ಅಥವಾ

ಒಟ್ಟು 43 ಕಡೆಗಳಲ್ಲಿ , 11 ವಚನಕಾರರು , 33 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮನ ಮಂದಿರದಡವಿಯೊಳಗೆ ಶುಕ್ಲಶೋಣಿತವೆಂಬ ಮಡಕೆಯ ಮಾಡಿ ಮೂತ್ರ ಶ್ಲೇಷ್ಮ ಅಮೇಧ್ಯವೆಂಬ ಪಾಕದ್ರವ್ಯಂಗಳ ಮಡಕೆಯಲ್ಲಿ ನಿಶ್ಚಯಿಸಿ ಆ ಮಡಕೆಯನೊಡೆದಾ[ಗಲೆ ಭಕ್ತ] ಕಾಣಾ. ರೇಕಣ್ಣಪ್ರಿಯ ನಾಗಿನಾಥಾ ಬಸವಣ್ಣನಿಂದ ಬದುಕಿದೆನು.
--------------
ಬಹುರೂಪಿ ಚೌಡಯ್ಯ
ಅಲ್ಲಿಯಬಹುರೂಪ ಇಲ್ಲಿಗೆ ಬಂದಿತ್ತು. ಇಲ್ಲಿಯ ಬಹುರೂಪ ಎಲ್ಲಿ ಅಡಗಿತ್ತೋ? ಎನ್ನ ಬಹುರೂಪ ಬಲ್ಲವರಾರೋ ? ನಾದ ಹರಿದು ಸ್ವರವು ಸೂಸಿದ ಬಳಿಕ ಈ ಬಹುರೂಪ ಬಲ್ಲವರಾರೋ ? ರೇಕಣ್ಣಪ್ರಿಯ ನಾಗಿನಾಥನಲ್ಲಿ ಬಸವಣ್ಣನಿಂದ ಬದುಕಿತೀ ಲೋಕವೆಲ್ಲ.
--------------
ಬಹುರೂಪಿ ಚೌಡಯ್ಯ
ಯುಗವನೊಗೆದಾತ, ಯುಗವನೆಲ್ಲವ ಮಾಡಿದಾತ ರುದ್ರನ ಜಡೆಯ ಸುತ್ತಿದ ಫಣಿಯ ಬಿಳಿದು ಮಾಡಿದಾತ ಇವನೆಲ್ಲವ ಬಿಳಿದು ಮಾಡಿ ಬಸವಣ್ಣಂಗೆ ಸೂತ್ರಧಾರಿಯಾದ ಮಡಿವಳ ಮಾಚಯ್ಯನ ನೆನೆದಾಡುತ್ತಿರ್ದೆ. ರೇಕಣ್ಣಪ್ರಿಯ ನಾಗಿನಾಥಾ ಬಸವಣ್ಣನಿಂದ ಬದುಕಿತೀ ಲೋಕವೆಲ್ಲ.
--------------
ಬಹುರೂಪಿ ಚೌಡಯ್ಯ
`ಬಸವ' ಎಂಬ ಮೂರಕ್ಷರ ಹೃದಯಕಮಲದಲ್ಲಿ ನೆಲೆಗೊಂಡಡೆ, ಅಭೇದ್ಯ ಭೇದ್ಯವಾಯಿತ್ತು, ಅಸಾಧ್ಯ ಸಾಧ್ಯವಾಯಿತ್ತು. ಇಂತು ಬಸವಣ್ಣನಿಂದ ಲೋಕ¯õ್ಞಕಿಕದ ಕುಭಾಷೆಯ ಕಳೆದು, ಲೋಕಾಚರಣೆಯನತಿಗಳೆದು ಭಕ್ತಿಭರವಪ್ಪುದು, ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನ ಕಾರುಣ್ಯದಿಂದ
--------------
ಚನ್ನಬಸವಣ್ಣ
