ಅಥವಾ

ಒಟ್ಟು 4 ಕಡೆಗಳಲ್ಲಿ , 3 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯೋಗಿಯಲ್ಲ; ಜೋಗಿಯಲ್ಲ; ಶ್ರವಣನಲ್ಲ; ಸನ್ಯಾಸಿಯಲ್ಲ; ಕಾಳಾಮುಖಿಯಲ್ಲ; ಪಾಶುಪತಿಯಲ್ಲ; ಈ ಷಡುದರುಶನಂಗಳಾಚರಣೆಯಲ್ಲ. ಶರಣನಾಚರಣೆ ಬೇರೆ. ಆದಿಶೈವ, ಮಹಾಶೈವ, ಅನುಶೈವ, ಅಂತರಶೈವ, ಪ್ರವರಶೈವ, ಅಂತ್ಯಶೈವವೆಂಬ ಈ ಆರುಶೈವದ ನೀತಿಯಲ್ಲ. ಇಂತಿವೆಲ್ಲರ ಉತ್ಪತ್ತಿ ಸ್ಥಿತಿ ಲಯಂಗಳಿಗೆ ಕರ್ತ. ಶುದ್ಧ, ವಿಶೇಷ, ನಿರ್ವಾಣವೆಂದು ವೀರಶೈವ ಮೂರುತೆರನಾಗಿಪ್ಪುದು. ಆ ಮೂರು ತಾನೆ ಆರುತೆರನಾಗಿ ತೋರಿತ್ತದೆಂತೆಂದೊಡೆ: ಭಕ್ತ, ಮಹೇಶ್ವರ, ಪ್ರಸಾದಿ, ಪ್ರಾಣಲಿಂಗಿ, ಶರಣ, ಐಕ್ಯ ಎಂದು. ಇಂತೀ ಆರುಪ್ರಕಾರದಲ್ಲಿ ವರ್ತಿಸುತ್ತಿಹುದು ವೀರಶೈವ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಯ್ಯ ! ನಾಟಕನಲ್ಲ ಬೂಟಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಶೀಲಿಗನಲ್ಲ ಕಪಟನಾಟಕನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ರುಂಡಮಾಲಿಗನಲ್ಲ ಗುಂಡುಗಾಸಿಗನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಪುಲಿಚರ್ಮನಲ್ಲ ಗಜಚರ್ಮನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ದಕ್ಷಾಧ್ವರಸಂಹರನಲ್ಲ ತ್ರಿಪುರಾರಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ನಂದಿವಾಹನನಲ್ಲ ಭೃಂಗಿಸ್ತುತನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಸರ್ಪಧರನಲ್ಲ ಚಂದ್ರಶೇಖರನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಗಂಗಾಧರನಲ್ಲ ಗೌರಿಪ್ರಿಯನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಗಿರಿಜಾವಲ್ಲಭನಲ್ಲ ಪಾರ್ವತಿಪ್ರಿಯನಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಯೋಗಿಯಲ್ಲ ಜೋಗಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಶ್ರವಣನಲ್ಲ ಸನ್ಯಾಸಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಕಾಳಾಮುಖಿಯಲ್ಲ ಪಾಶುಪತಿಯಲ್ಲ ನೋಡ ! ನಿರವಯಶೂನ್ಯಲಿಂಗಮೂರ್ತಿ. ಇಂತು ಉಭಯವಳಿದ ಸಂಗನಬಸವಣ್ಣನ ಸರ್ವಾಂಗದಿ ಬೆಳಗುವ ಮಹಾಜ್ಯೋತಿ ತಾನೆ ನೋಡ ! ಗುಹೇಶ್ವರಲಿಂಗವು ಚೆನ್ನಬಸವಣ್ಣ.
--------------
ಅಲ್ಲಮಪ್ರಭುದೇವರು
ಜ್ಞಾನಲಿಂಗದ ಆದಿ ಅಂತ್ಯವನರಿವಡೆ, ಈ ಗುಣ ಸಾ[ಧಿ]ಸಿಯಲ್ಲದೆ ಯೋಗಿಯಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಜ್ಞಾನಕ್ಕೆ ಲೇಪವಾದವನಿರವು, ತುಪ್ಪವ ನಂಬಿದ ಬತ್ತಿಯಂತೆ, ಕಾದ ಲೋಹದ ಜಲದಿರವಿನಂತೆ, ನಾದವ ನುಂಗಿದ ಬಯಲಿನಂತೆ, ಚೋದ್ಯವ ಕಂಡ ಕನಸಿನಂತೆ, ಇದಾರಿಗೆ ಭೇದಕ ? ಇದ ಶೋಧಿಸಬೇಕು. ಲಿಂಗದಾದಿಯ ಅಂತುವನರಿದಡೆ, ಗುಣಸಂಗಿಯಲ್ಲದೆ ಯೋಗಿಯಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
-->