ಅಥವಾ

ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಡಿದ ಭಕ್ತಿಗೆ ಕೈಲಾಸಕ್ಕೆ ಹೋದೆಹೆನೆಂಬುದು ಕೈಕೂಲಿ. ಭಾಷೆಗೆ ತಪ್ಪಿ ಓಸರಿಸಿದ ಮತ್ತೆ ಅನಿಹಿತವ ಹೇಳಿದಲ್ಲಿ ಮತ್ತೆ ಘಾತಕತನದಿಂದ ಎಯ್ದಿಹೆನೆಂಬುದು ಭಕ್ತಿಗೆ ವಿಹಿತವಲ್ಲ. ದೃಷ್ಟದಲ್ಲಿ ಕೊಟ್ಟುದ ಲಕ್ಷಿಸಲರಿಯದೆ, ಅಲಕ್ಷ್ಯವ ಲಕ್ಷಿಸಿ ಕಾಂಬುದಕ್ಕೆ ಲಕ್ಷ್ಯವೇನು ? ಅದು ನಿರೀಕ್ಷಣೆಯ ಲಕ್ಷ್ಯದಿಂದಲ್ಲದೆ, ಆತ್ಮಂಗೆ ಲಕ್ಷ್ಯವಿಲ್ಲ. ಇಂತೀ ಉಭಯದಲ್ಲಿ ಲಕ್ಷಿತವಾದವಂಗೆ ಮರ್ತ್ಯ ಕೈಲಾಸವೆಂಬುದು; ತನ್ನರಿವು ನಿಶ್ಚಯವಾದಲ್ಲಿ ಅದೆ ಲಕ್ಷ್ಯ. ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನ ಅಲ್ಲಿ ಇಲ್ಲಿ ಎಲ್ಲಿಯೂ ತಾನೆ.
--------------
ಮೋಳಿಗೆ ಮಹಾದೇವಿ
ಮನೆಯಲ್ಲಿ ವೀರ ಧೀರ; ರಣದಲ್ಲಿ ಓಸರಿಸಿದ ಮತ್ತೆ ಭಾಷೆಯ ಬಂಟನಲ್ಲ. ನೀ ಬಂದ ದೇಶ, ನೀ ಮಾಡುವ ಮಾಟ ನೀ ಪ್ರಮಥರೆಲ್ಲರ ಹಂಗಿಸುವ ನಿರಂಗವಾಚಕನ ಕೂಡಿಹೆನೆಂಬ ಸಂಧಿಯಲ್ಲಿಯೇ ನಿಂದಿತ್ತು ನಿಜಲಿಂಗದಕೂಟ. ಆ ಸುಸಂಗವ ನಿನ್ನ ನೀನೆ ನೋಡಿಕೊ ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ.
--------------
ಮೋಳಿಗೆ ಮಹಾದೇವಿ
-->