ಅಥವಾ

ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಘುಟಿಕಾಸಿದ್ಧರ ಘುಟಿಕೆಯುರುಳಿತ್ತು ಯಂತ್ರಿಗಳ ಯಂತ್ರ ಎದ್ದು ಹೋಯಿತ್ತು ಮಂತ್ರಿಗಳ ಮಂತ್ರ ಮರೆತುಹೋಯಿತ್ತು ಔಷಧಿಗರ ಔಷಧವನಾರಡಿಗೊಂಡಿತ್ತು ಸರ್ವವಿದ್ಯಾಮುಖದ ಜ್ಯೋತಿ ನಂದಿತ್ತು ಈ ವಿಷಯದ ಲಹರಿಯಲ್ಲಿ ಮೂರುಲೋಕದವರೆಲ್ಲರು ಮೂರ್ಛಿತರಾದರು ಕಾಣಾ ಗುಹೇಶ್ವರ.
--------------
ಅಲ್ಲಮಪ್ರಭುದೇವರು
ರಾತ್ರಿಯೆಂಬ ಹುತ್ತಿನೊಳಗೆ ನಿದ್ರೆಯೆಂಬ ಕಾಳೋರಗ, ಹೆಡೆಯನೆತ್ತಿ ಆಡಿ ಕಚ್ಚಲೊಡನೆ ಅಂಜನಸಿದ್ಧರ ಅಂಜನ ಕರಗಿತ್ತು, ಘುಟಿಕಾಸಿದ್ಧರ ಘುಟಿಕೆ ಉರುಳಿತ್ತು ಯಂತ್ರಿಗಳ ಯಂತ್ರ ಅದ್ದಿ ಹೋಯಿತ್ತು, ಮಂತ್ರಿಗಳ ಮಂತ್ರ ಮರೆತು ಹೋಯಿತ್ತು ಔಷಧಿಕರ ಔಷಧವನು ಆಳಿಗೊಂಡಿತ್ತು, ಸರ್ವ ವಿದ್ಯಾಮುಖದ ಜ್ಯೋತಿ ನಂದಿತ್ತು, ಇದರ ವಿಷವ ಪರಿಹರಿಸುವರನಾರನೂ ಕಾಣೆ. ಈ ರಾಹುವಿನ ವಿಷಯದಲ್ಲಿ ತ್ರಿಭುವನವೆಲ್ಲ ಮೂರ್ಛಿತವಾಗುತ್ತಿಹುದು ಗುಹೇಶ್ವರಾ
--------------
ಅಲ್ಲಮಪ್ರಭುದೇವರು
-->