ಅಥವಾ

ಒಟ್ಟು 4 ಕಡೆಗಳಲ್ಲಿ , 3 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿತ್ತಂ ಚ ರಾಜವಿತ್ತಂ ಚ ಕಾಮಿನೀ ಕಾಮಕಾವಶಾ ಪೃಥಿವೀ ವೀರಭೋಜ್ಯಾ ಚ ಸ್ವಧನಂ ಧರ್ಮ ಏವ ಚ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ ಧನ ಕೆಡದ ಹಾಂಗೆ. ಅಧರ್ಮಾತ್ ಜಾಯತೇ ಕಾಮಃ ಕ್ರೋಧೋ[s] ಧರ್ಮಾಚ್ಚ ಜಾಯತೇ ಧರ್ಮಾತ್ ಸಂಜಾಯತೇ ಮೋಕ್ಷಃ ತಸ್ಮಾದ್ಧರ್ಮಂ ಸಮಾಚರೇತ್ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ ಧನ ಕೆಡದ ಹಾಂಗೆ. ಕ್ಷಣಂ ಚಿತ್ತಂ ಕ್ಷಣಂ ವಿತ್ತಂ ಕ್ಷಣಂ ಜೀವನಮೇವ ಚ ಯಮಸ್ಯ ಕರುಣೋ ನಾಸ್ತಿ ಧರ್ಮಸ್ಯ ತ್ವರಿತಾ ಗತಿಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಇಂತು, ನಾನಾ ವೇದ ಶಾಸಸ್ತ್ರ ಪುರಾಣಾಗಮಂಗಳಲ್ಲಿ ವಿಚಾರಿಸಿ ನೋಡಿದರೆ ಸತ್ಪಾತ್ರಕ್ಕೆ ಮಾಡಿ ಧನ ಕೆಡದ ಹಾಂಗೆ. ಪಾತ್ರಪರೀಕ್ಷೆಗಳಲ್ಲಿ ಸತ್ಪಾತ್ರರು ಮಾಹೇಶ್ವರರು. ಅಲ್ಲಿ ಪ್ರೇಮ ಪ್ರೀತಿ ಕಿಂಕರತೆಯಿಂದ ದಾಸೋಹವ ಮಾಡಿ ಬದುಕಿರೆ. ನ ಮೇ ಪ್ರಿಯಶ್ಚತುರ್ವೆದೀ ಮದ್ಭಕ್ತ ಶ್ವಪಚೋಪಿ ವಾ ತಸ್ಮೈ ದೇಯಂ ತತೋ ಗ್ರಾಹ್ಯಂ ಯಥಾ ಪೂಜ್ಯಸ್ತಧಾಹಿ ಸಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ನಿಕೃಷ್ಟಚಾರಜನ್ಮಾನೋ ವಿರುದ್ಧಾ ಲೋಕವೃತ್ತಿಷು ಕೋಟಿಭ್ಯೋ ವೇದವಿದುಷಾಂ ಶ್ರೇಷಾ* ಮದ್ಭಾವಭಾವಿತಾಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಚತುರ್ವೇದಧರೋ ವಿಪ್ರಃ ಶಿವಭಕ್ತಿವಿವರ್ಜಿತಃ ದುಷ್ಟಚಾಂಡಾಲಭಾಂಡಸ್ಥಂ ಯಥಾ ಭಾಗೀರಥೀಜಲಂ ಚುರ್ವೇದಧರೋ ವಿಪ್ರಃ ಶಿವದೀಕ್ಷಾವಿವರ್ಜಿತಃ ತಸ್ಯ ಭೋಜನದಾನೇನ ದಾತಾ ಚ ನರಕಂ ವ್ರಜೇತ್ ಚದುರ್ವೇದಧರೋ ವಿಪ್ರಃ ಸರ್ವಶಾಸ್ತ್ರವಿಶಾರದಃ ಶಿವಜ್ಞಾನಂ [ನ]ಜಾನಾತಿ ದರ್ವೀ ಪಾಕರಸಂ ಯಥಾ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಇಂತು ನಾನಾವೇದಶಾಸ್ತ್ರಪುರಾಣಾಗಮಂಗಳಲ್ಲಿ ವಿಚಾರಿಸಿ ನೋಡಿ, ಮಾಡಿ ಮಾಡಿ, ಮಾಹೇಶ್ವರರಿಗೆ. ಫಲವ ಬಯಸಲು ಫಲವಹುದು. ಮುಕ್ತಿಯ ಬಯಸಲು ಮುಕ್ತಿಯಹುದು. ಅನಿಮಿತ್ತಂ ನಿಮಿತ್ತಂ ಚ ಉಪಾಧಿರ್ನಿರುಪಾಧಿಕಂ ದಾಸೋಹಯುಕ್ತ ಕರ್ಮಾ ಚ ಯಥಾ ಕರ್ಮ ತಥಾ ಫಲಂ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಅನಾದರಾದಹಂಕಾರಾತ್ ಮೋಹಾದ್ಭೀತಿರುಪಾಧಿಕಾ ಕೀರ್ತಿಶ್ಚ ಷಡ್ಗುಣೋ ನಾಸ್ತಿ ದಾಸೋಹಶ್ಚ ಸ್ವಯಂ ಶಿವಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಕೆಡಬೇಡ ಕೆಡಬೇಡ. ಸಾಲೋಕ್ಯಾದಪಿ ಸಾಮೀಪ್ಯಾತ್ ಸಾರೂಪ್ಯಾಚ್ಚ ಸಯುಜ್ಯಕಾತ್ ಶಿವತತ್ತ್ವಾದಿಶೇಷಶ್ಚ ಸ್ವಯಂ ದಾಸೋಹ ಉತ್ತಮಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಸಕೃಲ್ಲಿಂಗಾರ್ಚಕೇ ದತ್ವಾ ವಸ್ತ್ರಮಾತ್ರಂ ಯಥೇಪ್ಸಿತಂ ಏಕತಂತ್ರಂ ಲಭೇದ್ರಾಜ್ಯಂ ಶಿವಸಾಯುಜ್ಯಮಾಪ್ನುಯಾತ್ ಸಕೃಲ್ಲಿಂಗಾರ್ಚಕೇ ದತ್ವಾ ಗೋಷ್ಟದಂ ಭೂಮಿಮಾತ್ರಕಂ ಭೂಲೋಕಾಧಿಪತಿರ್ಭೂತ್ವಾ ಶಿವೇನ ಸಹ ಮೋದತೇ ಸಕೃಲ್ಲಿಂಗಾರ್ಚಕೇ ದತ್ವಾ ಸುವರ್ಣಂ ಚಾಣುಮಾತ್ರಕಂ ದೇವೈಶ್ಚ ಪೂಜ್ಯಮಾನಸ್ತು ಗಣಮುಖ್ಯೋ ಗಣೇಶ್ವರಃ ಸಕೃಲ್ಲಿಂಗಾರ್ಚಕೇ ದತ್ವಾ ಭಿಕ್ಷಾಮಾತ್ರಂ ಚ ಸಾದರಂ ಪದ್ಮಾನಿ ದಶಸಾಹಸ್ರಂ ಪಿತ್ರೂಣಾಂ ದತ್ತಮಕ್ಷಯಂ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ. ಸಾವು, ದಿಟ ದಿಟ. ದಾಸೋಹವ ಮಾಡಲು ತನು ಕೆಡದ ಹಾಂಗೆ ಸತ್ಪಾತ್ರದತ್ತವಿತ್ತಂ ಚ ತದ್ದಾನಾದಸುಖಂ ಭವೇತ್ ಅಪಾತ್ರದತ್ತವಿತ್ತಂ ಚ ತದ್ದಾನಾದಸುಖಂ ಭವೇತ್ ಎಂಬುದನರಿದುದಕ್ಕೆ ಸತ್ಪಾತ್ರವಾವುದೆಂದಡೆ: ಕಿಂಚಿದ್ವೇದಮಯಂ ಪಾತ್ರಂ ಕಿಂಚಿತ್ಪಾತ್ರಂ ತಪೋಮಯಂ ಆಗಮಿಷ್ಯತಿ ಯತ್ಪಾತ್ರಂ ತತ್ಪಾತ್ರಂ ತಾರಯಿಷ್ಯತಿ ಸರ್ವೇಷಾಮೇವ ಪಾತ್ರಾಣಮತಿಪಾತ್ರಂ ಮಹೇಶ್ವರಃ ಎಂಬುದನರಿದು, ಮಾಡಿ ಮಾಡಿ, ಮಾಹೇಶ್ವರರಿಗೆ, ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ ನಿತ್ಯಂ ಗುರುಪದಧ್ಯಾನಂ ನಿತ್ಯಂ ನಿತ್ಯಂ ಸಂಶಯಃ ಇಂತೆಂದುದಾಗಿ, ಅರಿದು ಇದು ಕಾರಣ, ಅರಿವನೇ ಅರಿದು, ಮರವೆಯನೇ ಮರದು, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನ[ನ]ರಿದು, ಪೂಜಿಸಲು ಇಹಪರಸಿದ್ಧಿ ಸದ್ಯೋನ್ಮುಕ್ತಿ ಕೇಳಿರಣ್ಣಾ.
