ಅಥವಾ

ಒಟ್ಟು 4 ಕಡೆಗಳಲ್ಲಿ , 3 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇದವೆಂಬುದು ವೇದ್ಯರಿಗಲ್ಲದೆ ಸಾಧ್ಯವಲ್ಲ. ಅದೆಂತೆಂದಡೆ : ಬಿಂದು ವ್ಯಂಜನ ಗುರು ಲಘು ಸಮಾಸ ವಿಭಕ್ತಿಯ ನೇಮ ಬೀಜಾಕ್ಷರ ಐವತ್ತೆರಡರ ಭೇದದೊಳಗಲ್ಲದೆ, ಇಂತಿವೆಲ್ಲವೂ ಒಂದರಲ್ಲಿ ಹುಟ್ಟಿ, ಒಂದರಲ್ಲಿ ಬೆಳೆದು, ಒಂದರಲ್ಲಿ ಲಯವಹ ಕಾರಣ, ಇಂತೀ ವೇದಿಗಳೆಲ್ಲರೂ ವೇದಾಂತ ಸಿದ್ಧಾಂತದನುವನರಿಯದೆ, ಯಾಗವ ಮಾಡಿಹೆವೆಂದು ತಿಲ ಘೃತ ಸಮಿದೆ ಮೊದಲಾದ ಅಜಹತ ದಿಗ್ಭಂಧನಂಗಳಲ್ಲಿ ಪ್ರವರ್ತನ ಗ್ರಹಂಗಳಲ್ಲಿ ಕರ್ಮವ ಮಾಡಿ, ಅಗ್ನಿಗಾಹುತಿ ಕೊಟ್ಟಲ್ಲಿ , ಆತ ವೇದಾಂತನೆ ಬಲುರೋಗಾಂತನಲ್ಲದೆ ? ಇನ್ನು ವೇದಾಂತಸಿದ್ಧಿಯ ಕೇಳಿರೊ : ಪೂರ್ವದಲ್ಲಿ ಹುಟ್ಟುವದನರಿದು, ಮಧ್ಯದಲ್ಲಿ ಬೆಳೆವುದ ನಿಧಾನಿಸಿ, ಉತ್ತರದಲ್ಲಿ ಕಟ್ಟಕಡೆ ಎಂಬುದ ವಿಚಾರಿಸಿ ಲಕ್ಷಿಸಿ, ಇಂತೀ ತ್ರಿವಿಧದ ಭೇದವ ಕಿತ್ತುಹಾಕಿ, ಒಂ ಎಂಬ ಅರ್ಥವ ತಿಳಿದು, ನಯೆಂಬ ನಕಾರಮಂ ತಿಳಿದು, ನಾನಾರೆಂಬುದ ಭಾವಿಸಿ, ಮಯೆಂಬ ಮದರೂಪಂ ವರ್ಜಿಸಿ, ಶಿಯೆಂಬ ಶಿಕಾರವ ಸ್ವೀಕರಿಸಿ, ಯಯೆಂಬ ಯಕಾರವ ನಾಲ್ಕರಲ್ಲಿ ಏಕೀಕರಿಸಿದ ಮತ್ತೆ , ವೇದವೇದ್ಯನು ನೋಡಾ, ಲಲಾಮಬ್ಥಿಮಸಂಗಮೇಶ್ವರಲಿಂಗವು.
--------------
ವೇದಮೂರ್ತಿ ಸಂಗಣ್ಣ
ಬ್ರಹ್ಮಸಭೆ ನೆರೆದಲ್ಲಿ ಬ್ರಹ್ಮವಿತ್ತುಗಳು ಬ್ರಹ್ಮತ್ವವಡೆದು, ತಮ್ಮ ವಚನಬ್ರಹ್ಮರೆನಿಸಿಕೊಂಡು ನೆಮ್ಮುವರು ವಿಷ್ಣುವನು- ತಮ್ಮ ದೈವವ ಬಿಡುವುದಾವುದುಚಿತ ವಿಷ್ಣು ಶಿವಭಕ್ತನಾಗಿ ನಿಷ್ಠೆಯಿಂದ ಕಣ್ಣನಿತ್ತು ಹಡೆದನು ಶಿವಭಕ್ತಿಯಿಂದ. ಕಷ್ಟಜಾತಿ ಜೀವಿಗಳಿಗೆ ಮಟ್ಟಿ ಎಂತು ಬಂದತ್ತೊ ! ಮುಟ್ಟರೊಂದುವನು ಮೂವಿಧಿಬಟ್ಟರೊ ! ಹುಸಿವನೆ ಹೊಲೆಯನೆಂದು ವಚನವುಂಟು ಲೋಕದಲ್ಲಿ. ಹುಸಿದಜನ ಶಿರ ಹೋಯಿತ್ತಾದಿಯಲ್ಲಿ, ಎಸವೋದ ಕಿರುಪಶುವನುಸರಲೀಯದೆ ವಿ[ದಾರಿ]ಸಿ ತಿಂಬ ಜನ್ಮ ಅದಾವ ಫಲವೋ. ದಕ್ಷ ಯಾಗವ ಮಾಡಿ ನಿಕ್ಷೇತ್ರ ನೆರೆದ ಅಕಟಕಟಾ, ಕೇಳಿಯೂ ಏಕೆ ಮಾಣಿರೊ ಮಮಕರ್ತ ಕೂಡಲಸಂಗನ ಶರಣರು ಅಕ್ಷಯರದ್ಥಿಕರು, ವಿಪ್ರರು ಕೀಳು ಜಗವೆಲ್ಲರಿಯಲು !
--------------
ಬಸವಣ್ಣ
ಭಾವನೇಕೆ ಬಾರನೆನ್ನ ಮನೆಗೆ ? ಹರಿಯಮಗನನುರುಹಿದ ಗರುವದ ಭಾವನೇಕೆ ಬಾರನೆನ್ನ ಮನೆಗೆ ? ಅಸುರರ ಪುರವ ಸುಟ್ಟ ವೀರಭಾವನೇಕೆ ಬಾರನೆನ್ನ ಮನೆಗೆ ? ದಕ್ಷನ ಶಿರವನರಿದು, ಯಾಗವ ಕೆಡಿಸಿ ಕುರಿದಲೆಯ ಹತ್ತಿಸಿ ಬಿನ್ನಾಣದ ಬಲುಹ ಮೆರೆವ ಏಕೋಭಾವನೇಕೆ ಬಾರನೆನ್ನ ಮನೆಗೆ ? ಹರಿಯ ನಯನದ ಪೂಜೆ ಚರಣದಲೊಪ್ಪಿತ್ತೆಂಬ ದುರುಳತನವು ತನಗೆ ಬೇಡವ್ವಾ. ಪರವಧುವಿಂಗಳುಪಿ ಇಲ್ಲವೆಂಬ ವಿಗಡತನದ ದುರುಳತನ ಬೇಡವ್ವಾ. ಆತನ ಕರೆದು ತಾರವ್ವಾ, ಶಂಭುಜಕ್ಕೇಶ್ವರನ ನೆರೆದು ನೋಡುವೆನು.
--------------
ಸತ್ಯಕ್ಕ
ಅಂದಾ ತ್ರಿಪುರವನುರುಹಿದಾತ ವೀರ, ಅಂದಾ ದಕ್ಷನ ಯಾಗವ ಕೆಡಿಸಿದಾತ ವೀರ, ಕಡುಗಲಿ ನರಸಿಂಹನನುಗಿದಾತ ವೀರ, ನಮ್ಮ ಹರನ ಲಲಾಟದಲ್ಲಿ ಜನಿಸಿದಾತ ವೀರ, ನಮ್ಮ ಕೂಡಲಸಂಗನಲ್ಲಿ ಮಡಿವಾಳ ವೀರ.
--------------
ಬಸವಣ್ಣ
-->