ಅಥವಾ

ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೆಂಡಿರು_ಮಕ್ಕಳಿಗೆ ಕುಲದೈವ ಮನೆದೈವವಲ್ಲದೆ ಎನಗೆ ಕುಲದೈವ ಮನೆದೈವವಿಲ್ಲೆಂಬ ಭಂಡನ ಭಕ್ತಿಯ ಪರಿಯ ನೋಡಾ. [ಆ] ಯುಕ್ತಿಶೂನ್ಯಂಗೆ ಮುಂದೆ ದೃಷ್ಟವ ಹೇಳಿಹೆನು: ತನ್ನ ಹೆಂಡತಿ ಮತ್ತೊಬ್ಬನ ಮೆಚ್ಚಿಕೊಂಡು ಹೋಗುತ್ತಿರೆ, ಹೋದರೆ ಹೋಗಲಿ ಎಂದು ಸೈರಿಸಬಲ್ಲಡೆ ತಾನವರೊಳಗಲ್ಲ. ಅಕಟಕಟಾ ಲೌಕಿಕಕ್ಕೆ ಆಜ್ಞೆಯುಂಟು ಪಾರಮಾರ್ಥಕ್ಕೆ ಆಜ್ಞೆಯಿಲ್ಲವೆ ! ಇದು ಕಾರಣ_ಕೂಡಲಚೆನ್ನಸಂಗಯ್ಯಾ ಭಕ್ತನಾಗಿ ಭವಿಯ ಬೆರಸುವ ಅನಾಚಾರಿಯ ತೋರದಿರಯ್ಯಾ.
--------------
ಚನ್ನಬಸವಣ್ಣ
ಜನಮೆಚ್ಚೆ ಶುದ್ಧನಲ್ಲದೆ, ಮನಮೆಚ್ಚೆ ಶುದನಲ್ಲವಯ್ಯಾ ನುಡಿಯಲ್ಲಿ ಜಾಣನಲ್ಲದೆ, ನಡೆಯಲ್ಲಿ ಜಾಣನಲ್ಲವಯ್ಯಾ. ವೇಷದಲ್ಲಿ ಅಧಿಕನಲ್ಲದೆ, ಭಾಷೆಯಲ್ಲಿ ಅಧಿಕನಲ್ಲವಯ್ಯಾ. ಧನ ದೊರಕದಿದ್ದಡೆ ನಿಸ್ಪೃಹನಲ್ಲದೆ, ಧನ ದೊರಕಿ ನಿಸ್ಪೃಹನಲ್ಲವಯ್ಯಾ. ಏಕಾಂತದ್ರೋಹಿ, ಗುಪ್ತಪಾತಕ, ಯುಕ್ತಿಶೂನ್ಯಂಗೆ ಸಕಳೇಶ್ವರದೇವ ಒಲಿ ಒಲಿಯೆಂದೆಡೆ, ಎಂತೊಲಿವನಯ್ಯಾ?
--------------
ಸಕಳೇಶ ಮಾದರಸ
-->