ಅಥವಾ

ಒಟ್ಟು 42 ಕಡೆಗಳಲ್ಲಿ , 19 ವಚನಕಾರರು , 42 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಂದಣಜನ್ಮದ ಸಂಸಾರವ ಮರೆದು, ಮುಂದಣ ಭವಬಂಧನಂಗಳ ಜರಿದು, ಸಂದೇಹ ಸಂಕಲ್ಪಗಳ ಹರಿದು, ನಿಮ್ಮ ಅವಿರಳಭಕ್ತಿಯ ಬೆಳಗಿನಲ್ಲಿ ಬೆರೆದು ಓಲಾಡುವ ಮಹಾಮಹಿಮರ ತೋರಿ ಬದುಕಿಸಯ್ಯ ಎನ್ನ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಪರಧನಕ್ಕೆ ಇಚ್ಫೈಸುವನ್ನಕ್ಕರ, ಪರಸ್ತ್ರೀಗೆ ಮೋಹಿಸುವನ್ನಕ್ಕರ, ಪರದೈವವ ಭಜಿಸುವನ್ನಕ್ಕರ, ಪರಪಾಕವ ಕೊಂಬನ್ನಕ್ಕರ, ಪರಹಿಂಸೆಗೆಡದನ್ನಕ್ಕರ ಮಹೇಶ್ವರನೆನಲಾಗದು. ಹುಸಿ ನಾಶವಾಗದನ್ನಕ್ಕರ, ಕಳವು ಕುಚೇಷ್ಟೆಯ ನೀಗದನ್ನಕ್ಕರ, ಉಪಾಧಿಯನುಸರಣೆಯ ದಾಟದನ್ನಕ್ಕರ ಮಹೇಶ್ವರನೆನಲಾಗದು. ಭವಿಯಸಂಪರ್ಕ ಬಿಚ್ಚದನ್ನಕ್ಕರ, ವೇಷಗಳ್ಳರ ಜರಿದು ನೂಕದನ್ನಕ್ಕರ, ಲೋಕಲೌಕಿಕಚರಿಯ ಹರಿಯದನ್ನಕ್ಕರ, ಸ್ವತಂತ್ರತ್ವಾನುಭಾವಿಯಾಗದನ್ನಕ್ಕರ ಮಹೇಶ್ವರನೆನಲಾಗದು. ಗುರುನಿರಂಜನ ಚನ್ನಬಸವಲಿಂಗಕ್ಕೆ ಅಂಗವೆಂದು ನಷ್ಟಬದ್ಧರಿಗೆರಗುವ ಭ್ರಷ್ಟಭವಿಗಳಿಗೊಮ್ಮೆ ಮಹೇಶ್ವರನೆಂದರೆ ಅಘೋರನರಕ ತಪ್ಪದು.
--------------
ದೇಶಿಕೇಂದ್ರ ಸಂಗನಬಸವಯ್ಯ
ಇಂತಪ್ಪ ನಿರ್ಣಯವನು ಸ್ವಾನುಭಾವ ಗುರುಮುಖದಿಂ ತಿಳಿದು ವಿಚಾರಿಸಿಕೊಳ್ಳದೆ, ಬ್ಥಿನ್ನಗುರುವಿನ ಕೈಯಲ್ಲಿ ಉಪದೇಶವ ಹಡದು, ಲಿಂಗವ ಪಡಕೊಂಡು ಗುರುಕಾರುಣ್ಯ ಉಳ್ಳವರೆಂದು ಲೋಕದ ಮುಂದೆ ಬೊಗಳುವ ಮೂಳಹೊಲೆಯರ ಕಟಬಾಯ ಸೀಳಿ ನಿಮ್ಮ ಗಣಂಗಳ ಪಾದರಕ್ಷೆಯಿಂದ ಹೊಡೆದಡೆ, ಎನ್ನ ಸಿಟ್ಟು ಮಾಣದು. ಅದೇನು ಕಾರಣವೆಂದಡೆ, ನೀವು ಪಡಕೊಂಡ ಗುರುವಿಗೆ ಗುರುಕಾರುಣ್ಯವಿಲ್ಲ. ಅವನ ಗುರುವಿಗೆ ಮುನ್ನವೇ ಗುರುಕಾರುಣ್ಯವಿಲ್ಲ. ನಿಮಗಿನ್ನಾವ ಕಡೆಯ ಗುರುಕಾರುಣ್ಯವೊ? ಎಲೆ ಮರುಳ ಮಾನವರಿರಾ ಗುರುಕಾರುಣ್ಯವಾದ ಬಳಿಕ ತನು-ಮನ-ಧನದಾಸೆ ಹಿಂದುಳಿದು ಗುರು-ಲಿಂಗ-ಜಂಗಮದಾಶೆ ಮುಂದುಗೊಂಡಿರಬೇಕು. ಗುರುಕಾರುಣ್ಯವಾದಡೆ ಆಣವಮಲ, ಮಾಯಾಮಲ, ಕಾರ್ಮಿಕಮಲಗಳ ಜರಿದು ಇಷ್ಟ-ಪ್ರಾಣ-ಭಾವದಲ್ಲಿ ಭರಿತವಾಗಬೇಕು. ಗುರುಕಾರುಣ್ಯವಾದಡೆ ಲಿಂಗವು ಆರಿಗೂ ತೋರದಿರಬೇಕು. ಇಷ್ಟುಳ್ಳಾತನೆ ಗುರುಕಾರುಣ್ಯ ಉಳ್ಳವನೆಂದನಯ್ಯಾ ನಿಮ್ಮ ಶರಣ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಅಂದು ಬಸವಣ್ಣ ಬಂದು ಜರಿದು ಹೋದುದ ಮರೆದೆನೆ ಆ ನೋವ! ಜರಿದುದೆ ಎನಗೆ ದೀಕ್ಷೆಯಾಯಿತ್ತು! ಆ ದೀಕ್ಷೆಯ ಗುಣದಿಂದ ಫಲಪದಕ್ಕೆ ದೂರವಾದೆ ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ ಬಸವಣ್ಣನೆನ್ನ ಪರಮಾರಾಧ್ಯ!
--------------
ಸಿದ್ಧರಾಮೇಶ್ವರ
'ನ ಗುರೋರದ್ಥಿಕಂ ನ ಗುರೋರದ್ಥಿಕಂ ನ ಗುರೋರಧಿಕಂ' ಎಂಬ ಹರವಾಕ್ಯವನರಿದು, ಲಿಂಗಾಚಾರಾದಿ ಪ್ರಾಣವಾಗಿ ಜಂಗಮನುಭಾವಪ್ರಸಿದ್ಭ ಪ್ರಮಾಣಚರಿತೆಯನರಿಯದೆ ಗೊಡ್ಡುಮಾತನೊಡ್ಡಿಕೊಂಡು ಎಡ್ಡೆಡ್ಡಿಂದೆ ವರ್ತಿಸುವ ಧಡ್ಡ ಕೋಟಲೆಯ ನೋಡಾ ! ಗುರುವೆನ್ನ ಕರಸ್ಥಲದಲುಂಟೆಂದು ಇರವ ಶೋಧಿಸಿ ಜರಿದು ಹರಿದು ಹಿರಿಯರೆನಿಸಿ ಮೆರೆವ ಗುರುದ್ರೋಹಿಗಳ ನೆರೆಯಲಾಗದು ನಡೆನುಡಿಸಂಪನ್ನರು ಗುರುನಿರಂಜನ ಚನ್ನಬಸವಲಿಂಗ ಸಾಕ್ಷಿಯಾಗಿ.
