ಒಟ್ಟು 2 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಆವಾವ ತ್ರಿಗುಣಭೇದದಲ್ಲಿವಿಶ್ವಾಸವ ಮಾಡಿದಡೂ ಭಾವಶುದ್ಧವಾಗಿರಬೇಕು.ಯೋಗಿಯಾದಲ್ಲಿ ದೇಹಧರ್ಮವ ಮರೆದು, ಭೋಗಿಯಾದಲ್ಲಿ ಸಂಚಿತವಮರೆದು,ತ್ಯಾಗಿಯಾದಲ್ಲಿ ನೆನಹು ಹಿಂಚು ಕೊಡುವುದು ಮುಂಚಾಗಿರಬೇಕು.ಇಂತೀ ಯೋಗಿ ಭೋಗಿ ತ್ಯಾಗಿ,ಇಂತೀ ತ್ರಿವಿಧವನೊಳಕೊಂಡು ವಿರಕ್ತನಾದಲ್ಲಿಆತನ ಅಡಿಗೆರಗುವೆನೆಂದನಂಬಿಗ ಚೌಡಯ್ಯ.
ಜಂಗಮವಾಗಿ ಫಲವೇನಯ್ಯಾ, ಜಗದ ಹಂಗುದೊರೆಯದನ್ನಕ್ಕ?ಯೋಗಿಯಾದಲ್ಲಿ ಫಲವೇನಯ್ಯಾ, ನಿನ್ನಂಗ ಬರದನ್ನಕ್ಕ,ಎಲೆ ಕಪಿಲಸಿದ್ಧಮಲ್ಲಿಕಾರ್ಜುನಾ.