ಒಟ್ಟು 2 ಕಡೆಗಳಲ್ಲಿ , 1 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಯೋಗಾಭ್ಯಾಸ ಯೋಗಾಭ್ಯಾಸವೆಂದೆಂಬಿರಿಯೋಗವು ಅಭ್ಯಾಸವೆ ? ಅಭ್ಯಾಸವು ಯೋಗವೆ ಅಯ್ಯಾ ?ಯೋಗಾಭ್ಯಾಸವೆಂಬನ್ನಕ್ಕ ತಾನಾ ಯೋಗಿಯೆ ಅಯ್ಯಾ ?ಯೋಗವ ನುಡಿವರೆ ಅಯ್ಯಾ ?ಗುರುಮತದಿಂ ಭಾವಿಸಲು ಸರ್ವವೂ ಪರಬ್ರಹ್ಮ,ಶ್ರೀಗುರುವಿನ ಶ್ರೀಪಾದಧ್ಯಾನವೇ ಯೋಗಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
ಅಯ್ಯಾ, ಯೋಗಾಭ್ಯಾಸ ಯೋಗಾಭ್ಯಾಸವೆಂದೆಂಬಿರಿ !ಂi್ಞೀಗವು ಅಭ್ಯಾಸವೆ ? ಯೋಗಾಭ್ಯಾಸವೆಂಬನ್ನಬರ ಅವನು ಯೋಗಿಯೆ ?ಶ್ರೀಗುರುಕಾರುಣ್ಯದಿಂದ ಸರ್ವವು ಪರಬ್ರಹ್ಮವೆಂದರಿವುದು.ಶ್ರೀಗುರುವಿನ ಶ್ರೀಪಾದಧ್ಯಾನವೆ ಯೋಗಾಭ್ಯಾಸವಯ್ಯಾ,ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.