--------------
ದೇಶಿಕೇಂದ್ರ ಸಂಗನಬಸವಯ್ಯ
ಮೂರು ಮಲವ ಜರಿದು, ಮೂರು ಮಲವ ತಿಂದು, ಆರು ಮಂದಿಯ ಕೊಂದು, ಆರು ಮಂದಿಯ ಸಂಗವ ಮಾಡಿ, ಮೂರು ಮಂದಿಯ ಕೊಂದು, ಮೂವರ ಕೂಡಿ ಗುಲ್ಲುಮಾಡದೆ ಸಲ್ಲಡಗಿ, ಸೂರ್ಯನ ಪ್ರಕಾಶದಲ್ಲಿ ಸತ್ತು ಚಲಿಸುತಿರ್ದ ನಿಮ್ಮ ಭಕ್ತ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಜಂಗಮ ಜಂಗಮವೆಂದು ನುಡಿದು, ಜಗದ ಹಂಗಿಗರಾಗಿ ಇರಲಾಗದು. ಜಗದ ಕರ್ತನ ಕೈಯಲ್ಲಿ ಹಿಡಿದುಕೊಂಡು ಜಂಗುಳಿಗಳ ಬಾಗಿಲ ಕಾಯಲಾಗದು. ಜಂಗಮದ ಸುಳುಹು ಎಂತಿರಬೇಕೆಂದರೆ, ತನ್ನ ನಂಬಿದ ಸಜ್ಜನರ ಸದ್ಭಕ್ತರಲ್ಲಿಗೆ ಲಿಂಗವಾಗಿ ಗಮಿಸಿ, ತಾ ಕಂಡ ಲಿಂಗಾಂಗವನು ಅಲ್ಲಿಯೇ ನಿಕ್ಷೇಪಿಸಿ, ತಾ ನಿರ್ಗಮನಿಯಾಗಿ ಸುಳಿಯಬಲ್ಲರೆ, ಜಂಗಮಲಿಂಗವದು ಇಂತಲ್ಲದೆ ಕಂಡವರ ಕಾಡಿ ಬೇಡಿಕೊಟ್ಟರೆ ಕೊಂಡಾಡಿ, ಕೊಡದಿದ್ದಡೆ ಜರಿದು, ತಾಗು ನಿರೋಧಕ್ಕೆ ಗುರಿಯಾಗಿ ನೋವುತ್ತ, ಬೇವುತ್ತ ಧಾವತಿಗೊಂಬ ಗಾವಿಲರ ಎಂತು ಜಂಗಮವೆಂಬೆ, ಬಸವಪ್ರಿಯ ಕೂಡಲಚೆನ್ನಬಸವಣ್ಣಾ?
--------------
ಹಡಪದ ಅಪ್ಪಣ್ಣ
ಇಂತು ನಿನ್ನಯ ಭವದ ಚಿಂತೆಗೆಟ್ಟಿತು ಬ್ರಹ್ಮ ನಿಶ್ಚಿಂತನಾದನೈ, ಸಕಲದ ವಸ್ತು ಹಲವನು ಜರಿದು ತತ್ವ ಮೂವತ್ತಾರ ವ್ಯರ್ಥವೆಂದೆ ಕಳೆದು, ಸುಚಿತ್ತದಿಂದಾ ಮತ್ತೆ ಕಪಿಲಸಿದ್ಧಮಲ್ಲಿಕಾರ್ಜುನನೆಂಬ ತತ್ವ ತುರಿಯದೊಳಗೆ ಲೀಯವಾದೆ.