ಎನ್ನಾಕಾರವೆ ನೀನಯ್ಯ ಬಸವಣ್ಣ. ನಿ [ನ್ನಾಕಾರವೆ] ಕೋಲ ಶಾಂತ. ಹಿಡಿದಿರ್ದ ಕರಸ್ಥಲ ಬಸವಣ್ಣನಿಂದ ಉದಯವಾದ ಕಾರಣ ಆ ಬಸವಣ್ಣನ ಶ್ರೀಪಾದಕ್ಕೆ ಅಹೋರಾತ್ರಿಯಲ್ಲಿ ನಮೋ ನಮೋಯೆಂಬೆ. ಪುಣ್ಯಾರಣ್ಯದಹನ ಬ್ಥೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ತಾರಾಧಾರ ಬಾಹ್ಯವ ಸೋಹಂಭಾವ ಭಾವಾಂತರ ವಾಮಶಕ್ತಿ ಮೋಹಶಕ್ತಿ ಕನ್ಯಾಶಕ್ತಿ ಬಾಲಶಕ್ತಿ ಗಣಶಕ್ತಿ ಮಂದಿರಶಕ್ತಿ ಶಿವದೇವ ಈಶ್ವರ ಮಹಾದೇವ ಪರಾಪರ ಶಿವ ಇಂತಿವೆಲ್ಲವ ಬಸವಣ್ಣ ತಪ್ಪಿಸಿ, ಈಸರಿಂದಾದ ಭಕ್ತಿಯ ಪ್ರಭಾವದೊಳಿರಿಸಿ, ಗತಿಯತ್ತ ಹೊದ್ದಲೀಯದೆ, ಮೋಕ್ಷದತ್ತ ಹೊದ್ದಲೀಯದೆ, ನಾಲ್ಕೂ ಪದದತ್ತ ಹೊದ್ದಲೀಯದೆ, ಅಬ್ಥಿನವ ಕೈಲಾಸದತ್ತ ಹೊದ್ದಲೀಯದೆ, ಲಿಂಗಾರ್ಚನೆಯ ತೋರಿ, ಜಂಗಮಾರ್ಚನೆಯ ಹೇಳಿ, ಜಂಗಮನಿರಾಕಾರವೆಂದು ತೋರಿ, ಆ ಜಂಗಮ ಪ್ರಸಾದವ ಲಿಂಗಕ್ಕಿತ್ತು ಆರೋಗಿಸಿ, ಬಸವಣ್ಣ ತೋರಿದ ಕಾರಣ, ನಿರವಯದ ಹಾದಿಯ ಬಸವಣ್ಣನಿಂದ ಕಂಡೆನು ಕಾಣಾ, ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಆದಿಯ ಮೂರ್ತಿಯಲ್ಲ, ಅನಾದಿಯ ಬಚ್ಚಬರಿಯ ಶೂನ್ಯವಲ್ಲ, ಅಂಗವಿದ್ದು ಅಂಗವಿಲ್ಲದ ಸಂಗ ಘನಪದದ್ಲ ವೇದ್ಯವಾದ ಮರುಳಶಂಕರದೇವರ ನಿಲವ ಪ್ರಭು ಬಸವಣ್ಣನಿಂದ ಕಂಡು ಬದುಕಿದೆನು ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಬಸವಣ್ಣನಿಂದ ಶುದ್ಧಪ್ರಸಾದಿಯಾದೆ. ಚನ್ನಬಸವಣ್ಣನಿಂದ ಸಿದ್ಧಪ್ರಸಾದಿಯಾದೆ. ಪ್ರಭುದೇವರಿಂದ ಪ್ರಸಿದ್ಧಪ್ರಸಾದಿಯಾದೆ. ಇವರೆಲ್ಲರ ಪ್ರಸಾದಿಯಾಗಿ ರೇಕಣ್ಣಪ್ರಿಯ ನಾಗಿನಾಥನಲ್ಲಿ ಸೊಬಗ ಮೆರೆದೆ
--------------
ಬಹುರೂಪಿ ಚೌಡಯ್ಯ
ಇದು ಗುರು, ಇದು ಲಿಂಗ, ಇದು ಜಂಗಮ, ಇದು ಪ್ರಸಾದ. ಇಂತೀ ಚತುರ್ವಿಧಸ್ಥಲವನೊಂದುಮಾಡಿ ತೋರಿ, ಸಮತೆ ಸೈರಣೆಯೆಂಬ ಭಕ್ತಿಪ್ರಭೆಯೊಳಗಿರಿಸಿ, ಗತಿಯತ್ತ ಹೊದ್ದಲೀಯದೆ, ಲಿಂಗದ ವ್ಯಾವರ್ಣನೆಯ ತೋರಿ, ಜಂಗಮವ ನಿರಾಕಾರಲಿಂಗವೆಂದು ತೋರಿ, ಆ ಜಂಗಮದ ಪ್ರಸಾದವ ತೋರಿದನು. ನಿರವಯದ ಹಾದಿಯ, ಬಸವಣ್ಣನಿಂದ ಕಂಡೆ ಕಾಣಾ ಕಲಿದೇವಯ್ಯ.
