ಅಥವಾ

ಒಟ್ಟು 4 ಕಡೆಗಳಲ್ಲಿ , 2 ವಚನಕಾರರು , 3 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಂಚೇಂದ್ರಿಯ ಸಪ್ತಧಾತುವನತಿಗಳೆದಲ್ಲಿ ಫಲವೇನೊ ? ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ_ ವಿಷಯವನತಿಗಳೆದಲ್ಲಿ ಫಲವೇನೊ ? ಇವೆಲ್ಲವ ಕೊಂದ ಪಾಪ ನಿಮ್ಮ ತಾಗುವುದು_ಗುಹೇಶ್ವರಾ
--------------
ಅಲ್ಲಮಪ್ರಭುದೇವರು
‍ಋಣ ತಪ್ಪಿದ ಹೆಂಡಿರಲ್ಲಿ ಗುಣ ತಪ್ಪಿದ ನಂಟರಲ್ಲಿ ಜೀವವಿಲ್ಲದ ದೇಹದಲ್ಲಿ ಫಲವೇನೋ? ಆಳ್ದನೊಲ್ಲದಾಳಿನಲ್ಲಿ ಸಿರಿತೊಲಗಿದರಸಿನಲ್ಲಿ ವರವಿಲ್ಲದ ದೈವದಲ್ಲಿ ಫಲವೇನೋ? ಕಳಿದ ಹೂವಿನಲ್ಲಿ ಕಂಪನು ಉಳಿದ ಸೊಳೆಯಲ್ಲಿ ಪೆಂಪನು ಕೊಳೆಚೆನೀರಿನಲ್ಲಿ ಗುಣವನರಸುವಿರಿ! ಮರುಳೆ ವರಗುರು ವಿಶ್ವಕ್ಕೆಲ್ಲ ಗಿರಿಜಾಮನೋವಲ್ಲಭ ಪರಮ ಕಾರುಣಿಕ ನಮ್ಮ ಕೂಡಲಸಂಗಮದೇವ
--------------
ಬಸವಣ್ಣ
ಜಾತಿವಿಡಿದು ಸೂತಕವನರಸುವೆ ಜ್ಯೋತಿವಿಡಿದು ಕತ್ತಲೆಯನರಸುವೆ ! ಇದೇಕೊ ಮರುಳುಮಾನವಾ ಜಾತಿಯಲ್ಲಿ ಅಧಿಕನೆಂಬೆ ! ವಿಪ್ರ ಶತಕೋಟಿಗಳಿದ್ದಲ್ಲಿ ಫಲವೇನೊ `ಭಕ್ತನೆ ಶಿಖಾಮಣ' ಎಂದುದು ವಚನ. ನಮ್ಮ ಕೂಡಲಸಂಗನ ಶರಣರ ಪಾದಪರುಷವ ನಂಬು, ಕೆಡಬೇಡ ಮಾನವಾ.
--------------
ಬಸವಣ್ಣ
-->