--------------
ಸಿದ್ಧರಾಮೇಶ್ವರ
ಆ ಪರಶಿವನ ಮಾಯಾಸ್ವರೂಪವಾದ ಈ ಲೋಕದ ಜನರಿಗೆ ಪೂರ್ವಪುಣ್ಯವೊದಗಿ, ಸಂಸಾರ ಹೇಯವಾಗಿ, ಗುರುಕಾರುಣ್ಯವ ಪಡೆದು, ಆತ್ಮಜ್ಞಾನ ತಿಳಿಯಲಿಕ್ಕೆ, ಮನಗೊಟ್ಟು, ತತ್ವವ ಶೋಧಿಸಿ, ಪುರಾತನ ವಚನ ಹಾಡಿಕೊಂಡು ಅನುಭವಿಯಾಗಿ, ನಾನೇ ಅನುಭಾವಿ ನಾನೇ ಪ್ರಭು, ನಾನೇ ಪರಬ್ರಹ್ಮವ ಬಲ್ಲ ಪರಮಜ್ಞಾನಿಯೆಂದು, ಬಸವಾದಿ ಪೂರ್ವಪ್ರಮಥರ ಪುರಾತರ ಮಹಾಗಣಂಗಳ ಜರಿದು, ಈ ಭುವನದಲ್ಲಿ ಇನ್ನಾ ್ಯರು ನಿಜವನರಿತವರಿಲ್ಲೆಂದು ಅಹಂಕರಿಸಿ, ನಾವು ಮಹಾಜ್ಞಾನಿಗಳು, ನಾವು ಕೇವಲ ಶಿವಾಂಶಿಕರು, ನಮ್ಮನ್ನಾರು ಅರಿಯರು, ನಮ್ಮ ಬಲ್ಲವರು ಪುಣ್ಯವಂತರು, ನಮ್ಮನ್ನರಿಯದವರು ಪಾಪಿಷ*ರು. ನಾವು ಮಹತ್ವ ಉಳ್ಳವರು, ನಾವು ಮಕ್ಕಳ ಕೊಡುವೆವು, ರೋಗ ಕಳೆಯುವೆವು, ಬ್ರಹ್ಮಹತ್ಯಾದಿ ಪಿಶಾಚಿಯ ಸೋಂಕು ಬಿಡಿಸುವೆವು ಎಂದು ವಿಭೂತಿ ಮಂತ್ರಿಸಿಕೊಟ್ಟು, ಅವರ ಮನೆಯಲ್ಲಿ ಶಿವಪೂಜೆಯ ಪಸಾರವನಿಳಿಯಿಟ್ಟು, ಆ ರೋಗದವರನ್ನು ಮುಂದೆ ಕೂಡ್ರಿಸಿಕೊಂಡು, ತಾ ಕೂತು ಕಣ್ಣು ಮುಚ್ಚಿ, ಒಳಗೆ ಬೆಳಗವ ಕಂಡು, ಕಣ್ದೆರೆದು, ಬಿರಿಗಣ್ಣಿನಿಂದ ನೋಡ್ತ ಹಡ್ತ ಹುಡ್ತ ಮಾಡಿ ಪರಿಣಾಮವಾಗಲೆಂದು ಹೇಳಲು, ಅದು ರಿಣಾ ತೀರಿಹೋದರೆ, ನಮ್ಮ ಮಹತ್ವ ಎಂಥಾದ್ದು, ಹಿಂದೆ ಇಂಥಾ ಮಹತ್ವ ಬಳಹ ಮಾಡೀವಿಯೆಂದು ಅಲ್ಲಲ್ಲಿ ಹೆಸರು ಹೇಳಿಕೊಳ್ಳಬೇಕು. ಅದು ಹೋಗದಿದ್ದರೆ- ಇವರ ವಿಶ್ವಾಸ ಘಟ್ಟಿಲ್ಲೆಂದು, ಏನರೆ ನೆವ ಕೊಳ್ಳಬೇಕು. ಕೊಟ್ಟರೆ ಹೊಗಳಬೇಕು, ಕೊಡದಿದ್ದರೆ ಬೊಗಳಬೇಕು. ಅವರಿಂದ ಆ ಹಣವು ತನಗೆ ಬಾರದಿದ್ದರೆ ಅವರ ಅರ್ಥವ ಕಳೆಯಬೇಕೆಂಬ ಯೋಚನೆಬೇಕು. ಅಥವಾ ಫಣ್ಯಾಚಾರದಲ್ಲಿ ಅವರಿಂದ ಅರ್ಥವ ಸೆಳೆತಂದು ಹಿಂದೆ ತಾ ಬಿಟ್ಟು ಪೂರ್ವಪ್ರಪಂಚದವರಿಗೆ ಕೊಟ್ಟು ಈ ವಿಷಯಾತುರಕ್ಕೆ ವಾಯು ತಪ್ಪಿ ನಡೆದು ಇದು ಪ್ರಭುವಿನಪ್ಪಣೆಯೆಂದು ಹಾಡಿದ್ದೇ ಹಾಡುವ ಕಿಸಬಾಯಿದಾಸನ್ಹಾಂಗೆ ಹಾದಿಡ್ದೇ ಹಾಡಿಕೊಳ್ಳುತ್ತ, ಕ್ರೀಯ ನಿಃಕ್ರಿಯವಾಗಿ ಸತ್ತ ಕತ್ತಿಯ ಎಲವು ತಂದು ತಿಪ್ಪಿಯಲ್ಲಿ ಬಚ್ಚಿಟ್ಟು ಸುತ್ತುವ ತಲೆಹುಳುಕ ಹುಚ್ಚುನಾಯಿಯಂತೆ, ಉಚ್ಚಿಯಾ ಪುಚ್ಚಿಗೆ ಮೆಚ್ಚನಿಟ್ಟ ನಿಚ್ಚ ಕಚ್ಚಿಗಡಕರಿಗೆ ತಮ್ಮ ನಿಜದೆಚ್ಚರ ಇನ್ನೆಲ್ಲಿಹದೋ ? ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ತನುಲಿಂಗವೆಂದೆಂಬ ಅದ್ವೈತಿಯ ಮಾತ ಕೇಳಲಾಗದು. ಮನಲಿಂಗವೆಂದೆಂಬ ಮೂರ್ಖನ ಮಾತ ಕೇಳಲಾಗದು. ಪ್ರಾಣಲಿಂಗವೆಂದೆಂಬ ಪ್ರಪಂಚಿಗಳ ಮಾತ ಕೇಳಲಾಗದು. ತನುಲಿಂಗವಾದರೆ ಹೊನ್ನು ಹೆಣ್ಣು ಮಣ್ಣು ಮೂರೆಂಬ ಅನ್ಯವಿಷಯಕ್ಕೆ ಸಿಲ್ಕಿ ಅನಂತ ಪಾಡಿಗೆ ಗುರಿಯಾಗಬಹುದೇ ? ಮನಲಿಂಗವಾದರೆ ಮನವಿಕಾರದ ಭ್ರಮೆಯಲ್ಲಿ ತೊಳಲಿ ಬಳಲಿ ಅಜ್ಞಾನಕ್ಕೆ ಗುರಿಯಾಗಬಹುದೇ ? ಪ್ರಾಣಲಿಂಗವಾದರೆ ಪ್ರಳಯಕ್ಕೆ ಗುರಿಯಾಗಿ ಸತ್ತು ಸತ್ತು ಹೂಳಿಸಿಕೊಳಬಹುದೇ ? ತನು ಮನ ಪ್ರಾಣಲಿಂಗವಾದರೆ ಜನನ ಮರಣವೆಂಬ ಅಣಲಿಂಗೆ ಗುರಿಯಾಗಿ ನಾನಾ ಯೋನಿಯಲ್ಲಿ ತಿರುಗಬಹುದೇನಯ್ಯಾ ? ತನು ಮನ ಪ್ರಾಣವಾ ಘನಮಹಾಲಿಂಗಕ್ಕೆ ಸರಿಯೆಂದು ಅಜ್ಞಾನದಿಂದ ತನುವೆ ಲಿಂಗ ಮನವೆ ಲಿಂಗ ಪ್ರಾಣವೆ ಲಿಂಗವೆಂದು ಇಷ್ಟಲಿಂಗವ ಜರಿದು ನುಡಿವ ಭ್ರಷ್ಟ ಬಿನುಗು ದುರಾಚಾರಿ ಹೊಲೆಯರ ನಾಯಕನರಕದಲ್ಲಿಕ್ಕುವ ನಮ್ಮ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