--------------
ಮಡಿವಾಳ ಮಾಚಿದೇವ
ಭಕ್ತಿಯೆಂಬ ಸಮಾಧಾನ ಬಸವಣ್ಣನಿಂದ ಎನಗಾಯಿತ್ತು. ಪ್ರಸಾದವೆಂಬ ಪರಿಣಾಮ ಮರುಳುಶಂಕರದೇವರಿಂದ ಎನಗಾಯಿತ್ತು. ಏಕೋಭಾವದ ನಿಷ್ಠೆ ಸಿದ್ಧರಾಮಯ್ಯದೇವರಿಂದ ಎನಗಾಯಿತ್ತು. ಸರ್ವಜೀವ ಪರಿಪೂರ್ಣಕಳೆ ಚನ್ನಬಸವಣ್ಣನಿಂದ ಎನಗಾಯಿತ್ತು. ಆದ (ಅದರ?) ನಿಜದ ನೆಲೆ ಗುಹೇಶ್ವರಲಿಂಗವೆಂಬ ನಾಮವಾಯಿತ್ತು.
--------------
ಅಲ್ಲಮಪ್ರಭುದೇವರು
ಅಯ್ಯಾ, ನಿಮ್ಮ ಸತ್‍ಕೃಪೆ! ಎನ್ನ ಸುಕೃತಾಂಗಿಯ ಮಾಡಿ ಮತ್ರ್ಯಕ್ಕೆ ತಂದಿರಯ್ಯಾ. ಅಯ್ಯಾ, ನಿಮ್ಮ ಕೃಪೆಯಿಂದ ನಿಷಾ*ಮಾಹೇಶ್ವರನೆನಿಪ ಅಮುಗಿದೇವಯ್ಯಗಳಿಂದ ಪ್ರಭುದೇವರೆಂಬ ಅನಾದಿ ಜಂಗಮವ ಕಂಡೆನಯ್ಯಾ. ಅಯ್ಯಾ, ನಿಮ್ಮ ಪ್ರಭುದೇವರೆಂಬ ಅನಾದಿ ಜಂಗಮರಿಂದ ಪರಮ ಗುರುವಪ್ಪ ಬಸವೇಶ್ವರನ ಕಂಡೆನಯ್ಯಾ. ಆ ಬಸವಣ್ಣನಿಂದ ಅಸಂಖ್ಯಾತ ಪ್ರಮಥಗಣಂಗಳ ಕಂಡೆನಯ್ಯಾ. ಆ ಗಣಂಗಳ ಕೃಪೆಯಿಂದ ಚೆನ್ನಬಸವಣ್ಣನ ಪಡೆದು ನಿಮ್ಮನಂಗದ ಮೇಲೆ ಸಾಹಿತ್ಯವ ಮಾಡಿಕೊಂಡೆನಯ್ಯಾ. ನಿಮ್ಮ ಸಾಹಿತ್ಯದ ಪ್ರಸನ್ನಮೂರ್ತಿ ಎನ್ನ ಕಣ್ಣಮುಂದೆ ಪ್ರತ್ಯಕ್ಷವಾಗಿಪ್ಪ ಮರುಳಶಂಕರದೇವರ ಶ್ರೀಪಾದವ ಕಂಡು ನಾನು ನಿಶ್ಚಯ ಕೃತಾರ್ಥನಾದೆನಯ್ಯಾ, ಕಪಿಲಸಿದ್ಧಮಲ್ಲಿನಾಥ ಪ್ರಭುವೇ, ನಿಮ್ಮ ಧರ್ಮ.
--------------
ಸಿದ್ಧರಾಮೇಶ್ವರ
ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವನಂತಪ್ಪ ನಿಧಾನ ದೊರಕಿತ್ತೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವನಂತಪ್ಪ ಪರುಷ ದೊರಕಿತ್ತೆನಗೆ. ಚೆನ್ನಸಂಗಾ ನಿಮ್ಮಲ್ಲಿ ಬಯಸಿ ಬೇಡುವಡೆ ಬಸವನಂತಪ್ಪ ಕಾಮಧೇನು ದೊರೆಯಿತ್ತೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವನಂತಪ್ಪ ಸುರತರು ದೊರಕಿತ್ತೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ತ್ರಿವಿಧ ತ್ರಿವಿಧ[ದ] ಮೊದಲನೆ ತೋರಿದ ಬಸವಣ್ಣನೆನಗೆ. ಚೆನ್ನಸಂಗಾ, ನಿಮ್ಮಲ್ಲಿ ಬಯಸಿ ಬೇಡುವಡೆ, ಬಸವಣ್ಣನಿಂದ ನೀವಾದಿರಾಗಿ, ಕೂಡಲಚೆನ್ನಸಂಗಯ್ಯನಲ್ಲಿ ಪ್ರಸಾದಿಯ ಪ್ರಸಾದಿಯಾದೆನು.