--------------
ಉರಿಲಿಂಗಪೆದ್ದಿ
ವೃಕ್ಷಕ್ಕೆ ಭೂಮಿ ಮುಖವೋ ? ಭೂಮಿಗೆ ವೃಕ್ಷ ಮುಖವೋ ? ಶರಣಂಗೆ ಅಂಗ ಮುಖವೋ? ಲಿಂಗಕ್ಕೆ ಶರಣ ಮುಖವೋ ? ಈ ಭೇದವ ಬಲ್ಲರೆ ಹೇಳಿರಿ. ವೃಕ್ಷಕ್ಕೆ ನೀರು ಎರೆದರೆ ಭೂಮಿಯಲ್ಲಿ ಫಲವಹುದು, ಭೂಮಿಯಲ್ಲಿ ನೀರೆರೆದರೆ ವೃಕ್ಷಕ್ಕೆ ಫಲವಹುದು. ಶರಣನ ಮುಖದಲ್ಲಿ ಲಿಂಗ ತೃಪ್ತಿಯಹುದು, ಲಿಂಗದ ಮುಖದಲ್ಲಿ ಶರಣನ ತೃಪ್ತಿಯಹುದು. ಆ ಲಿಂಗಮುಖ ಶರಣನೆಂದು ಅರಿಯದ ಭಂಗಿತರಿಗೆ ಶಿವಲಿಂಗ ಮುನ್ನವಿಲ್ಲವೆಂದಾತ ನಿಮ್ಮ ಶರಣ, ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.
--------------
ಚೆನ್ನಯ್ಯ
ತೆಂಗಿಗೆ ನೀರನೆರೆದರೆ ಅಂಗೈಯಲ್ಲಿ ಫಲವು ಕಾಣುವಂತೆ ಜಂಗಮಕ್ಕೆ ಅನ್ನ ಉದಕಂಗಳ ನೀಡಿದ ಫಲವು ಮೇರುಪರ್ವತಕ್ಕೆ, ಸಪ್ತಸಮುದ್ರಕ್ಕೆ ಸಮಾನವಹುದು. ಅದಲ್ಲದೆ ಒಂದೊಂದು ಅಗುಳಿಗೆ ಕೋಟ್ಯನುಕೋಟಿ ಯಜ್ಞಂಗಳ ಮಾಡಿದ ಫಲವಹುದು. ಅದೆಂತೆಂದೊಡೆ : ``ಕ್ಷಿಪ್ತಂ ಕ್ಷಿಪ್ತಂ ಮಹಾದೇವಿ ಕೋಟಿಯಜ್ಞಫಲಂ ಭವೇತ್ | ಅಲ್ಪಬೀಜಾತ್ ಮಹಾವೃಕ್ಷೋ ಯಥಾ ಭವತಿ ಪಾರ್ವತೀ ||'' ಮತ್ತಂ, ``ಅನ್ನಂ ವಾ ಜಲಮಾತ್ರಂ ವಾ ಯದ್ ದತ್ತಂ ಲಿಂಗಧಾರಿಣೇ | ತದನ್ನಂ ಮೇರುಸದೃಶಂ ತಜ್ಜಲಂ ಸಾಗರೋಪಮಮ್ ||'' ಎಂದುದಾಗಿ, ಜಂಗಮದಲ್ಲಿ ನಮ್ಮ ಅಖಂಡೇಶ್ವರಲಿಂಗದ ತೃಪ್ತಿ ನೋಡಾ.
--------------
ಷಣ್ಮುಖಸ್ವಾಮಿ
-->