ಮಾತು ಮಾತಿನ ತೂತಜ್ಞಾನಿಗಳಿಗೆತ್ತಣ ಶರಣಸ್ಥಲವಯ್ಯಾ? ಸೋತು ನಡೆಯರು ಗುರುಹಿರಿಯರಿಗೆ ಖ್ಯಾತಿಯ ಮುಂದಿಟ್ಟು ಮಲತ್ರಯದಾಸೆಯೊಳು ಮುಳುಗಿ. ಇತರರ್ಗೆ ನೀತಿ ನೂತನದಿಂದೆ ಜರಿದು ತನ್ನನರಿಯದೆ ಭಿನ್ನವಿಟಟು ಮನಗೂಡಿ ಚರಿಸುವ ಶುನಕರು ಶರಣರೆಂದರೆ ಸರಿಯಪ್ಪುದೆ? ನಾಚಿಕೆಯಿಲ್ಲದ ನಾಡಭೂತಗಳನೆನಗೊಮ್ಮೆ ತೋರದಿರಯ್ಯಾ ನಿಮ್ಮ ಧರ್ಮ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಒಡಗೂಡಿಪ್ಪ ಲಿಂಗವನರಿಯದೆ ಅಡಿಯಿಟ್ಟು, ಪೊಡವಿಯೊಳಗಣ ಅಡವಿ ಗಿಡುಗಳಲ್ಲಿಪ್ಪ ಮೃಡಾಲಯಮಂ ಕಂಡು, ಪೊಕ್ಕು ಸಡಗರಿಸಿಕೊಂಡು ವರವ ಹಡೆವೆನೆಂದು ಬೇಡುವುದು ಕುರಿತು, ಅದು ಜರಿದು ಬೀಳೆ, ಕೊಟ್ಟ [ನೆ]ರವನೆಂದು ನಿಶ್ಚಯ ಮಾಡಿದ ಮತ್ತೆ, ಸಾವರ ಕಂಡು ಅಚ್ಚುಗಬಡುತ್ತಿದ್ದೇನೆ. ಇವರಿಗಿನ್ನೆತ್ತಣ ಮುಕ್ತಿಯೊ, ನಿಃಕಳಂಕ ಮಲ್ಲಿಕಾರ್ಜುನಾ?
--------------
ಮೋಳಿಗೆ ಮಾರಯ್ಯ
ಪರಮಶಾಂತ ಪರಿಪೂರ್ಣ ಪ್ರಾಣಲಿಂಗಿಯು ಮಹಾನುಭಾವ ಜಂಗಮಲಿಂಗ ಸುಖಮಯವಾದ ಬಳಿಕ ಹುಸಿಯೆಂಬ ಮಸಿಯ ಪೂಸದ, ಆಸೆಯೆಂಬ ಮದ್ದು ತಿನ್ನದೆ, ಭಾಷೆ ಬಣ್ಣಿಗನಾಗದೆ, ಕಣ್ಣುಗೆಟ್ಟು ಮಲತ್ರಯ ಮೋಹಿಯಾಗದೆ, ಸಂದುಸಂಶಯ ಮಂದಮರುಳನಾಗದೆ, ಬೆಂದ ಒಡಲಿಗೆ ಸಂದು ಯಂತ್ರ ಮಂತ್ರ ವೈದ್ಯ ವಶ್ಯಾದಿ ಉಪಾಧಿ ಉಲುಹಿನ ಭ್ರಾಂತನಾಗದೆ, ಸದ್ಭಕ್ತಿ ಸುಜ್ಞಾನ ಪರಮವಿರಾಗತೆಯೆಂಬ ರತ್ನವ ಕಳೆಯದೆ ಡಂಭಕ ಜಡಕರ್ಮವ ಸೋಂಕದೆ ಕರಣಾದಿ ಗುಣಗಳ ಜರಿದು ಏಕಾಂತವಾಸನಾಗಿ ಚರಿಸುತಿರ್ದ ಗುರುನಿರಂಜನ ಚನ್ನಬಸವಲಿಂಗದ ಲೀಲೆಯುಳ್ಳನ್ನಕ್ಕರ.
