ಅಥವಾ

ಒಟ್ಟು 3 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತೆಯುಂ ಕ ಮಹಾಕಾಳಿ ಖ ಸರಸ್ವತಿ ಗ ಗೌರಿ ಘ ಮಂತ್ರಶಕ್ತಿ ಙ ಆತ್ಮಶಕ್ತಿ ಚ ಭೂತಮಾತೆ ಛ ಲಂಬೋದರಿ ಜ ದ್ರಾವಿಣಿ ರುsು ನಗರಿ ಞ ಖೇಚರಿ ಟ ಮಂಜರಿ ಠ ರೂಪಿಣಿ ಇಂತಿ ಮಹಾಲಿಂಗದ ಶಕ್ತಿಯೂಧ್ರ್ವಾಬ್ವಾಖ್ಯದನಾಹತಚಕ್ರದ ದ್ವಾದಶಕೋಷ್ಠದಳ ನ್ಯಸ್ತ ದ್ವಾದಶರುದ್ರಶಕ್ತಿಯರಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ,.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಆ ಪರಶಿವನ ಅಷ್ಟಾಂಗದಿಂದಾದ ಬ್ರಹ್ಮಾಂಡದ ಸ್ಥಿರ ಚರ ಪ್ರಾಣಿಗಳ ಲಯವ ನೋಡಿ ಚಿಂತೆಯೊಳಗಾಗಿ, ಕಂತುಹರನ ಧ್ಯಾನವ ಮಾಡಲು, ಆ ಹರ ಗುರುರೂಪವ ತಾಳ್ದು ಬಂದು, ತನ್ನ ಚಿಂತಿಸಿದ ಸುಜ್ಞಾನಿಗಳಿಗೆ, ಮನವನೊಬ್ಬುಳಿಗೊಳಿಸುವುದಕ್ಕೆ ಕಾರಣವೆಂದು ಹೇಳಿದ ಷಣ್ಮುಖ, ಶಾಂಭವಿ, ಖೇಚರಿ, ಭೂಚರಿ, ಸಾಚರಿ, ಕುರಂಗ, ಪಾಲೋತಕ, ಹಠ, ಲಯ, ಲಂಬಿಕ, ಮೊದಲಾದ ಅನಂತ ಮುದ್ರೆಗಳ ಸಾಧಿಸಿ, ಆ ಮುದ್ರೆ ಸಾಧನದಲ್ಲಿ ಕಂಡ, ಮಾಯ, ಛಾಯ, ಅಭ್ರಛಾಯ, ಪುರುಷಛಾಯ, ಮಿಂಚಿನ ಛಾಯ, ಬಳ್ಳಿಮಿರುಪಿನ ಛಾಯ, ಆರು ವರ್ಣದ ಛಾಯ, ಮೃತ್ಯುವಿನ ಛಾಯ, ಜೀವ ಜಪ ಮರಣ ಚಿನ್ನ ಕನಸಸಂಭ್ರಮ, ಕುಂಡಲಿನೋಟ, ಘೋಷಲಂಪಟ, ಮಾನಸಪೂಜೆ, ಬೈಲವಾಣಿ, ಪಶ್ಚಿಮಕೋಣೆ, ಆತ್ಮಭೆಟ್ಟಿ, ಮಂತ್ರಪಾಠ, ಒಳಬೆಳಗು, ಹೊರಬೆಳಗು ಪರಿಪರಿಯ ಬೆರಗುಗಳ ತಿಳಿದು, ಇದೇ ನಿಜಬ್ರಹ್ಮವೆಂದು ಹೆಮ್ಮೆ ೈಸಿ, ಆಸೆವೊಡಿಯದೆ, ಕ್ಲೇಶ ಕಡಿಯದೆ, ಘಾಶಿಯಾಗಿ ಹೇಸಕಿಯೊಳಗೆ ಮುಳಿಗಿ ಮುಂದುಗಾಣದೇ ಹೋದರು ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಸಾಸಿರದೆಂಟನೆಯ ದಳದಲ್ಲಿ ಖೇಚರಿ ಚಲ್ಲಣಗಟ್ಟಿ, ವಾಸುಗಿಯ ಫಣಾಮಣಿ ಪ್ರಜ್ವಲಿಸುವುದ ಕಂಡೆ. ಅಸುರರೆಲ್ಲ ತಮತಮಗಂಜಿ ಓಸರಿಸಿ ಮುಂದೆ ನಡೆವಲ್ಲಿ, ನಾಸಿಕ ಮನವ ಮುಸುಕುವುದ ಕಂಡೆ, ತಾ ಸುಖಸ್ವರೂಪನಾದ; ಸುಖ ಮುಖಪ್ರವೇಶದಿಂದ! ಗೋಸಾಸಿರ ನಡೆಗೆಟ್ಟವು ಗುಹೇಶ್ವರಾ, ನಿಮ್ಮುವ ನೆರೆದೆನಾಗಿ.
--------------
ಅಲ್ಲಮಪ್ರಭುದೇವರು
-->