ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎನ್ನ ನೇತ್ರ ಪ್ರಸಾದವಾಯಿತ್ತಯ್ಯಾ. ಎನ್ನ ಶ್ರೋತ್ರ ಪ್ರಸಾದವಾಯಿತ್ತಯ್ಯಾ. ಎನ್ನ ಘ್ರಾಣ ಪ್ರಸಾದವಾಯಿತ್ತಯ್ಯಾ. ಎನ್ನ ಜಿಹ್ವೆ ಪ್ರಸಾದವಾಯಿತ್ತಯ್ಯಾ. ಎನ್ನ ತ್ವಕ್ಕು ಪ್ರಸಾದವಾಯಿತ್ತಯ್ಯಾ. ಎನ್ನ ತನು ಪ್ರಸಾದವಾಯಿತ್ತಯ್ಯಾ. ಎನ್ನ ಮನ ಪ್ರಸಾದವಾಯಿತ್ತಯ್ಯಾ. ಎನ್ನ ಪ್ರಾಣ ಪ್ರಸಾದವಾಯಿತ್ತಯ್ಯಾ. ಎನ್ನ ಭಾವ ಪ್ರಸಾದವಾಯಿತ್ತಯ್ಯಾ. ಎನ್ನ ಜೀವ ಪ್ರಸಾದವಾಯಿತ್ತಯ್ಯಾ. ಎನ್ನ ಸಕಲಕರಣೇಂದ್ರಿಯಂಗಳೆಲ್ಲ ಪ್ರಸಾದವಾಗಿ, ಅಖಂಡೇಶ್ವರಾ, ನಿಮ್ಮ ಮಹಾಪ್ರಸಾದದ ಬೆಳಗಿನೊಳಗೆ ಓಲಾಡುತ್ತಿದ್ದೆನಯ್ಯಾ.
--------------
ಷಣ್ಮುಖಸ್ವಾಮಿ
ಮರ್ತ್ಯಲೋಕದ ಮಹಾಮನೆ ಹಾಳಾಗಿ ಹೋಗಬಾರದೆಂದು ಕರ್ತನಟ್ಟಿದನಯ್ಯಾ ಒಬ್ಬ ಶರಣನ ! ಆ ಶರಣ ಬಂದು ಕಲ್ಯಾಣವೆಂಬ ಶಿವಪುರವ ಕೈಲಾಸವ ಮಾಡಿ ರುದ್ರಗಣ ಪ್ರಮಥಗಣಂಗಳೆಲ್ಲರ ಹಿಡಿತಂದು ಅಮರಗಣಂಗಳೆಂದು ಹೆಸರಿಟ್ಟು ಕರೆದು, ಅಗಣಿತಗಣಂಗಳೆಲ್ಲರ ಹಿಡಿತಂದು, ಅಸಂಖ್ಯಾತರೆಂಬ ಹೆಸರಿಟ್ಟು ಕರೆದು, ಭಕ್ತಿಯ ಕುಳಸ್ಥಲವ ಶ್ರುತದೃಷ್ಟಪವಾಡದಿಂದ ಮರೆದು ತೋರಿ, ಜಗವರಿಯಲು ಶಿವಾಚಾರವ ಧ್ವಜವನೆತ್ತಿಸಿ ಮರ್ತ್ಯಲೋಕ ಶಿವಲೋಕವೆರಡಕ್ಕೆ ನಿಚ್ಚಿಣಿಗೆಯಾದನು. ಆ ಶಿವಶರಣನ ಮನೆಯೊಳಗಿಪ್ಪ ಶಿವಗಣಂಗಳ ತಿಂಥಿಣಿಯ ಕಂಡು, ಎನ್ನಮನ ಉಬ್ಬಿಕೊಬ್ಬಿ ಓಲಾಡುತ್ತಿದ್ದೆನಯ್ಯಾ ! ನಮ್ಮ ಗುಹೇಶ್ವರನ ಶರಣ ಸಂಗನಬಸವಣ್ಣನ ದಾಸೋಹದ ಘನವನೇನೆಂದೆನಬಹುದು ನೋಡಾ ಸಿದ್ಧರಾಮಯ್ಯಾ.
--------------
ಅಲ್ಲಮಪ್ರಭುದೇವರು
-->