--------------
ದೇಶಿಕೇಂದ್ರ ಸಂಗನಬಸವಯ್ಯ
ಹೊನ್ನೆಂಬ ಕಾರ್ಮಿಕವ ಜರಿದು ಹರಿದು, ಮಣ್ಣೆಂಬ ಭವದ ಭವದ ಹರಿದು, ಹೆಣ್ಣೆಂಬ ರಾಕ್ಷಸಿಯ ಅಣಲೊಳಗೆ ಸಿಕ್ಕಿ ಅಗಿದಗಿದು ತಿನಿಸಿಕೊಂಬ ಜಡಜೀವಿಗಳ ಸಂಗದಿಂದಾದ ಸಕಲ ಸುಖಭೋಗಂಗಳ ಬಿಟ್ಟು; ಲಿಂಗರತಿ ಪರಮಸುಖದ ಚಿದಮೃತದ ನಿತ್ಯ ತೃಪ್ತಿ ಸಂತೋಷ ಇಂಬುಗೊಂಡು, ವೇಷದ ಭ್ರಾಂತಿನ ಭ್ರಾಮಕದ ಸಮಯ ಕುಲಪಾಷಂಡಿಗಳ ತತ್ಸಂಗವ ಬಿಟ್ಟು ನಿರಾಶಾ ಪಥದ ಸುಜ್ಞಾನವೆ ಅನುಕೂಲವಾಗಿ ಘೃತ ಫಳ ಮಧುರರಸ ಮೃಷ್ಟಾನ್ನಂಗಳಲ್ಲಿ ಮನಮಗ್ನವಾದ ಪರಮ ಪ್ರಸಾದದಲ್ಲಿ ಪರಿಣಾಮಿಯಾದ ಪರಮಲಿಂಗೈಕ್ಯ ವಿರಕ್ತಂಗೆ ಲಿಂಗಾರ್ಪಿತವಲ್ಲದೆ_ ಇಂತೀ ಕ್ರಮವನರಿದು ಸಕಲಭ್ರಾಂತನಳಿಯದೆ ಮನ್ಮಥವೇಷಧಾರಿಗಳು ಪಂಚಲೋಹ ಕಾರ್ಮಿಕವ ಧರಿಸಿಕೊಂಡು ಲಿಂಗಾರ್ಪಿತ ಭಿಕ್ಷೆಯೆಂದು ಭುಂಜಿಸುವ ಭುಂಜನೆಯೆಲ್ಲವು ವರಾಹ ಕುಕ್ಕುಟದ ಮೇಧ್ಯವು, ಅವರಿಗೆ ಪ್ರಸಾದವೆಂಬುದು ಸ್ವಪ್ನದಲ್ಲಿಯೂ .... .......ಕೊಂಬುದೆಲ್ಲವು ಕತ್ತೆಯ ಮಾಂಸ ಕಾಣಾ ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಕೋಗಿಲೆ ಸ್ವರಗೈದಿತೆಂದು ಕಾಗೆ ಅದಕ್ಕೆ ಇದಿರಾಗಿ ಕುಳಿತು ಕರ್ರೆಂದು ಕಟಕಿಯನಾಡಿದರೆ ಆ ಕೋಗಿಲೆಗಾದ ಕೊರತೆಯೇನಯ್ಯ? ಸೂರ್ಯ ಪ್ರಕಾಶವನುಳ್ಳವನಲ್ಲಿ ಕತ್ತಲೆ ಮೈಯವನೆಂದು ಹಗಲು ಕಣ್ಣು ಕಾಣದ ಗೂಗೆ ಕೆಟ್ಟು ನುಡಿದರೆ ಸೂರ್ಯನಿಗಾದ ಕೊರತೆಯೇನಯ್ಯ? ಕನ್ನಡಿಗೆ ಮೂಗಿಲ್ಲವೆಂದು ಮೂಕೊರೆಯೆ ಹಳಿದರೆ ಆ ಕನ್ನಡಿಗಾದ ಕೊರತೆಯೇನಯ್ಯ? ದ್ವೈತ ಅದ್ವೈತವ ನೂಂಕಿ ಅಂಗ ಲಿಂಗದ ಹೊಲಬನರಿದು ಸ್ವಯಂಲಿಂಗಿಯಾದ ಶರಣನ ಅಂಗವಿಕಾರದ ಪಂಗುಳ ಮಾನವರು ಜರಿದು ರುsುಂಕಿಸಿ ನುಡಿದರೆ ಆ ಲಿಂಗಾನುಭಾವಿಗಾದ ಕೊರತೆಯೇನಯ್ಯಾ?, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಇನ್ನಷ್ಟು ... -->