--------------
ಚನ್ನಬಸವಣ್ಣ
ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ ಐವರು ಮಕ್ಕಳು ಜನಿಸಿದರೆಂತೆಂಬೆ : ಒಬ್ಬ ಭಾವದ ರೂಪು, ಒಬ್ಬ ಪ್ರಾಣದ ರೂಪು. ಒಬ್ಬ ಕಾಯದ ರೂಪು, ಒಬ್ಬನೈಮುಖನಾಗಿ ವಿಷಯಕ್ಕೆ ಕಾಯರೂಪನಾದ. ಒಬ್ಬನೆಲ್ಲರ ಕೂಡಿಕೊಂಡು ನಿರವಯವಾಗಿರ್ಪ. ಇಂತಿವರ ಕೂಡಿಕೊಂಡು ಈ ಲೋಕಕ್ಕೆ ಬಂದೆನು. ಆನು ಹೋಗೆನಯ್ಯಾ, ಇನ್ನು ಹೋದೆನಾದಡೆ ಎನಗಿರ ಠಾವಿಲ್ಲ. ಮುನ್ನ ಹೋದವರೆಲ್ಲಾ ತಗಹಿನಲ್ಲಿ ಕುಳ್ಳಿರ್ದರು. ಆನು ಆ ತಗಹನರಿತೆನಾಗಿ ಬಲ್ಲಡೆ ಬಂದೆನಿಲ್ಲಿಗೆ. ಇಲ್ಲೆನ್ನೊ ಮದ್ದಳಿಗ, ಒಲ್ಲೆನ್ನೊ ಕಹಳೆಕಾರ. ಬಿಂದುವ ಹರಿದು ತಿಂದು ಹಾಕಿರೊ, ತಂತಿಯ ಹರಿಯಿರೊ. ತಾಳ ವಿತಾಳವಾಯಿತ್ತಲ್ಲಾ ಕೇಳಿರೆ ಕೇಳಿರೆ. ನಿಃಶೂನ್ಯವಾಯಿತ್ತಲ್ಲಾ ಕೇಳಯ್ಯ ಕೇಳಯ್ಯ. ರೇಕಣ್ಣಪ್ರಿಯ ನಾಗಿನಾಥಾ ಬಸವಣ್ಣನಿಂದ ಬದುಕಿತೀ ಲೋಕವೆಲ್ಲಾ.
--------------
ಬಹುರೂಪಿ ಚೌಡಯ್ಯ
ಯುಗಜುಗಂಗಳ ಅಳಿವು ಉಳಿವನರಿಯದೆ, ಹಗಲಿರುಳೆಂಬವ ನೆನಹಿನಲೂ ಅರಿಯದೆ, ಲಿಂಗದಲ್ಲಿ ಪರವಶವಾಗಿರ್ದ ಪರಮಪರಿಣಾಮಿಯನೇನೆಂದುಪಮಿಸುವೆನಯ್ಯಾ ? ಆಹಾ ! ಎನ್ನ ಮುಕ್ತಿಯ ಮುಕುರದ ಇರವ ನೋಡಾ. ಆಹಾ ! ಎನ್ನ ಸತ್ಯದಲ್ಲಿ ಸ್ವಾನುಭಾವದ ಕಳೆಯ ನೋಡಾ. ಆಹಾ ! ಅಷ್ಟತನುಗಳ ಪಂಗನಳಿದು, ನಿಬ್ಬೆರಗಾಗಿ ನಿಂದ ಚಿತ್ಸುಖಿಯ ನೋಡಾ. ಬಸವಪ್ರಿಯ ಕೂಡಲಚೆನ್ನಸಂಗಮದೇವಯ್ಯಾ, ಪರಮಪ್ರಸಾದಿ ಮರುಳಶಂಕರದೇವರ ನಿಲವ ಪ್ರಭು ಬಸವಣ್ಣನಿಂದ ಕಂಡು ಬದುಕಿದೆನು, ಬದುಕಿದೆನು.
--------------
ಸಂಗಮೇಶ್ವರದ ಅಪ್ಪಣ್ಣ
ಅಯ್ಯಾ, ನಿಮ್ಮ ಶರಣ ಬಸವಣ್ಣನಿಂದ ಲಿಂಗವ ಕಂಡು ಒಳಗೆ ಬೈಚಿಟ್ಟುಕೊಂಡೆನಯ್ಯಾ. ಅಯ್ಯಾ ನಿಮ್ಮ ಶರಣ ಬಸವಣ್ಣನಿಂದ ಲಿಂಗವ ಹಾಸಿ ಹೊದೆದುಕೊಂಡೆನಯ್ಯಾ. ಅಯ್ಯಾ, ನಿಮ್ಮ ಶರಣ ಬಸವಣ್ಣನಿಂದ ನಿರವಯವಾದೆನು. ಎಲೆ ಕಪಿಲಸಿದ್ಧಮಲ್ಲಿಕಾರ್ಜುನಯ್ಯಾ, ನಿಮ್ಮ ಶರಣ ಬಸವಣ್ಣಂಗೆ ನಮೋ ನಮೋ ಎನುತಿರ್ದೆನು.
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->