ಕರಸ್ಥಲದಲ್ಲಿ ಲಿಂಗವ ಧರಿಸಿ ತನ್ನ ಮನೆಯಲ್ಲಿ ಅನ್ಯದೈವ ಭವಿಮಿಶ್ರ ಅನ್ಯಬೋಧೆ ಭವಿಶಾಸ್ತ್ರವುಳ್ಳಾತನ ಶುದ್ಧಭವಿಯೆಂಬೆನಯ್ಯಾ. ಅದೆಂತೆಂದಡೆ; ``ಅಭಕ್ತಜನಸಂಗಶ್ಚ ಆಮಂತ್ರಂಚ ಅನಾಗಮಃ ಅನ್ಯದೈವಪರಿತ್ಯಾಗೋ ಲಿಂಗಭಕ್ತಸ್ಯ ಲಕ್ಷಣಂ ಶಿವಸ್ಯ ಶಿವಮಂತ್ರಸ್ಯ ಶಿವಾಗಮಸ್ಯ ಪೂಜನಂ ಶಿವಶೇಷಶೀಲಸಂಬಂಧೋ ಲಿಂಗಭಕ್ತಸ್ಯ ಲಕ್ಷಣಂ ಲಿಂಗಧಾರೀ ಸುಭಕ್ತಶ್ಚ ಲಿಂಗಬಾಹ್ಯಸತೀಸುತಃ ಅಲಿಂಗಿನೀ ಚುಂಬಕಶ್ಚ ರೌರವಂ ನರಕಂ ವ್ರಜೇತ್ ಎಂದುದಾಗಿ ಗುರುವಾಕ್ಯವ ಮೀರಿ ನಡೆವ ಮಹಾಪಾತಕರ ಮುಖವ ತೋರದಿರಾ, ಸೆರೆಗೊಡ್ಡಿ ಬೇಡಿಕೊಂಬೆ, ದಯದಿಂದ ನೋಡಿ ರಕ್ಷಿಸು ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
-->