ಅಥವಾ

ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿಂಗೆಂತು ನಾಳಿಂಗೆಂತು ಎಂದು- ಬೆಂದ ಒಡಲ ಹೊರೆಯ ಹೋಯಿತ್ತೆನ್ನ ಸಂಸಾರ ! ಹಿಂದೆ ನಾನಾ ಯೋನಿಯಲ್ಲಿ ಬಂದೆನೆಂಬ ಹೇಯವಿಲ್ಲ, ಮುಂದೆ ಮುಕ್ತಿಯಾಗಬೇಕೆಂಬ ಯುಕ್ತಿಯಿಲ್ಲ. ಎಂದೆಂದೂ ಸದಾಶಿವನ ಕುಂದದೆ ನೆನೆಯಲೀಯದೆ ಕೊಂದುದಯ್ಯಾ ಈ ಮಾಯೆ, ಕೂಡಲಸಂಗಮದೇವಾ. 17
--------------
ಬಸವಣ್ಣ
`ಯಸ್ಯ ಕ್ರಿಯಾ ತಸ್ಯ ಭವತಿ' ಎಂದು ಕಟ್ಟಾಚಾರದಲು ಇದ್ದು, ನಾನು ಅನುಸರಿಸಿಕೊಂಡು ನಡೆವನ್ನಕ್ಕ ಕರ್ಮಕಾಂಡಿಯಲ್ಲ. ಉತ್ಪತ್ತಿ-ಸ್ಥಿತಿ-ಭೋಗ-ಭುಕ್ತಿ ಕಾಯವುಳ್ಳನ್ನಕ್ಕ ಭಕ್ತಿಕಾಂಡಿಯಲ್ಲ, ಪರವು ಸಾಧ್ಯವಾಯಿತ್ತೆಂದು ಕ್ರೀಯೆಲ್ಲವ ಮೀರಿ ನಡೆವೆನು. ಪರತತ್ವವನರಿದೆಹೆನೆಂಬನ್ನಕ್ಕ ಜ್ಞಾನಕಾಂಡಿಯಲ್ಲ. ಇನ್ನು ಕರ್ಮಕಾಂಡ, ಭಕ್ತಿಕಾಂಡ, ಜ್ಞಾನಕಾಂಡ ಈ ತ್ರಿವಿಧದಲ್ಲಿ ವಂಚಕನಾದಡೆ ಈಸು ವಿಧದೊಳಗೆ ಅಂಗವಿಲ್ಲ, ಮೇಲೆ ಸತ್ಪುರುಷರ ಸಂಗವಿಲ್ಲ, ಯುಕ್ತಿಯಿಲ್ಲ, ಭಕ್ತಿಯೆಂತಹುದಯ್ಯಾ ಬಲ್ಲವರ ಬೆಸಗೊಂಡಡೆ ಎನ್ನ ಬಿಮ್ಮು ಕೆಟ್ಟಿಹುದೆಂದು ಮೆಲ್ಲನೆ ಪ್ರಸಂಗದಿಂದ ತಿಳಿದು ನೋಡುವೆ. ಕೂಡಲಸಂಗಮದೇವಾ, ಎನ್ನ ಗುಣವ ನೋಡದೆ ಶಿವರಾತ್ರಿಯ ಸಂಕಣ್ಣಗಳಿಗೆ ಕರುಣಿಸಿದಂತೆ ಎನಗೆ ಕೃಪೆಮಾಡಯ್ಯಾ.
--------------
ಬಸವಣ್ಣ
-->